Inforgraphics: ಕರ್ನಾಟಕದಲ್ಲಿ ಮುಂಗಾರು ಚುರುಕು; ಜುಲೈ 3ರವರೆಗೂ ಮಳೆ

ಬೆಂಗಳೂರು, ಜುಲೈ 01: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು ಮುಂದಿನ ಎರಡು ದಿನಗಳವರೆಗೂ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಉಳಿದಂತೆ ಹಲವು ಜಿಲ್ಲೆಗಳಲ್ಲಿ ಜುಲೈ 3ರವರೆಗೂ ಮಳೆ ಮುಂದುವರಿಯಲಿದೆ. ರಾಜ್ಯದಲ್ಲಿ ಇದರ ಹೊರತಾಗಿ ಯಾವುದೇ ರೀತಿ ಗಣನೀಯ ಪ್ರಮಾಣದ ಬದಾಲವಣೆಗಳಿಲ್ಲ ಎಂದು ತಿಳಿಸಿದೆ.

ರಾಜ್ಯದ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಹೇಗಿದೆ ವಾತಾವರಣ?

ಸಿಲಿಕಾನ್ ಸಿಟಿಯಲ್ಲಿ ಹೇಗಿದೆ ವಾತಾವರಣ?

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿಡ ವಾತಾವರಣವಿದ್ದು, ಗುಡುಗು ಸಹಿತ ಮಳೆಯಾಗಿದೆ. ನಗರದ ಕೆಲವು ಕಡೆಗಳಲ್ಲಿ ಒಂದೆರೆಡು ಬಾರಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದರ ಹೊರತಾಗಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಅದೇ ರೀತಿ ಮುಂದಿನ 48 ಗಂಟೆಗಳಲ್ಲಿ ಸಿಲಿಕಾನ್ ಸಿಟಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಇದೇ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ವಾತಾವರಣ?

ಮುಂದಿನ 24 ಗಂಟೆಗಳಲ್ಲಿ ವಾತಾವರಣ?

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲೂ ಭಾರೀ ಪ್ರಮಾಣದ ಮಳೆ ಆಗಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಯ ಒಂದೆರೆಡು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ

ಕರಾವಳಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ

ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ತೀರದಲ್ಲಿ ಗಾಳಿ ವೇಗವು ಪ್ರತಿ ಗಂಟೆಗೆ 40 ರಿಂದ 50 ಕಿಲೋ ಮೀಟರ್ ತಲುಪುವ ಸಾಧ್ಯತೆಯಿದ್ದು, ಈ ಅವಧಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ

ಬೆಂಗಳೂರಿನಲ್ಲಿ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 67ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 53 ಕಿ.ಮೀ ಆಗಿದೆ. ಬಾಗಲಕೋಟೆ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 55ರಷ್ಟು ತೇವಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 80ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 77ರಷ್ಟು ತೇವಾಂಶ ಇದೆ. ಮೈಸೂರು 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 56ರಷ್ಟು ತೇವಾಂಶ, ಬಳ್ಳಾರಿಯಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 44ರಷ್ಟು ತೇವಾಂಶ ದಾಖಲಾಗಿದೆ.

ರಾಯಚೂರು 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 60ರಷ್ಟು ತೇವಾಂಶ, ಚಿತ್ರದುರ್ಗ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 55ರಷ್ಟು ತೇವಾಂಶ, ಕಲಬುರಗಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 49ರಷ್ಟು ತೇವಾಂಶ, ಚಿಕ್ಕಮಗಳೂರು 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 61ರಷ್ಟು ತೇವಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+