Infographics: ಜುಲೈ 19ರ ತನಕ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು, ಜುಲೈ 14: ರಾಜ್ಯದ ಕೆಲವು ಕಡೆಗಳಲ್ಲಿ ಮುಂಗಾರಿನ ಅಬ್ಬರ ತಗ್ಗಿದೆ. ಆದರೆ ಮುಂದಿನ ಐದು ದಿನ ಮಳೆ ಮುಂದುವರಿಯಲಿದೆ. ಈ ಪೈಕಿ ಕರಾವಳಿ ಮತ್ತು ಮಲೆನಾಡಿನ ವಿವಿಧೆಡೆ ಮಾತ್ರ ಜುಲೈ 16ರವರೆಗೆ ಭಾರೀ ಪ್ರಮಾಣದಲ್ಲಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಂತರ ಜುಲೈ 19ರವರೆಗೆ ಇವೆರಡು ಭಾಗದ ಕೆಲವು ಕಡೆಗಳಲ್ಲಿ ಉತ್ತಮ ಮಳೆ ನಿರೀಕ್ಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಾಗೂ ಮಲೆನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಇದರ ಹೊರತಾಗಿ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಇಲ್ಲ ಎಂದು ರಾಜ್ಯ ಹವಾಮಾನ ಇಲಾಖೆಯು ಮಾಹಿತಿ ನೀಡಿದೆ. ಉತ್ತರ ಒಳನಾಡಿನ ಬೆಳಗಾವಿ ಸೇರಿ ಒಂದೆರಡು ಕಡೆ ಭಾರೀ ಮಳೆ ಬರುವ ಸಾಧ್ಯತೆ ಇದೆ.

ಮುಂದಿನ ಮೂರು ದಿನ (ಜು.17) ಬೆಳಗಾವಿಗೆ ಮತ್ತು ಕಲಬುರಗಿ ಜಿಲ್ಲೆ ಒಂದೆರಡು ಕಡೆಗಳಲ್ಲಿ ಒಂದು ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆ ಆಗಬಹುದು ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಹವಾಮಾನ ವಾತಾವರಣ

ಬೆಂಗಳೂರಿನಲ್ಲಿ ಹವಾಮಾನ ವಾತಾವರಣ

ಬೆಂಗಳೂರು ನಗರದಲ್ಲಿ ಜಿಟಿ ಜಿಟಿ ಮಳೆ ಮತ್ತೆ ಮುಂದುವರಿದಿದೆ. ಸಾಮಾನ್ಯವಾಗಿ ಮೋಡ ಕವಿದ ಹಾಗೂ ಚಳಿಯ ವಾತಾವರಣ ನಿರ್ಮಾಣವಾಗಿದೆ. ಉಳಿದಂತೆ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಅದೇ ರೀತಿ ಮುಂದಿನ ಐದು ದಿನವು ಸಹ ಸಿಲಿಕಾನ್ ಸಿಟಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಇದೇ ರೀತಿಯ ವಾತಾವರಣ ಮುಂದುವರಿಯಲಿದೆ. ಕೆಲವು ಕಡೆಗಳಲ್ಲಿ ಆಗಾಗ ಜಿಟಿ ಜಿಟಿ ಮಳೆ ಸುರಿಯದರೆ ಇನ್ನು ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂದಿನ 24 ಗಂಟೆಗಳ ಮಳೆ ಮುನ್ಸೂಚನೆ

ಮುಂದಿನ 24 ಗಂಟೆಗಳ ಮಳೆ ಮುನ್ಸೂಚನೆ

ಕರ್ನಾಟಕದ ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಎಲ್ಲಾ ಜಿಲ್ಲೆಗಳ ಹಲವು ಕಡೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರ ಜತೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಬೀಳುವ ಸಂಭವವಿದೆ. ಹಾಸನ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿಯಲ್ಲಿ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಕರಾವಳಿಯಲ್ಲಿ ಗಾಳಿಯ ವೇಗ 45-55 ಕಿ. ಮೀ.

ಕರಾವಳಿಯಲ್ಲಿ ಗಾಳಿಯ ವೇಗ 45-55 ಕಿ. ಮೀ.

ದಕ್ಷಿಣ ಒಳನಾಡಿನ ಹಾಸನ, ಕೊಡಗು, ಚಿಕ್ಕಮಗಳೂರಿನ ಜಿಲ್ಲೆಯ ಒಂದೆರೆಡು ಕಡೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಅತೀ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ ಮತ್ತು ಕಲಬುರಗಿಯಲ್ಲಿ ಸಾಧಾರಣದಿಂದ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಇದರ ಹೊರತು ಯಾವ ಭಾಗದಲ್ಲೂ ಗಮನಾರ್ಹ ಬದಲಾಣೆಗಳು ಇಲ್ಲ. ಮುಂದಿನ 48 ಗಂಟೆಗಳಲ್ಲಿ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ ಸುಮಾರು 45-55 ಕಿಲೋ ಮೀಟರ್ ಇರಲಿದೆ. ಈ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ಸಂದೇಶವನ್ನು ನೀಡಲಾಗಿದೆ.

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ

ಬೆಂಗಳೂರಿನಲ್ಲಿ 25 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 64ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 78 ಕಿ.ಮೀ ಆಗಿದೆ. ಬಾಗಲಕೋಟೆ 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 65ರಷ್ಟು ತೇವಾಂಶ, ಮಂಗಳೂರಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 74ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 25 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 75ರಷ್ಟು ತೇವಾಂಶ ಇದೆ. ಮೈಸೂರು 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 60 ತೇವಾಂಶ, ಬಳ್ಳಾರಿಯಲ್ಲಿ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 73ರಷ್ಟು ತೇವಾಂಶ ದಾಖಲಾಗಿದೆ.

ರಾಯಚೂರು 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 45ರಷ್ಟು ತೇವಾಂಶ, ಚಿತ್ರದುರ್ಗ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 67ರಷ್ಟು ತೇವಾಂಶ, ಕಲಬುರಗಿ 28ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 70ರಷ್ಟು ತೇವಾಂಶ, ಚಿಕ್ಕಮಗಳೂರು 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 74ರಷ್ಟು ತೇವಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+