ಬೆಂಗಳೂರಿನ ಯಾವ ಪ್ರದೇಶಗಳಲ್ಲಿ ಎಷ್ಟು ಮಳೆ ದಾಖಲು?
ಬೆಂಗಳೂರು, ಏಪ್ರಿಲ್ 24: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದಲೂ ಮಳೆಯಾಗುತ್ತಿದ್ದು, ಬೆಂಗಳೂರು ನಗರ ಪ್ರದೇಶಗಳಲ್ಲಿ ಶುಕ್ರವಾರ ಸಂಜೆ ಭಾರೀ ಮಳೆ ಸುರಿದಿದೆ. ಇದ್ದಕ್ಕಿದ್ದಂತೆ ಸುರಿದ ಮಳೆಯಿಂದಾಗಿ ಪ್ರಮುಖ ಪ್ರದೇಶಗಳ ರಸ್ತೆಗಳು ಜಲಾವೃತವಾಗಿದ್ದವು.
ನಗರದ ಪ್ರಮುಖ ಸ್ಥಳಗಳಾದ ಯಶವಂತಪುರ, ಮೆಜೆಸ್ಟಿಕ್, ಕಾರ್ಪೊರೇಷ್, ಮೇಖ್ರಿ ವೃತ್ತ, ಎಂಜಿ ರಸ್ತೆಯ ಸುತ್ತಮುತ್ತ ಮಳೆಯಾಗಿದೆ. ಗುಡುಗು ಮಿಂಚು ಸಹಿತ ಕೆಲವೆಡೆ ಭಾರೀ ಮಳೆ ಸುರಿದಿದೆ. ಶಿವಾನಂದ ವೃತ್ತ, ಕುರುಬರಹಳ್ಳಿ, ಯಲಹಂಕ ಏರ್‌ಪೋರ್ಟ್ ರಸ್ತೆ, ಮಲ್ಲೇಶ್ವರ, ದೊಮ್ಮಲೂರು, ಸಾರಕ್ಕಿ, ಬಸವನಗುಡಿ, ಕತ್ರಿಗುಪ್ಪೆ ಸುತ್ತಮುತ್ತ ಮಳೆಯಾಗಿದೆ.
ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನೂ ಹವಾಮಾನ ಇಲಾಖೆ ನೀಡಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಶುಕ್ರವಾರ ಈ ವರ್ಷದಲ್ಲಿ ಮೊದಲ ಬಾರಿ ಬೆಂಗಳೂರಿನಲ್ಲಿ 100 ಎಂಎಂ ಮಳೆ ದಾಖಲಾಗಿದೆ. ಶನಿವಾರ ಸಂಜೆ ಕೂಡ ಬೆಂಗಳೂರಿನಲ್ಲಿ ಭಾರೀ ಮಳೆ ಸುರಿಯಲಿರುವ ಸೂಚನೆ ನೀಡಲಾಗಿದೆ.

ಬೆಂಗಳೂರು ನಗರದಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆಯಾಗುತ್ತಿದ್ದು, ಇದೇ ರೀತಿ ಇನ್ನೂ ನಾಲ್ಕು ದಿನ ಮುಂದುವರೆಯುವ ಸಾಧ್ಯತೆ ಗಳಿವೆ.

ಬೆಂಗಳೂರಿನ ಪಶ್ಚಿಮ ವಲಯದಲ್ಲಿ 110 ಎಂಎಂ ಮಳೆಯಾಗಿದೆ. ಇಲ್ಲಿನ ದಯಾನಂದ ನಗರದಲ್ಲಿ ಗರಿಷ್ಠ ಮಳೆ ದಾಖಲಾಗಿದೆ. ಬೆಂಗಳೂರಿನ ಯಾವ ಭಾಗಗಳಲ್ಲಿ ಎಷ್ಟು ಮಳೆಯಾಗಿದೆ? ಯಾವ ವಾರ್ಡ್‌ನಲ್ಲಿ ಎಷ್ಟು ಮಳೆ ದಾಖಲಾಗಿದೆ ಎಂಬುದರ ವಿವರ ಇಲ್ಲಿದೆ...














Click it and Unblock the Notifications