ಸತತ 14ನೇ ದಿನವೂ ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್, ಡೀಸೆಲ್ ಬೆಲೆ

ನವದೆಹಲಿ, ಜುಲೈ 31; ದೇಶದಲ್ಲಿ ಶನಿವಾರ ಕೂಡ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ದೇಶದ ಮೂರು ಪ್ರಮುಖ ಸರ್ಕಾರಿ ತೈಲ ಕಂಪನಿಗಳು ಇಂಧನ ಬೆಲೆಯಲ್ಲಿ ಜುಲೈ 31ರಂದು ಯಾವುದೇ ಪರಿಷ್ಕರಣೆ ಮಾಡಿಲ್ಲ ಎಂದು ತಿಳಿಸಿವೆ.

ಜುಲೈ ತಿಂಗಳ 17ರಂದು ಕೊನೆದಾಗಿ ಬೆಲೆ ಏರಿಕೆ ಮಾಡಲಾಗಿತ್ತು. ಆನಂತರ ದೇಶದಲ್ಲಿ ಇಂಧನ ಬೆಲೆಯಲ್ಲಿ ಯಾವುದೇ ಏರಿಕೆ ಮಾಡಲಾಗಿಲ್ಲ. ಸತತ 14ನೇ ದಿನವಾದ ಶನಿವಾರವೂ ಇಂಧನ ಬೆಲೆ ಸ್ಥಿರತೆ ಕಾಯ್ದುಕೊಂಡಿದೆ. ಎಲ್ಲಾ ಪ್ರಮುಖ ನಗರಗಳಲ್ಲಿಯೂ ಇಂಧನ ದರ ಸ್ಥಿರವಾಗಿದೆ.

ದೇಶದ ರಾಜಧಾನಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ 101.84 ರೂ ಇದ್ದರೆ, ಡೀಸೆಲ್ ಬೆಲೆ 89.87 ರೂ ಇದೆ.

Petrol, Diesel Rates Stable on July 31 across Karnataka

ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 40 ಬಾರಿ ಹಾಗೂ ಡೀಸೆಲ್ 37 ಬಾರಿ ಏರಿಕೆಯಾಗಿದ್ದು, ಜೂನ್ ತಿಂಗಳಲ್ಲೇ 21 ಬಾರಿ ಬೆಲೆ ಏರಿಕೆ ಮಾಡಲಾಗಿದೆ. ಜುಲೈ ತಿಂಗಳಿನಲ್ಲಿ ಎರಡು ಬಾರಿ ಬೆಲೆ ಏರಿಕೆ ಮಾಡಲಾಗಿತ್ತು. ಮೇ 4ರಿಂದ ಪೆಟ್ರೋಲ್ 11.15 ರೂ ಪ್ರತಿ ಲೀಟರ್ ಹಾಗೂ ಡೀಸೆಲ್ 10.80 ರೂ ಪ್ರತಿ ಲೀಟರ್ ಆಗಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ.

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 107.83 ರೂ ಪ್ರತಿ ಲೀಟರ್, ಡೀಸೆಲ್ 97.45 ರೂ ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ.

ಪೆಟ್ರೋಲ್ ಪ್ರತಿ ಲೀಟರ್‌ಗೆ 106 ರೂ ದಾಟಿದ ಜಿಲ್ಲೆಗಳು: ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 105.25 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 95.26 ರೂಪಾಯಿಗೆ ಮುಟ್ಟಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ ಅತ್ಯಧಿಕ 106.77ರೂ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 105.46 ರೂ ಆಗಿದೆ. ಚಿತ್ರದುರ್ಗ, ಬಳ್ಳಾರಿ, ತುಮಕೂರು, ದಾವಣಗೆರೆ, ಹಾವೇರಿ, ಕೊಡಗು, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲೂ ಬೆಲೆ 106 ಪ್ಲಸ್ ಇದೆ.

ಕಚ್ಚಾತೈಲ ಬೆಲೆ ಮೇ 2020ರಲ್ಲಿ 31 ಯುಎಸ್ ಡಾಲರ್ ಇದ್ದಿದ್ದು ಈಗ ಸರಾಸರಿ 75 ಡಾಲರ್ ಆಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರ ಕೂಡಾ ಪೆಟ್ರೋಲ್ ಮೇಲೆ 13 ರೂ, ಡೀಸೆಲ್ ಮೇಲೆ 16 ರೂ ಅಬಕಾರಿ ಸುಂಕ ಹೆಚ್ಚಳ ಮಾಡಿದೆ.

Petrol, Diesel Rates Stable on July 31 across Karnataka

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆ ಕಂಡು 76.28 ಯುಎಸ್ ಡಾಲರ್(1 USD=74.43ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 112.49ರು ನಷ್ಟಿದೆ, ಡೀಸೆಲ್ ಬೆಲೆ 102.95 ರೂ ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರೂ ಗಡಿ ದಾಟಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಜುಲೈ 31) ಸಚಿತ್ರ ಮಾಹಿತಿ ಇಲ್ಲಿದೆ.

ಚಿತ್ರ ವಿನ್ಯಾಸ: ಭರತ್ ಎಚ್. ಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+