ಅ.7ರಂದು ಯಾವ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?
ಬೆಂಗಳೂರು, ಅಕ್ಟೋಬರ್ 07: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಮತ್ತೆ ಏರಿಕೆಯಾಗಿದೆ. ಗುರುವಾರ ಇಂಧನ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ.
ಇನ್ನೂ ಕೆಲವು ದಿನ ತೈಲ ದರ ಏರಿಕೆ ಮುಂದುವರೆದರೆ, ಬಹುತೇಕ ನಗರಗಳಲ್ಲಿ ಡೀಸೆಲ್ ದರ ಕೂಡ ನೂರರ ಗಡಿ ದಾಟಲಿದೆ. ಮುಂಬೈನಲ್ಲಿ ಡೀಸೆಲ್ ದರ 99.55ರೂ. ಇದೆ.
ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಸತತ ಮೂರನೇ ದಿನ ಪೆಟ್ರೋಲ್, ಡೀಸೆಲ್ ದರವನ್ನು ಏರಿಕೆ ಮಾಡಿದ್ದು, ಸಾರ್ವಕಾಲಿಕ ದಾಖಲೆಯ ಮಟ್ಟವನ್ನ ದಾಟಿ ಹೋಗಿದೆ. ವಾಹನ ಸವಾರರಿಗೆ ದಿನದಿಂದ ದಿನಕ್ಕೆ ಜೇಬಿಗೆ ಕತ್ತರಿ ಬೀಳುತ್ತಿದ್ದು, ತೈಲ ಬೆಲೆ ಮತ್ತಷ್ಟು ದುಬಾರಿಯಾಗಿದೆ.

ದೇಶದ 20ಕ್ಕೂ ಹೆಚ್ಚು ನಗರಗಳಲ್ಲಿ ಪೆಟ್ರೋಲ್ ದರ 100ಕ್ಕಿಂತಲೂ ಹೆಚ್ಚಿದೆ. ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಮಹಾರಾಷ್ಟ್ರದಲ್ಲಿ ಹೆಚ್ಚಿನ ದರವಿದೆ. ದೇಶದಲ್ಲೇ ಅತಿ ಹೆಚ್ಚು ಪೆಟ್ರೋಲ್ ದರ ರಾಜಸ್ಥಾನದ ಶ್ರೀಗಂಗಾನಗರದಲ್ಲಿ ದಾಖಲಾಗಿದೆ. ಅಲ್ಲಿ ಪ್ರತಿ ಪೆಟ್ರೋಲ್‌ಗೆ 114.92 ರೂ. ಇದೆ.
ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ 103.24 ರೂ. ಇದ್ದರೆ, ಮುಂಬೈನಲ್ಲಿ 109 ರೂ. ದಾಟಿದೆ. ಕೋಲ್ಕತ್ತದಲ್ಲಿ 103.94 ರೂ, ಚೆನ್ನೈನಲ್ಲಿ 100.86 ರೂ ತಲುಪಿದೆ.
ಬಳ್ಳಾರಿಯಲ್ಲಿ ಪೆಟ್ರೋಲ್ ದರ 108.55 ರೂ, ಚಿತ್ರದುರ್ಗದಲ್ಲಿ 108.56 ರೂ, ದಾವಣಗೆರೆಯಲ್ಲಿ 108.20 ರೂ., ಶಿವಮೊಗ್ಗದಲ್ಲಿ 108.07 ರೂ, ಉತ್ತರ ಕನ್ನಡದಲ್ಲಿ 108.68 ರೂ. ಇದೆ.
ಬೆಂಗಳೂರಿನಲ್ಲಿ 106.83, ಬಿಜಾಪುರದಲ್ಲಿ 106.54, ಚಾಮರಾಜನಗರ 106.86 ರೂ., ಚಿಕ್ಕಬಳ್ಳಾಪುರ 106.57 ರೂ, ದಕ್ಷಿಣ ಕನ್ನಡ 106.20 ರೂ., ಧಾರವಾಡ 106.28, ಹಾಸನ 106.59 ರೂ, ಮಂಡ್ಯ 106.75 ರೂ. ಇದೆ.
ಇನ್ನು ಡೀಸೆಲ್ ದರ ಗಮಸುವುದಾದರೆ ಬಾಗಲಕೋಟೆಯಲ್ಲಿ 97.90 ರೂ, ಬೆಂಗಳೂರು 97.40 ರೂ, ದಾವಣಗೆರೆಯಲ್ಲಿ 98.53 ರೂ. ಕೊಡಗು 98.15 ರೂ., ಕೊಪ್ಪಳ 98.22 ರೂ., ರಾಯಚೂರು 98.07 ರೂ ಇದೆ.

