Infographics: ಅ.23 ರಂದು ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ

ಬೆಂಗಳೂರು, ಅಕ್ಟೋಬರ್ 23: ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಅಕ್ಟೋಬರ್ 23 ರಂದು ಶನಿವಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗಿದೆ.

ಆ ಮೂಲಕ ಪ್ರಮುಖ ನಗರಗಳಲ್ಲಿ ಇಂಧನ ದರ ಗರಿಷ್ಠ ಮಟ್ಟ ತಲುಪಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 35 ಪೈಸೆ ಹೆಚ್ಚಳದೊಂದಿಗೆ ಪ್ರತೀ ಲೀಟರ್ ಪೆಟ್ರೋಲ್ ದರ ರೂ.107.24 ರೂಪಾಯಿ ಹಾಗೂ 35 ಪೈಸೆ ಏರಿಕೆ ಕಂಡ ಲೀಟರ್ ಡೀಸೆಲ್ ಬೆಲೆ 95.97 ರೂಪಾಯಿ ದಾಖಲಾಗಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ 34 ಪೈಸೆ ಹೆಚ್ಚಳದ ನಂತರ ಲೀಟರ್ ಪೆಟ್ರೋಲ್ ದರ 113.12ರೂಪಾಯಿ ಹಾಗೂ 37 ಪೈಸೆ ಏರಿಕೆ ಬಳಿಕ ಲೀಟರ್ ಡೀಸೆಲ್ ಬೆಲೆ 104.00 ರೂಪಾಯಿ ಇದೆ.

Petrol Price And Diesel Rate Hiked On October 23 Across Karnataka

ಇನ್ನು ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 30 ಪೈಸೆ ಹೆಚ್ಚಳದ ನಂತರ 104.22 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆಯಲ್ಲಿ 24 ಪೈಸೆ ಏರಿಕೆ ಬಳಿಕ 100.25 ರೂಪಾಯಿ ನಿಗದಿಯಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

Petrol Price And Diesel Rate Hiked On October 23 Across Karnataka

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 37 ಪೈಸೆ ಹೆಚ್ಚಳದ ನಂತರ ಲೀಟರ್ ಪೆಟ್ರೋಲ್ ದರ 110.98 ರೂಪಾಯಿ ಹಾಗೂ 37 ಪೈಸೆ ಏರಿಕೆ ಬಳಿಕ ಲೀಟರ್ ಡೀಸೆಲ್ ಬೆಲೆ 101.86 ರೂಪಾಯಿ ಇದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ನಂತರ ಸತತವಾಗಿ ಇಂಧನ ದರ ಏರಿಕೆಯಾಗುತ್ತಿದೆ. ಕರ್ನಾಟಕದಲ್ಲಿ ಪೆಟ್ರೋಲ್ ಪ್ರತಿ ಲೀಟರ್ 107 ರು ನಿಂದ 111 ರು ಗರಿಷ್ಠ ಇದೆ.

ರಾಜ್ಯದ ಯಾವ್ಯಾವ ನಗರದಲ್ಲಿ ಪೆಟ್ರೋಲ್ ಬೆಲೆ ಹೆಚ್ಚಿದೆ?
ಉತ್ತರ ಕನ್ನಡದಲ್ಲಿ 113.21 ರೂ., ಕೊಡಗಿನಲ್ಲಿ 112.50 ರೂ. ಬಾಗಲಕೋಟೆಯಲ್ಲಿ 111.64 ರೂ, ಬೀದರ್‌ನಲ್ಲಿ 111.51 ರೂ. ಚಾಮರಾಜನಗರದಲ್ಲಿ 111.06 ರೂ. ಇದೆ. ಉಡುಪಿ, ವಿಜಯಪುರ, ದಾರವಾಡ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಹಾಸನ. ಮೈಸೂರು, ಮಂಡ್ಯದಲ್ಲಿ 110 ರೂ ಇದೆ.

ರಾಜ್ಯದ ಯಾವ್ಯಾವ ಜಿಲ್ಲೆಗಳಲ್ಲಿ ಡೀಸೆಲ್ ಬೆಲೆ ಹೆಚ್ಚಿದೆ?
ಉತ್ತರ ಕನ್ನಡದಲ್ಲಿ 103.81 ರೂ ಇದೆ, ಕೊಡಗು 103.14 ರೂ., ಚಿತ್ರದುರ್ಗ 103.03 ರೂ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+