ಜುಲೈ 22: ಬಳ್ಳಾರಿ ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ ಅತಿ ದುಬಾರಿ
ಬೆಂಗಳೂರು, ಜುಲೈ 22: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಜುಲೈ 22ರಂದು ಇಂಧನ ದರ ಪರಿಷ್ಕರಣೆ ಮಾಡಿಲ್ಲ. ಕಳೆದ ಐದು ದಿನಗಳಲ್ಲಿ ಇಂಧನ ದರ ಬದಲಾವಣೆಯಾಗದಿದ್ದರೂ, ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ಸತತವಾಗಿ ಪೆಟ್ರೋಲ್ ದರ 100ರು ಗಡಿ ದಾಟಿದೆ. ಪೆಟ್ರೋಲ್ 104 ರು ಕನಿಷ್ಠ 107 ರು ಗರಿಷ್ಠ ಇದೆ.
ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 40 ಬಾರಿ ಹಾಗೂ ಡೀಸೆಲ್ 37 ಬಾರಿ ಏರಿಕೆಯಾಗಿದ್ದು, ಜೂನ್ ತಿಂಗಳಲ್ಲೇ 21 ಬಾರಿ ಬೆಲೆ ಏರಿಕೆ ಮಾಡಲಾಗಿದೆ. ಮೇ 4ರಿಂದ ಪೆಟ್ರೋಲ್ 11.15 ರು ಪ್ರತಿ ಲೀಟರ್ ಹಾಗೂ ಡೀಸೆಲ್ 10.80 ರು ಪ್ರತಿ ಲೀಟರ್ ಆಗಿದೆ.
ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 107.83ರು ಪ್ರತಿ ಲೀಟರ್, ಡೀಸೆಲ್ 97.45ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ.
ಪೆಟ್ರೋಲ್ ಪ್ರತಿ ಲೀಟರ್‌ಗೆ 106ರು ದಾಟಿದ ಜಿಲ್ಲೆಗಳು:
ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 105.25ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 95.26ರೂಪಾಯಿಗೆ ಮುಟ್ಟಿದೆ. ಬಳ್ಳಾರಿ ಜಿಲ್ಲೆಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ ಅತ್ಯಧಿಕ 107.39ರು ಇದ್ದು, ರಾಜ್ಯದಲ್ಲೇ ಅತ್ಯಧಿಕವಾಗಿದೆ. ಹಾವೇರಿ, ಶಿವಮೊಗ್ಗ, ದಾವಣಗೆರೆ, ಕೊಡಗು, ಉತ್ತರ ಕನ್ನಡ, ಯಾದಗಿರಿ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಬೆಲೆ 106 ಪ್ಲಸ್ ಇದೆ ಎಂದು ಗುಡ್ ರಿಟರ್ನ್ಸ್.ಇನ್ ವರದಿ ಮಾಡಿದೆ.
ಕಚ್ಚಾತೈಲ ಬೆಲೆ ಮೇ 2020ರಲ್ಲಿ 31 ಯುಎಸ್ ಡಾಲರ್ ಇದ್ದಿದ್ದು ಈಗ ಸರಾಸರಿ 75 ಡಾಲರ್ ಆಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರ ಕೂಡಾ ಪೆಟ್ರೋಲ್ ಮೇಲೆ 13 ರು, ಡೀಸೆಲ್ ಮೇಲೆ 16 ರು ಅಬಕಾರಿ ಸುಂಕ ಹೆಚ್ಚಳ ಮಾಡಿದೆ.
ಮೇ 1, 2020ರಂದು ದೆಹಲಿಯಲ್ಲಿ ಪೆಟ್ರೋಲ್ ದರ 69.59ರು ಇತ್ತು, ಡೀಸೆಲ್ ರೀಟೈಲ್ ದರ 62.29 ರು ಇತ್ತು. ಜೊತೆಗೆ ತೆರಿಗೆ ರಹಿತ ದರ 27.95 ಪ್ರತಿ ಲೀಟರ್, ಡೀಸೆಲ್ 24.85ಪ್ರತಿ ಲೀಟರ್ ನಷ್ಟಿತ್ತು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆ ಕಂಡು 71.88 ಯುಎಸ್ ಡಾಲರ್(1 USD=74.47ರು) ಪ್ರತಿ ಬ್ಯಾರೆಲ್‌ನಷ್ಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 112.49ರು ನಷ್ಟಿದೆ, ಡೀಸೆಲ್ ಬೆಲೆ 102.95ರು ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರು ಗಡಿ ದಾಟಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಜುಲೈ 22) ಸಚಿತ್ರ ಮಾಹಿತಿ ಇಲ್ಲಿದೆ. ಚಿತ್ರ ವಿನ್ಯಾಸ: ಭರತ್ ಎಚ್. ಸಿ.


-
Arecanut Price: ಶಿವಮೊಗ್ಗ ಮಾರುಕಟ್ಟೆಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? ಇಲ್ಲಿದೆ ಏಪ್ರಿಲ್ 09ರ ದರಪಟ್ಟಿ -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
ಹೈಟೆಕ್ ಬೆಂಗಳೂರು ಬಿಸಿನೆಸ್ ಕಾರಿಡಾರ್: 65ಮೀ ವಿಸ್ತರಣೆ, ಮೆಟ್ರೋ-ಸೈಕಲ್ ಟ್ರ್ಯಾಕ್ಗಳೂ ಲಭ್ಯ; ವಿನ್ಯಾಸ ವಿವರ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್












Click it and Unblock the Notifications