Infographics:ನ.02ರಂದು ಯಾವ ಪಟ್ಟಣದಲ್ಲಿ ಪೆಟ್ರೋಲ್ ಬೆಲೆಯಲ್ಲಿ ಏರಿಕೆ?

ಬೆಂಗಳೂರು, ನವೆಂಬರ್ 02: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ನವೆಂಬರ್ 02ರಂದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಿಸಿವೆ. ಮಂಗಳವಾರ ಪೆಟ್ರೋಲ್ ಬೆಲೆ 35 ಪೈಸೆ ಏರಿಕೆಯಾಗಿದ್ದು, ಡೀಸೆಲ್‌ ಬೆಲೆಯಲ್ಲಿ ಯಾವುದೇ ಏರಿಕೆಯಾಗಿಲ್ಲ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 110.44 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.42 ರೂಪಾಯಿಗೆ ಏರಿಕೆ ಆಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 115.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 106.62 ರೂಪಾಯಿ ನಿಗದಿಯಾಗಿದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 11.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.56 ರೂಪಾಯಿ ಇದೆ. ಇನ್ನು, ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 106.66 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 102.59 ರೂಪಾಯಿ ದಾಖಲಾಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 113.93 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 104.50 ರೂಪಾಯಿ ಇದೆ. ಹೈದಾರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 114.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 107.40 ರೂಪಾಯಿ ನಿಗದಿಯಾಗಿದೆ. ಸ್ಥಳೀಯ ತೆರಿಗೆಗಳು ಮತ್ತು ಸಾರಿಗೆ ವೆಚ್ಚಗಳನ್ನು ಅವಲಂಬಿಸಿ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತದೆ.

Petrol Rates Hiked On November 02 Across Karnataka

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ತಮಿಳುನಾಡಿನಂತೆ ಪುದುಚೇರಿ ಸರ್ಕಾರ ಕೂಡಾ ಪೆಟ್ರೋಲ್ ಮೇಲಿನ ತೆರಿಗೆ ತಗ್ಗಿಸಿದೆ. ಇದರಿಂದ ಪ್ರತಿ ಲೀಟರ್ ಮೇಲೆ ಸರಾಸರಿ 3 ರು ತಗ್ಗಿತ್ತು. ಹೀಗಾಗಿ ಇತರೆ ರಾಜ್ಯಗಳಿಗೆ ಹೋಲಿಸಿದರೆ ಇಲ್ಲಿ ಬೆಲೆ ಕಡಿಮೆಯಿದೆ. ಡೀಸೆಲ್ ಬೆಲೆ ಮಾತ್ರ ಏರಿಕೆಯಾಗಿದೆ.

Petrol Rates Hiked On November 02 Across Karnataka

ಜಾಗತಿಕವಾಗಿ ಕಚ್ಚಾತೈಲ ಬೆಲೆ ತೀವ್ರ ಏರಿಳಿತ ನಡುವೆಯೂ ಇಂಧನ ದರದಲ್ಲಿ ವ್ಯತ್ಯಾಸ ಕಂಡು ಬಂದಿರಲಿಲ್ಲ. ಪ್ರತಿ ಬ್ಯಾರೆಲ್ ಬೆಲೆ 66 ಯುಎಸ್ ಡಾಲರ್‌ಗಿಂತಲೂ ಕಡಿಮೆ ಮೊತ್ತಕ್ಕೂ ಕುಸಿದಿತ್ತು. ಆದರೆ, ನಂತರ ಚೇತರಿಸಿಕೊಂಡು 85 ಪ್ಲಸ್ ಡಾಲರ್ ಮೇಲಕ್ಕೇರಿದೆ. ತಮಿಳುನಾಡಿನ ಬಜೆಟ್‌ನಲ್ಲಿ ಪೆಟ್ರೋಲ್ ಮೇಲಿನ ರಾಜ್ಯ ತೆರಿಗೆಯನ್ನು ಪ್ರತಿ ಲೀಟರ್ ಮೇಲೆ 3 ರು ತಗ್ಗಿಸಿದ್ದು ಬಿಟ್ಟರೆ, ಉಳಿದೆಡೆ ಇಂಧನ ದರ ಪ್ರತಿ ಲೀಟರ್ ಮೇಲೆ 100 ರು ಬೆಲೆ ಇದ್ದೇ ಇದೆ.

ಉಳಿದಂತೆ, ಉಳಿದ ಎಲ್ಲಾ ರಾಜ್ಯಗಳಲ್ಲಿನ ಸೆಸ್, ವ್ಯಾಟ್ ಅಧಿಕವಾಗಿರುವುದರಿಂದ ಯಾವ ರಾಜ್ಯದಲ್ಲೂ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಮೇಲೆ 100 ರು ಗಿಂತ ತಗ್ಗಿಲ್ಲ. ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 56 ಬಾರಿ ಹಾಗೂ ಡೀಸೆಲ್ 51 ಬಾರಿ ಏರಿಕೆಯಾಗಿದೆ.

ಮೇ 4ರಿಂದ ಪೆಟ್ರೋಲ್ 11.15 ರು ಪ್ರತಿ ಲೀಟರ್ ಹಾಗೂ ಡೀಸೆಲ್ 10.80 ರು ಪ್ರತಿ ಲೀಟರ್ ಆಗಿದೆ. ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ, ಕರ್ನಾಟಕ, ಉತ್ತರಪ್ರದೇಶ, ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ಲಡಾಕ್, ಬಿಹಾರ, ಕೇರಳ, ಪಂಜಾಬ್, ಸಿಕ್ಕಿಂ ಹಾಗೂ ನಾಗಾಲ್ಯಾಂಡ್ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರು ಪ್ಲಸ್ ದಾಟಿದೆ. ಈ ಪೈಕಿ ಅನೇಕ ರಾಜ್ಯಗಳಲ್ಲಿ ವ್ಯಾಟ್, ಸೆಸ್ ದರ ಅಧಿಕವಾಗಿವೆ.

ಯಾವ ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ ಹೆಚ್ಚಿದೆ?
ಬಳ್ಳಾರಿಯಲ್ಲಿ 116.06, ಕೊಡಗಿನಲ್ಲಿ 115.35 ರೂ, ಚಿಕ್ಕಮಗಳೂರಿನಲ್ಲಿ 115,76 ರೂ., ದಾವಣಗೆರೆ 115.91, ರೂ.ಕೊಪ್ಪಳ 115.18 ರೂ ಇದೆ. ಕೋಲಾರ, ಬೆಂಗಳೂರು, ಮಂಡ್ಯ, ಮೈಸೂರು, ಧಾರವಾಡ, ಚಿಕ್ಕಬಳ್ಳಾಪುರದಲ್ಲಿ 113ರ ಆಸುಪಾಸಿನಲ್ಲಿದೆ.

ಯಾವ ಜಿಲ್ಲೆಗಳಲ್ಲಿ ಡೀಸೆಲ್ ಬೆಲೆ ಹೆಚ್ಚಿದೆ?
ದಾವಣಗೆರೆ 106.17 ರೂ., ಬಳ್ಳಾರಿ 106.67 ರೂ, ಚಿಕ್ಕಮಗಳೂರು 106.08, ಬಳ್ಳಾರಿ 106.47 ರೂ. ಇದೆ. ದಕ್ಷಿಣ ಕನ್ನಡದಲ್ಲಿ 103.69 ರೂ. ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+