Infographics:ನ.03ರಂದು ಯಾವ ಪಟ್ಟಣದಲ್ಲಿ ಪೆಟ್ರೋಲ್ ಬೆಲೆ ಎಷ್ಟಿದೆ?
ಬೆಂಗಳೂರು, ನವೆಂಬರ್ 03: ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ನವೆಂಬರ್ 03ರಂದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆ ಮಾಡಿಲ್ಲ. ಬುಧವಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸ್ಥಿರವಾಗಿದೆ.
ಸತತ ಏಳು ದಿನಗಳ ಕಾಲ ಏರಿಕೆ ಕಂಡಿದ್ದ ಪೆಟ್ರೋಲ್ ದರದಲ್ಲಿ ನವೆಂಬರ್ 3ರಂದು ಯಾವುದೇ ಏರಿಳಿತ ಕಂಡು ಬಂದಿಲ್ಲ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 110.04 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.42 ರೂಪಾಯಿ ನಿಗದಿಯಾಗಿದೆ. ಹೈದಾರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 114.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 107.40 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 113.93 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 104.50 ರೂಪಾಯಿ ಇದೆ.

ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 115.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 106.62 ರೂಪಾಯಿ ನಿಗದಿಯಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 106.66 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 102.59 ರೂಪಾಯಿ ನಿಗದಿಯಾಗಿದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 110.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.56 ರೂಪಾಯಿ ಇದೆ.
ಜನರ ಅತ್ಯವಶ್ಯಕ ವಸ್ತುವಾಗಿರುವ ಇಂಧನ ದರ ಏರಿಕೆಯಿಂದ ಜನ ಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಇನ್ನೊಂದೆಡೆ ರಾಜ್ಯ ಹಾಗೂ ಕೇಂದ್ರಗಳು ಪೆಟ್ರೋಲ್, ಡೀಸೆಲ್ ಮೇಲೆ ವಿಧಿಸಿರುವ ಸುಂಕವನ್ನು ಕಡಿತಗೊಳಿಸುವಂತೆ ಅಲ್ಲಲ್ಲಿ ಪ್ರತಿಭಟನೆಗಳು ನಡೆಯುತ್ತಿದೆ. ಆದರೆ ಸುಂಕ ಕಡಿತಗೊಳಿಸುವುದಿಲ್ಲ ಎಂದು ಈಗಾಗಲೇ ಕೇಂದ್ರ ಸ್ಪಷ್ಟನೆ ನೀಡಿದೆ.
ಈ ಮಧ್ಯೆ ಪೆಟ್ರೋಲ್, ಡೀಸೆಲ್ ದರ ಸದ್ಯಕ್ಕೆ ಕಡಿಮೆಯಾಗುವ ಮಾತಿರಲಿ, ಅದು ಇನ್ನಷ್ಟು ಹೆಚ್ಚಾಗಲಿದೆ ಎಂದು ಜಾಗತಿಕ ಹಣಕಾಸು ಸಂಸ್ಥೆ ಗೋಲ್ಡ್‌ಮನ್ ಸ್ಯಾಕ್ಸ್ ತಿಳಿಸಿದೆ. ಪ್ರಸ್ತುತ ಪ್ರತಿ ಬ್ಯಾರೆಲ್‌ಗೆ 85 ಡಾಲರ್ ಇರುವ ಬ್ರೆಂಟ್ ಕಚ್ಚಾ ತೈಲ ದರ ಮುಂದಿನ ವರ್ಷ ಶೇ.30ರಷ್ಟು ಹೆಚ್ಚಳದೊಂದಿಗೆ 110 ಡಾಲರ್‌ಗೆ ಏರಿಕೆಯಾಗುವ ನಿರೀಕ್ಷೆ ಇದೆ ಎಂದು ಸಂಸ್ಥೆಯ ವರದಿ ತಿಳಿಸಿದೆ. ಇತ್ತ ಬೆಲೆ ಏರಿಕೆಯಿಂದ ಕೋಪಗೊಂಡಿರುವ ಜನ ಸಾಮಾನ್ಯರು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹಿಡಿ ಶಾಪ ಹಾಕ್ತಿದ್ದಾರೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.
ಎಲ್ಲಾ ರಾಜ್ಯಗಳಲ್ಲಿನ ಸೆಸ್, ವ್ಯಾಟ್ ಅಧಿಕವಾಗಿರುವುದರಿಂದ ಯಾವ ರಾಜ್ಯದಲ್ಲೂ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಮೇಲೆ 100 ರು ಗಿಂತ ತಗ್ಗಿಲ್ಲ.
ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 56 ಬಾರಿ ಹಾಗೂ ಡೀಸೆಲ್ 51 ಬಾರಿ ಏರಿಕೆಯಾಗಿದೆ. ಮೇ 4ರಿಂದ ಪೆಟ್ರೋಲ್ 11.15 ರು ಪ್ರತಿ ಲೀಟರ್ ಹಾಗೂ ಡೀಸೆಲ್ 10.80 ರು ಪ್ರತಿ ಲೀಟರ್ ಆಗಿದೆ.
ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ, ಕರ್ನಾಟಕ, ಉತ್ತರಪ್ರದೇಶ, ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ಲಡಾಕ್, ಬಿಹಾರ, ಕೇರಳ, ಪಂಜಾಬ್, ಸಿಕ್ಕಿಂ ಹಾಗೂ ನಾಗಾಲ್ಯಾಂಡ್ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 110 ರು ಪ್ಲಸ್ ದಾಟಿದೆ. ಈ ಪೈಕಿ ಅನೇಕ ರಾಜ್ಯಗಳಲ್ಲಿ ವ್ಯಾಟ್, ಸೆಸ್ ದರ ಅಧಿಕವಾಗಿವೆ.
*ನವದೆಹಲಿ: ಪೆಟ್ರೋಲ್ 110.04ರೂ- ಡೀಸೆಲ್ 98.42 ರೂ
*ಕೋಲ್ಕತಾ: ಪೆಟ್ರೋಲ್ 110.49 ರೂ- ಡೀಸೆಲ್ 101.56ರೂ
*ಮುಂಬೈ: ಪೆಟ್ರೋಲ್ 115.85 ರೂ- ಡೀಸೆಲ್ 106.62 ರೂ
* ಚೆನ್ನೈ: ಪೆಟ್ರೋಲ್ 106.66 ರೂ- ಡೀಸೆಲ್ 102.59 ರೂ
*ಬೆಂಗಳೂರು: ಪೆಟ್ರೋಲ್ 113.93ರೂ- ಡೀಸೆಲ್ 104.50 ರೂ
*ತಿರುವನಂತಪುರಂ: ಪೆಟ್ರೋಲ್ 112.43ರೂ- ಡೀಸೆಲ್ 105.85ರೂ
*ಪಾಟ್ನಾ: ಪೆಟ್ರೋಲ್ 113.79 ರೂ- ಡೀಸೆಲ್ 105.07ರೂ
*ಹೈದರಾಬಾದ್: ಪೆಟ್ರೋಲ್ 114.49ರೂ- ಡೀಸೆಲ್ 107.40 ರೂ
*ನೋಯ್ಡಾ: ಪೆಟ್ರೋಲ್ 107.20ರೂ- ಡೀಸೆಲ್ 99.12ರೂ
*ಜೈಪುರ: ಪೆಟ್ರೋಲ್ 117.45 ರೂ- ಡೀಸೆಲ್ 108.39 ರೂ
ಯಾವ ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ ಹೆಚ್ಚಿದೆ?
ಬಳ್ಳಾರಿಯಲ್ಲಿ 116.06, ಕೊಡಗಿನಲ್ಲಿ 115.35 ರೂ, ಚಿಕ್ಕಮಗಳೂರಿನಲ್ಲಿ 115,76 ರೂ., ದಾವಣಗೆರೆ 115.91, ರೂ.ಕೊಪ್ಪಳ 115.18 ರೂ ಇದೆ. ಕೋಲಾರ, ಬೆಂಗಳೂರು, ಮಂಡ್ಯ, ಮೈಸೂರು, ಧಾರವಾಡ, ಚಿಕ್ಕಬಳ್ಳಾಪುರದಲ್ಲಿ 113ರ ಆಸುಪಾಸಿನಲ್ಲಿದೆ.
ಯಾವ ಜಿಲ್ಲೆಗಳಲ್ಲಿ ಡೀಸೆಲ್ ಬೆಲೆ ಹೆಚ್ಚಿದೆ?
ದಾವಣಗೆರೆ 106.17 ರೂ., ಬಳ್ಳಾರಿ 106.67 ರೂ, ಚಿಕ್ಕಮಗಳೂರು 106.08, ಬಳ್ಳಾರಿ 106.47 ರೂ. ಇದೆ. ದಕ್ಷಿಣ ಕನ್ನಡದಲ್ಲಿ 103.69 ರೂ. ಇದೆ.












Click it and Unblock the Notifications