Inforgraphics: ಏ.2ರಂದು ಕರ್ನಾಟಕದಲ್ಲಿ ಹವಾಮಾನ ವರದಿ
ಬೆಂಗಳೂರು, ಏಪ್ರಿಲ್ 2: ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರೆಡು ಕಡೆಯಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣಹಣೆ ಇತ್ತು ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಒಂದೆರೆಡು ಕಡೆಗಳಲ್ಲಿ ಮಳೆಯಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ, ಪೊನ್ನಂಪೇಟೆ, ಸೋಮವಾರ ಪೇಟೆ, ಹಾಸನ ಜಿಲ್ಲೆಯ ಕೊಣನೂರು, ರಾಮನಗರ ಜಿಲ್ಲೆಯ ಮಾಗಡಿ, ದಕ್ಷಿಣ ಕನ್ನಡ ಜಿಲ್ಲೆಯ ಪಣಂದೂರು, ಸುಬ್ರಹ್ಮಣ್ಯ, ಚಿಕ್ಕಮಗಳೂರು ಜಿಲ್ಲೆಯ ಜಯಪುರ, ಬಾಳೆಹೊನ್ನೂರು ಮತ್ತು ಮೈಸೂರು ಜಿಲ್ಲೆಯ ಸರಗೂರು, ಹೆಚ್ ಡಿ ಕೋಟೆ, ಹೆಚ್ ಡಿ ಕೋಟೆ ಮತ್ತು ಹುಣಸೂರು ಪ್ರದೇಶಗಳಲ್ಲಿ ಮಳೆಯಾಗಿದೆ.
ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹೊರನೋಟವನ್ನು ನೋಡುವುದಾದರೆ ವಾತಾವರಣದಲ್ಲಿ ಯಾವುದೇ ದೊಡ್ಡ ಪ್ರಮಾಣದ ಬದಲಾವಣೆಗಳು ಆಗುವುದಿಲ್ಲ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಹೇಗಿದೆ ವಾತಾವರಣ?
ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿಡ ವಾತಾವರಣವಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಜುಕಿನ ವಾತಾವರಣ ನಿರ್ಮಾಣವಾಗಲಿದ್ದು, ಬೆಂಗಳೂರಿನಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 23 ಡಿಗ್ರಿ ತೇವಾಂಶ ದಾಖಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ವಾತಾವರಣ?
ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 41.60 ಡಿಗ್ರಿ ಸೆಲ್ಸಿಯಸ್ ಆಗಿದ್ದು, ಅತಿಹೆಚ್ಚಿನ ಉಷ್ಣಾಂಶವು ಕಲಬುರಗಿ ಜಿಲ್ಲೆಯಲ್ಲಿ ದಾಖಲಾಗಿದೆ. ಇನ್ನು ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದ ಒಂದೆರೆಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಗಳು ಹೆಚ್ಚಾಗಿವೆ.

ರಾಜ್ಯದಲ್ಲಿ ಮುಂದಿನ 48 ಗಂಟೆಗಳ ಹವಾಮಾನ ಚಿತ್ರಣ
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯದ ಒಂದೆರೆಡು ಕಡೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ
ಬೆಂಗಳೂರಿನಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 45ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 14 ಕಿ.ಮೀ ಆಗಿದೆ. ಬಾಗಲಕೋಟೆ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27ರಷ್ಟು ತೇವಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ , 69ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 41ರಷ್ಟು ತೇವಾಂಶ ಇದೆ. ಮೈಸೂರು 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 50ರಷ್ಟು ತೇವಾಂಶ, ಬಳ್ಳಾರಿಯಲ್ಲಿ 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 37ರಷ್ಟು ತೇವಾಂಶ ದಾಖಲಾಗಿದೆ.
ರಾಯಚೂರು 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22ರಷ್ಟು ತೇವಾಂಶ, ಚಿತ್ರದುರ್ಗ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24ರಷ್ಟು ತೇವಾಂಶ, ಕಲಬುರಗಿ 41 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16ರಷ್ಟು ತೇವಾಂಶ, ಚಿಕ್ಕಮಗಳೂರು 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22ರಷ್ಟು ತೇವಾಂಶ ದಾಖಲಾಗಿದೆ.












Click it and Unblock the Notifications