Inforgraphics: ರಾಜ್ಯದ ವಿವಿಧೆಡೆ ಏಪ್ರಿಲ್ 7ರವರೆಗೂ ಮಳೆ ನಿರೀಕ್ಷೆ
ಬೆಂಗಳೂರು, ಏಪ್ರಿಲ್ 5: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್ 7ರ ಗುರುವಾರ ಬೆಳಗ್ಗೆಯವರೆಗೂ ಮಳೆ ಬೀಳುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರೆಡು ಕಡೆಯಲ್ಲಿ ಮಂಗಳವಾರ ಗುಡುಗು ಸಹಿತ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣಹಣೆ ಮುಂದುವರಿದಿದೆ.
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ, ಬೀದರ್ ಜಿಲ್ಲೆಯ ಮಂಥಾಲ, ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿ, ಹಾವೇರಿ ಜಿಲ್ಲೆಯ ಹಾವೇರಿ ನಗರ ಹಾಗೂ ಬ್ಯಾಡಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆಯಾಗಿದೆ.
ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಒಂದೆರೆಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಇದರ ಹೊರತಾಗಿ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಆಗುವುದಿಲ್ಲ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಹೇಗಿದೆ ವಾತಾವರಣ?
ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿಡ ವಾತಾವರಣವಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಜುಕಿನ ವಾತಾವರಣ ನಿರ್ಮಾಣವಾಗಲಿದ್ದು, ಬೆಂಗಳೂರಿನಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 22 ಡಿಗ್ರಿ ತೇವಾಂಶ ದಾಖಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ವಾತಾವರಣ?
ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 40.50 ಡಿಗ್ರಿ ಸೆಲ್ಸಿಯಸ್ ಆಗಿದ್ದು, ಅತಿಹೆಚ್ಚಿನ ಉಷ್ಣಾಂಶವು ಕಲಬುರಗಿ ಜಿಲ್ಲೆಯಲ್ಲಿ ದಾಖಲಾಗಿದೆ. ಇನ್ನು ಮುಂದಿನ 48 ಗಂಟೆಗಳಲ್ಲಿ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ದಕ್ಷಿಣ ಒಳನಾಡು ಜಿಲ್ಲೆಗಳಾದ ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗದ ಒಂದೆರೆಡು ಕಡೆಗಳಲ್ಲಿ ಮಳೆ ಬೀಳಲಿದೆ.

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ
ಬೆಂಗಳೂರಿನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 25ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 25 ಕಿ.ಮೀ ಆಗಿದೆ. ಬಾಗಲಕೋಟೆ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21ರಷ್ಟು ತೇವಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ , 58ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22ರಷ್ಟು ತೇವಾಂಶ ಇದೆ. ಮೈಸೂರು 36 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 29ರಷ್ಟು ತೇವಾಂಶ, ಬಳ್ಳಾರಿಯಲ್ಲಿ 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21ರಷ್ಟು ತೇವಾಂಶ ದಾಖಲಾಗಿದೆ.

ರಾಯಚೂರು 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19ರಷ್ಟು ತೇವಾಂಶ, ಚಿತ್ರದುರ್ಗ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20ರಷ್ಟು ತೇವಾಂಶ, ಕಲಬುರಗಿ 40 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17ರಷ್ಟು ತೇವಾಂಶ, ಚಿಕ್ಕಮಗಳೂರು 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26ರಷ್ಟು ತೇವಾಂಶ ದಾಖಲಾಗಿದೆ.












Click it and Unblock the Notifications