ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜುಲೈ 28: ಉತ್ತರ ಕನ್ನಡ ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ ಅತಿ ದುಬಾರಿ

|
Google Oneindia Kannada News

ಬೆಂಗಳೂರು, ಜುಲೈ 28: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಜುಲೈ 28ರಂದು ಇಂಧನ ದರ ಪರಿಷ್ಕರಣೆ ಮಾಡಿಲ್ಲ. ಕಳೆದ 10 ದಿನಗಳಲ್ಲಿ ಇಂಧನ ದರ ಬದಲಾವಣೆಯಾಗದಿದ್ದರೂ, ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ಸತತವಾಗಿ ಪೆಟ್ರೋಲ್ ದರ 100ರು ಗಡಿ ದಾಟಿದೆ. ಪೆಟ್ರೋಲ್ 104 ರು ಕನಿಷ್ಠ 107 ರು ಗರಿಷ್ಠ ಇದೆ.

ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 40 ಬಾರಿ ಹಾಗೂ ಡೀಸೆಲ್ 37 ಬಾರಿ ಏರಿಕೆಯಾಗಿದ್ದು, ಜೂನ್ ತಿಂಗಳಲ್ಲೇ 21 ಬಾರಿ ಬೆಲೆ ಏರಿಕೆ ಮಾಡಲಾಗಿದೆ. ಮೇ 4ರಿಂದ ಪೆಟ್ರೋಲ್ 11.15 ರು ಪ್ರತಿ ಲೀಟರ್ ಹಾಗೂ ಡೀಸೆಲ್ 10.80 ರು ಪ್ರತಿ ಲೀಟರ್ ಆಗಿದೆ.

ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 107.83ರು ಪ್ರತಿ ಲೀಟರ್, ಡೀಸೆಲ್ 97.45ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ.

Petrol, Diesel Rates unchanged on July 28 across Karnataka

ಪೆಟ್ರೋಲ್ ಪ್ರತಿ ಲೀಟರ್‌ಗೆ 106ರು ದಾಟಿದ ಜಿಲ್ಲೆಗಳು:
ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 105.25ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 95.26ರೂಪಾಯಿಗೆ ಮುಟ್ಟಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ ಅತ್ಯಧಿಕ 107.27ರು ಇದ್ದು, ರಾಜ್ಯದಲ್ಲೇ ಅತ್ಯಧಿಕವಾಗಿದೆ. ಚಿತ್ರದುರ್ಗ, ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಕೊಪ್ಪಳ, ತುಮಕೂರು ಜಿಲ್ಲೆಗಳಲ್ಲೂ ಬೆಲೆ 106 ಪ್ಲಸ್ ಇದೆ ಎಂದು ಗುಡ್ ರಿಟರ್ನ್ಸ್.ಇನ್ ವರದಿ ಮಾಡಿದೆ.

ಕಚ್ಚಾತೈಲ ಬೆಲೆ ಮೇ 2020ರಲ್ಲಿ 31 ಯುಎಸ್ ಡಾಲರ್ ಇದ್ದಿದ್ದು ಈಗ ಸರಾಸರಿ 75 ಡಾಲರ್ ಆಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರ ಕೂಡಾ ಪೆಟ್ರೋಲ್ ಮೇಲೆ 13 ರು, ಡೀಸೆಲ್ ಮೇಲೆ 16 ರು ಅಬಕಾರಿ ಸುಂಕ ಹೆಚ್ಚಳ ಮಾಡಿದೆ.

Petrol, Diesel Rates unchanged on July 28 across Karnataka

ಮೇ 1, 2020ರಂದು ದೆಹಲಿಯಲ್ಲಿ ಪೆಟ್ರೋಲ್ ದರ 69.59ರು ಇತ್ತು, ಡೀಸೆಲ್ ರೀಟೈಲ್ ದರ 62.29 ರು ಇತ್ತು. ಜೊತೆಗೆ ತೆರಿಗೆ ರಹಿತ ದರ 27.95 ಪ್ರತಿ ಲೀಟರ್, ಡೀಸೆಲ್ 24.85ಪ್ರತಿ ಲೀಟರ್ ನಷ್ಟಿತ್ತು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆ ಕಂಡು 73.68 ಯುಎಸ್ ಡಾಲರ್(1 USD=74.43ರೂ) ಪ್ರತಿ ಬ್ಯಾರೆಲ್‌ನಷ್ಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 112.49ರು ನಷ್ಟಿದೆ, ಡೀಸೆಲ್ ಬೆಲೆ 102.95ರು ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರು ಗಡಿ ದಾಟಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಜುಲೈ 28) ಸಚಿತ್ರ ಮಾಹಿತಿ ಇಲ್ಲಿದೆ. ಚಿತ್ರ ವಿನ್ಯಾಸ: ಭರತ್ ಎಚ್. ಸಿ.

English summary
Petrol Diesel Price Rate unchanged on Monday (July 28) across Karnataka. A litre of petrol now costs Rs 105.25, Diesel at Rs 95.26 per litre in Bengaluru. Check out prices of other towns of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X