ರಾಜಸ್ಥಾನ, ತೆಲಂಗಾಣ, ಮಧ್ಯಪ್ರದೇಶ ಹಾಗೂ ಒಡಿಶಾ ಹೆಚ್ಚು ವ್ಯಾಟ್, ಸೆಸ್ ವಿಧಿಸುತ್ತಿವೆ. ದೇಶದಲ್ಲಿ ಈ ರಾಜ್ಯಗಳಲ್ಲಿ ಇಂಧನ ದರ ದುಬಾರಿಯಾಗಿದೆ. ಅರುಣಾಚಲ ಪ್ರದೇಶ ಹಾಗೂ ಮಿಜೋರಾಂ ರಾಜ್ಯಗಳಲ್ಲಿ ಇಂಧನ ದರದ ಮೇಲೆ ತೆರಿಗೆ ಅತ್ಯಂತ ಕಡಿಮೆ ಇದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 114.46ರೂ ನಷ್ಟಿದೆ, ಡೀಸೆಲ್ ಬೆಲೆ 105.01ರೂ ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರೂ ಗಡಿ ದಾಟಿದೆ.
ಅಬಕಾರಿ ಸುಂಕ, ಡೀಲರ್ ಕಮಿಷನ್ ಮತ್ತು ವ್ಯಾಟ್ ಸೇರಿಸಿದ ನಂತರ, ಪೆಟ್ರೋಲ್‌ನ ಚಿಲ್ಲರೆ ಮಾರಾಟ ಬೆಲೆ ದ್ವಿಗುಣಗೊಳ್ಳುತ್ತದೆ. ವಿವಿಧ ಅಂಶಗಳು ಇಂಧನದ ಬೆಲೆಯ ಮೇಲೆ ಪ್ರಭಾವ ಬೀರುತ್ತವೆ. ಇವುಗಳಲ್ಲಿ ರೂಪಾಯಿಗಳಿಂದ ಯುಎಸ್ ಡಾಲರ್ ವಿನಿಮಯ ದರ, ಕಚ್ಚಾ ತೈಲದ ಬೆಲೆ, ಜಾಗತಿಕ ಸೂಚನೆಗಳು, ಇಂಧನದ ಬೇಡಿಕೆ ಇತ್ಯಾದಿಗಳು ಸೇರಿವೆ. ಅಂತರಾಷ್ಟ್ರೀಯ ಕಚ್ಚಾ ತೈಲ ಬೆಲೆಗಳು ಹೆಚ್ಚಾದಾಗ ಭಾರತದಲ್ಲೂ ಸಾಮಾನ್ಯವಾಗಿ ಬೆಲೆ ಏರಿಕೆಯಾಗುವುದು ವಾಡಿಕೆಯಾಗಿದೆ.
ಭಾರತದಲ್ಲಿ ಪೆಟ್ರೋಲ್ ದರಗಳನ್ನು ಪ್ರತಿದಿನ ಪರಿಷ್ಕರಿಸಲಾಗುತ್ತದೆ. ಪ್ರತಿದಿನ ಬೆಳಿಗ್ಗೆ 06:00 ಗಂಟೆಗೆ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಜಾಗತಿಕ ತೈಲ ಬೆಲೆಯಲ್ಲಿ ಒಂದು ನಿಮಿಷದ ವ್ಯತ್ಯಾಸವನ್ನು ಇಂಧನ ಬಳಕೆದಾರರು ಮತ್ತು ವಿತರಕರಿಗೆ ರವಾನಿಸಬಹುದು ಎಂದು ಇದು ಖಚಿತಪಡಿಸುತ್ತದೆ. ಇಂಧನದ ಬೆಲೆಯು ಅಬಕಾರಿ ಸುಂಕ, ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಮತ್ತು ಡೀಲರ್ ಕಮಿಷನ್ ಅನ್ನು ಒಳಗೊಂಡಿದೆ. ವ್ಯಾಟ್ ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತದೆ.
ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ, ಕರ್ನಾಟಕ, ಉತ್ತರಪ್ರದೇಶ, ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ಲಡಾಖ್, ಬಿಹಾರ, ಕೇರಳ, ಪಂಜಾಬ್, ಸಿಕ್ಕಿಂ ಹಾಗೂ ನಾಗಾಲ್ಯಾಂಡ್ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರೂ ದಾಟಿದೆ.
ನೋಯ್ಡಾದಲ್ಲಿ ಇದೇ ಮೊದಲ ಬಾರಿಗೆ ಪೆಟ್ರೋಲ್ 100 ರು ಗಡಿ ದಾಟಿದೆ. ರಾಜಸ್ಥಾನದಲ್ಲಿ ಡೀಸೆಲ್ ಬೆಲೆ ಕೂಡಾ 100 ರು ಪ್ಲಸ್ ಇದೆ. ಚೆನ್ನೈ, ಗುರುಗ್ರಾಮ, ಚಂಡೀಗಢ, ನೋಯ್ಡಾ ಹಾಗೂ ಲಕ್ನೋದಲ್ಲಿ 100ರುಗಿಂತ ಕೆಳಗಿದೆ.












Click it and Unblock the Notifications