ಜುಲೈ 24ರಂದು ರಾಜ್ಯದ ಪ್ರಮುಖ ಪಟ್ಟಣಗಳಲ್ಲಿ ಎಷ್ಟಿದೆ ಪೆಟ್ರೋಲ್ ಬೆಲೆ?

ಬೆಂಗಳೂರು, ಜುಲೈ 24: ದೇಶದಲ್ಲಿ ಸತತ ಏಳನೇ ದಿನ ಇಂಧನ ಬೆಲೆ ಸ್ಥಿರತೆ ಕಾಯ್ದುಕೊಂಡಿದೆ. ಜುಲೈ 24ರಂದು ಇಂಧನ ಬೆಲೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಿಲ್ಲ ಎಂದು ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ತಿಳಿಸಿವೆ.

ಜೂನ್ ತಿಂಗಳಲ್ಲೇ 21 ಬಾರಿ ಇಂಧನ ಬೆಲೆ ಏರಿಕೆ ಮಾಡಲಾಗಿತ್ತು. ಜುಲೈ ತಿಂಗಳಿನಲ್ಲಿಯೂ ನಿರಂತರವಾಗಿ ಬೆಲೆ ಏರಿಕೆ ಮಾಡಲಾಗಿತ್ತು. ಇದೀಗ ವಾರದಿಂದ ಇಂಧನ ಬೆಲೆ ಸ್ಥಿರತೆ ಕಾಯ್ದುಕೊಂಡಿದ್ದು, ಜುಲೈ 24ರಂದು ಕೂಡ ಅದೇ ಬೆಲೆ ಮುಂದುವರೆದಿದೆ.

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಬೆಲೆ, ಲೀಟರ್ ಪೆಟ್ರೋಲ್‌ಗೆ 107.83 ರೂ, ಡೀಸೆಲ್‌ಗೆ 97.45 ರೂ ಬೆಲೆ ಇರುವುದಾಗಿ ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ದೆಹಲಿಯಲ್ಲಿ ಲೀಟರ್ ಪೆಟ್ರೋಲಿಗೆ 102 ರೂ ಆಗಿದೆ. ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ನೂರು ರೂಪಾಯಿ ಗಡಿ ದಾಟಿದೆ.

ಪ್ರತಿ ಲೀಟರ್‌ ಪೆಟ್ರೋಲ್‌ಗೆ 106 ರೂ ದಾಟಿದ ಜಿಲ್ಲೆಗಳು: ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 105.80 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 95.78 ರೂಪಾಯಿಗೆ ಮುಟ್ಟಿದೆ. ಬಳ್ಳಾರಿ ಜಿಲ್ಲೆಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ ಅತ್ಯಧಿಕ 107.23 ರೂ ಇದ್ದು, ರಾಜ್ಯದಲ್ಲೇ ಅತ್ಯಧಿಕವಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ ಕೊಂಚ ಇಳಿದಿದ್ದು, 105.74 ರೂ ಇದೆ. ಚಿತ್ರದುರ್ಗ, ಬೀದರ್, ದಾವಣಗೆರೆ, ಶಿವಮೊಗ್ಗ, ಕೊಡಗು, ಕೊಪ್ಪಳ, ಉತ್ತರ ಕನ್ನಡ, ಯಾದಗಿರಿ ಜಿಲ್ಲೆಗಳಲ್ಲೂ ಬೆಲೆ 106 ರೂ ಪ್ಲಸ್ ಇದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆ ಕಂಡು 73.53 ಯುಎಸ್ ಡಾಲರ್(1 USD=74.42ರು) ಪ್ರತಿ ಬ್ಯಾರೆಲ್‌ನಷ್ಟಿದೆ.

ಕಚ್ಚಾತೈಲ ಬೆಲೆ ಮೇ 2020ರಲ್ಲಿ 31 ಯುಎಸ್ ಡಾಲರ್ ಇದ್ದಿದ್ದು ಈಗ ಸರಾಸರಿ 75 ಡಾಲರ್ ಆಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರ ಕೂಡಾ ಪೆಟ್ರೋಲ್ ಮೇಲೆ 13 ರೂ, ಡೀಸೆಲ್ ಮೇಲೆ 16 ರೂ ಅಬಕಾರಿ ಸುಂಕ ಹೆಚ್ಚಳ ಮಾಡಿದೆ.

ಕಚ್ಚಾ ತೈಲ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರೂಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ರಾಜ್ಯದ ವಿವಿಧ ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ ಜುಲೈ 24ರಂದು ಎಷ್ಟಿದೆ? ಮುಂದಿದೆ ಮಾಹಿತಿ...

ಚಿತ್ರ ವಿನ್ಯಾಸ: ಭರತ್ ಎಚ್‌.ಸಿ.

 Petrol, Diesel Rates Unchanged On July 24 across Karnataka
 Petrol, Diesel Rates Unchanged On July 24 across Karnataka
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+