Infographics: ಅ.16 ರಂದು ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ನವದೆಹಲಿ, ಅಕ್ಟೋಬರ್ 16: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ 36 ಪೈಸೆಗಳಷ್ಟು ಮತ್ತು ಡೀಸೆಲ್ ದರ 37 ಪೈಸೆ ಏರಿಕೆಯಾಗಿದೆ.

ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಶನಿವಾರ ದೇಶಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಹೆಚ್ಚಿಸಿದ್ದು, ಈ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 109.16ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 100.00 ರೂ ಗೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 105.49ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 94.22ರೂ ಗೆ ಏರಿಕೆಯಾಗಿದೆ.

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ ರೂ.111.43 ಕ್ಕೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 102.15 ರೂ ಗೆ ಏರಿಕೆಯಾಗಿದೆ.

Petrol Price And Diesel Rate Hiked On October 16 Across Karnataka

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ.

ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 35 ಪೈಸೆ ಏರಿಕೆಯಿಂದ 105.49 ರೂಪಾಯಿ ನಿಗದಿಯಾಗಿದೆ. ಡೀಸೆಲ್ ದರದಲ್ಲಿಯೂ 35 ಪೈಸೆ ಹೆಚ್ಚಳವಾಗಿದ್ದು, ಲೀಟರ್ ಡೀಸೆಲ್ ಬೆಲೆ 93.22 ರೂಪಾಯಿಗೆ ಏರಿಕೆಯಾಗಿದೆ. ಪ್ರಮುಖ ನಗರಗಳಲ್ಲಿ ಎಷ್ಟಿದೆ ಬೆಲೆ ಎಂಬ ಮಾಹಿತಿ ಇಲ್ಲಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 34 ಪೈಸೆ ಹೆಚ್ಚಳವಾಗಿದ್ದು, 111.43 ರೂಪಾಯಿಗೆ ಏರಿಕೆಯಾಗಿದೆ. ಲೀಟರ್ ಡೀಸೆಲ್ ದರ 102.15 ರೂಪಾಯಿ ನಿಗದಿಯಾಗಿದೆ. ಇನ್ನು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 106.11 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.33 ರೂಪಾಯಿಗೆ ಏರಿಕೆಯಾಗಿದೆ. ತಮಿಳುನಾಡಿನ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.70 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.59 ರೂಪಾಯಿ ಇದೆ.

Petrol Price And Diesel Rate Hiked On October 16 Across Karnataka

ಬಳ್ಳಾರಿಯಲ್ಲಿ ಪೆಟ್ರೋಲ್ ಬೆಲೆ 110ರೂ.ಗೆ ತಲುಪಿದೆ. ಬಾಗಲಕೋಟೆಯಲ್ಲಿ ಪೆಟ್ರೋಲ್ ದರ 109.94 ರೂ. ಇದೆ, ಶಿವಮೊಗ್ಗದಲ್ಲಿ ಕೂಡ ಪೆಟ್ರೋಲ್ ಬೆಲೆ 110.08ರೂ. ತಲುಪಿದೆ. ಯಾದಗಿರಿಯಲ್ಲೂ 110.30ರೂ.ಗೆ ತಲುಪಿದೆ. ತುಮಕೂರು, ಕೊಪ್ಪಳ, ಕೊಡಗು, ದಾವಣಗೆರೆಯಲ್ಲಿ ಪೆಟ್ರೋಲ್ ದರ 110 ರೂ. ಆಗಿದೆ. ಇನ್ನೂ ಡೀಸೆಲ್ ದರ ಬಳ್ಳಾರಿ, ದಾವಣಗೆರೆ, ಕೊಡಗು, ಕೊಪ್ಪಳ, ಯಾದಗಿರಿಯಲ್ಲಿ 101 ರೂ. ದಾಟಿದೆ.

ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ ಪೆಟ್ರೋಲ್ (ಪ್ರತಿ ಲೀಟರ್) ಅ. 16: 109.16 (36 ಪೈಸೆ ಏರಿಕೆ) ಅ. 15: 108.80 ಅ. 14: 108.44 ಅ. 13: 108.08 ಡೀಸೆಲ್ (ಪ್ರತಿ ಲೀಟರ್) ಅ. 16: 100.00 (37 ಪೈಸೆ ಏರಿಕೆ) ಅ. 15: 99.63 ಅ. 14: 99.26 ಅ. 13: 98.89

ಅಬಕಾರಿ ತೆರಿಗೆ, ಡೀಲರ್ ಕಮಿಷನ್ ಮತ್ತು ಹೀಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸೇರಿಸಿದ ನಂತರ, ಅದರ ಬೆಲೆ ಬಹುತೇಕ ದ್ವಿಗುಣಗೊಳ್ಳುತ್ತದೆ. ವಿದೇಶಿ ವಿನಿಮಯ ದರಗಳೊಂದಿಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆ ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿದಿನ ಬದಲಾಗುತ್ತವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+