ಜೂನ್ 17: ಕರ್ನಾಟಕದಲ್ಲಿ ಇಂಧನ ದರ ಸೆಂಚುರಿ ಬಾರಿಸಿದ ಜಿಲ್ಲೆಗಳಿವು

ಬೆಂಗಳೂರು, ಜೂನ್ 17: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಜೂನ್ 17ರಂದು ಇಂಧನ ದರ ಪರಿಷ್ಕರಣೆ ಮಾಡಿಲ್ಲ. ಮೇ 4ರಿಂದ ಇಲ್ಲಿ ತನಕ 26 ಬಾರಿ ಬೆಲೆ ಏರಿಕೆ ಮಾಡಲಾಗಿದೆ. ಮೇ ತಿಂಗಳಲ್ಲಿ 2021ರಲ್ಲಿ ದೇಶದೆಲ್ಲೆಡೆ ಪೆಟ್ರೋಲ್ 16ರು ಹಾಗೂ ಡೀಸೆಲ್ 18 ರು ಏರಿಕೆಯಾಗಿತ್ತು. ಜೂನ್ 16ರಂದು ಪೆಟ್ರೋಲ್ ಬೆಲೆ ಸರಾಸರಿ 25 ಪೈಸೆ ಪ್ರತಿ ಲೀಟರ್ ಹಾಗೂ ಡೀಸೆಲ್ ಸರಾಸರಿ 13 ಪೈಸೆ ಪ್ರತಿ ಲೀಟರ್‌ನಂತೆ ಏರಿಕೆಯಾಗಿತ್ತು.

Recommended Video

      ನಮ್ ಹೊಟ್ಟೆ ತುಂಬಿಲ್ಲ ಅಂದ್ರು ಗಾಡಿ ಹೊಟ್ಟೆ ತುಂಬಿಸಬೇಕು | Oneindia Kannada

      ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 102.82ರು ಪ್ರತಿ ಲೀಟರ್, ಡೀಸೆಲ್ 94.84ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ಸತತವಾಗಿ ಪೆಟ್ರೋಲ್ ದರ 100ರು ಗಡಿ ದಾಟಿದೆ.

      ಮೇ 2020ರಿಂದ ಇಂದಿನ ತನಕ ಪೆಟ್ರೋಲ್ ದರ 25 ರು ಹೆಚ್ಚಾಗಿದೆ. ಮೇ ತಿಂಗಳಲ್ಲಿ ದೆಹಲಿಯಲ್ಲಿ ಪೆಟ್ರೋಲ್ 3.94 ರು ಹಾಗೂ ಡೀಸೆಲ್ 4.47 ರು ಏರಿಕೆ ಕಂಡಿದೆ. ಕಚ್ಚಾತೈಲ ಬೆಲೆ ಮೇ 2020ರಲ್ಲಿ 31 ಯುಎಸ್ ಡಾಲರ್ ಇದ್ದಿದ್ದು ಈಗ ಸರಾಸರಿ 73ಡಾಲರ್ ಆಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರ ಕೂಡಾ ಪೆಟ್ರೋಲ್ ಮೇಲೆ 13 ರು, ಡೀಸೆಲ್ ಮೇಲೆ 16 ರು ಅಬಕಾರಿ ಸುಂಕ ಹೆಚ್ಚಳ ಮಾಡಿದೆ.

      Petrol, Diesel Rates unchanged on June 17 across Karnataka

      ಮೇ 1, 2020ರಂದು ದೆಹಲಿಯಲ್ಲಿ ಪೆಟ್ರೋಲ್ ದರ 69.59ರು ಇತ್ತು, ಡೀಸೆಲ್ ರೀಟೈಲ್ ದರ 62.29 ರು ಇತ್ತು. ಜೊತೆಗೆ ತೆರಿಗೆ ರಹಿತ ದರ 27.95 ಪ್ರತಿ ಲೀಟರ್, ಡೀಸೆಲ್ 24.85ಪ್ರತಿ ಲೀಟರ್ ನಷ್ಟಿತ್ತು.

      ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆ ಕಂಡು 73.90ಯುಎಸ್ ಡಾಲರ್(1 USD=73.66ರು) ಪ್ರತಿ ಬ್ಯಾರೆಲ್‌ನಷ್ಟಿದೆ. ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಅಲ್ಲದೇ ಮಹಾರಾಷ್ಟ್ರದ ಕೆಲ ಪಟ್ಟಣಗಳಲ್ಲೂ ಪೆಟ್ರೋಲ್ ಬೆಲೆ 100 ರು ಗಡಿ ದಾಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 107.79ರು ನಷ್ಟಿದೆ, ಡೀಸೆಲ್ ಬೆಲೆ 100.51ರು ಆಗಿದೆ.

      ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

      Petrol, Diesel Rates unchanged on June 17 across Karnataka

      ಶತಕ ಬಾರಿಸಿದ ಜಿಲ್ಲೆಗಳು:
      ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 99.89ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್‌ಗೆ 92.66ರೂಪಾಯಿಗೆ ಮುಟ್ಟಿದೆ.

      ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ,
      ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ದಾವಣಗೆರೆ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ತುಮಕೂರು, ಉತ್ತರ ಕನ್ನಡ, ಶಿವಮೊಗ್ಗದಲ್ಲಿ ಪೆಟ್ರೋಲ್ ಬೆಲೆ 100 ರು ಪ್ರತಿ ಲೀಟರ್ ದಾಟಿದೆ, ಚಾಮರಾಜನಗರದಲ್ಲಿ 99.99 ಪ್ರತಿ ಲೀಟರ್ ನಂತಿದೆ ಎಂದು ಗುಡ್ ರಿಟರ್ನ್ಸ್.ಇನ್ ವರದಿ ಮಾಡಿದೆ.

      ಬೆಳಗಾವಿಯಿಂದ ಕೋಲಾರ ತನಕ ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಜೂನ್ 17ರಂತೆ) ಸಚಿತ್ರ ಮಾಹಿತಿ ಇಲ್ಲಿದೆ. ವಿನ್ಯಾಸ: ಭರತ್ ಎಚ್.ಸಿ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+