ಆಗಸ್ಟ್ 14: ಬಳ್ಳಾರಿ ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ ಅತಿ ದುಬಾರಿ

ಬೆಂಗಳೂರು, ಆಗಸ್ಟ್ 14: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಆಗಸ್ಟ್ 14ರಂದು ಇಂಧನ ದರ ಪರಿಷ್ಕರಣೆ ಮಾಡಿಲ್ಲ. ಕಳೆದ 28 ದಿನಗಳಲ್ಲಿ ಇಂಧನ ದರ ಬದಲಾವಣೆಯಾಗದಿದ್ದರೂ, ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ಸತತವಾಗಿ ಪೆಟ್ರೋಲ್ ದರ 100ರು ಗಡಿ ದಾಟಿದೆ. ಪೆಟ್ರೋಲ್ 104 ರು ಕನಿಷ್ಠ 107 ರು ಗರಿಷ್ಠ ಇದೆ. ಇಡೀ ದೇಶದಲ್ಲಿ ಚೆನ್ನೈ ಹಾಗೂ ತಮಿಳುನಾಡಿನಲ್ಲಿ ಮಾತ್ರ ಪ್ರತಿ ಲೀಟರ್ 3ರು ಇಳಿಕೆಯಾಗಿದೆ.

ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 40 ಬಾರಿ ಹಾಗೂ ಡೀಸೆಲ್ 37 ಬಾರಿ ಏರಿಕೆಯಾಗಿದ್ದು, ಜೂನ್ ತಿಂಗಳಲ್ಲೇ 21 ಬಾರಿ ಬೆಲೆ ಏರಿಕೆ ಮಾಡಲಾಗಿದೆ. ಮೇ 4ರಿಂದ ಪೆಟ್ರೋಲ್ 11.15 ರು ಪ್ರತಿ ಲೀಟರ್ ಹಾಗೂ ಡೀಸೆಲ್ 10.80 ರು ಪ್ರತಿ ಲೀಟರ್ ಆಗಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ.

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 107.83ರು ಪ್ರತಿ ಲೀಟರ್, ಡೀಸೆಲ್ 97.45ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ.

Petrol, Diesel Rates unchanged on August 14 across Karnataka

ಪೆಟ್ರೋಲ್ ಪ್ರತಿ ಲೀಟರ್‌ಗೆ 106ರು ದಾಟಿದ ಜಿಲ್ಲೆಗಳು:
ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 105.25ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 95.26ರೂಪಾಯಿಗೆ ಮುಟ್ಟಿದೆ. ಬಳ್ಳಾರಿ ಜಿಲ್ಲೆಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 106.96 ಇದ್ದು, ರಾಜ್ಯದಲ್ಲೇ ಅತ್ಯಧಿಕವಾಗಿದೆ. ಚಿತ್ರದುರ್ಗ, ದಾವಣಗೆರೆ, ಹಾವೇರಿ, ಕೊಡಗು, ಕೊಪ್ಪಳ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬೆಲೆ 106 ಪ್ಲಸ್ ಇದೆ ಎಂದು ಗುಡ್‌ರಿಟರ್ನ್ಸ್.ಇನ್ ವರದಿ ಮಾಡಿದೆ.

ಕಚ್ಚಾತೈಲ ಬೆಲೆ ಮೇ 2020ರಲ್ಲಿ 31 ಯುಎಸ್ ಡಾಲರ್ ಇದ್ದಿದ್ದು ಈಗ ಸರಾಸರಿ 75 ಡಾಲರ್ ಆಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರ ಕೂಡಾ ಪೆಟ್ರೋಲ್ ಮೇಲೆ 13 ರು, ಡೀಸೆಲ್ ಮೇಲೆ 16 ರು ಅಬಕಾರಿ ಸುಂಕ ಹೆಚ್ಚಳ ಮಾಡಿದೆ.

ಮೇ 1, 2020ರಂದು ದೆಹಲಿಯಲ್ಲಿ ಪೆಟ್ರೋಲ್ ದರ 69.59ರು ಇತ್ತು, ಡೀಸೆಲ್ ರೀಟೈಲ್ ದರ 62.29 ರು ಇತ್ತು. ಜೊತೆಗೆ ತೆರಿಗೆ ರಹಿತ ದರ 27.95 ಪ್ರತಿ ಲೀಟರ್, ಡೀಸೆಲ್ 24.85 ಪ್ರತಿ ಲೀಟರ್ ನಷ್ಟಿತ್ತು.

Petrol, Diesel Rates unchanged on August 14 across Karnataka

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಗಸ್ಟ್ 10ರಂದು ಈ ಸಮಯಕ್ಕೆ ಕಚ್ಚಾತೈಲ ಬೆಲೆ ಏರಿಕೆ ಕಂಡು 71.34ಯುಎಸ್ ಡಾಲರ್(1 USD=74.29ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. . ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 112.49ರು ನಷ್ಟಿದೆ, ಡೀಸೆಲ್ ಬೆಲೆ 102.95ರು ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರು ಗಡಿ ದಾಟಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಆಗಸ್ಟ್ 14) ಸಚಿತ್ರ ಮಾಹಿತಿ ಇಲ್ಲಿದೆ. ಚಿತ್ರ ವಿನ್ಯಾಸ: ಭರತ್ ಎಚ್. ಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+