Rain in Karnataka: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

ಬೆಂಗಳೂರು, ಏಪ್ರಿಲ್ 8: ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಯ ಒಂದೆರೆಡು ಕಡೆಯಲ್ಲಿ ಶುಕ್ರವಾರ ಗುಡುಗು ಸಹಿತ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣಹಣೆ ಮುಂದುವರಿದಿದೆ. ಉತ್ತರ ಕನ್ನಡ ಜಿಲ್ಲೆಯ ಜಗಲಬೆಟ್, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ವಿಜಯಪುರ ಜಿಲ್ಲೆಯ ಜಲ್ಕಿ ಪ್ರದೇಶದಲ್ಲಿ ಗುರುವಾರ ಅಲ್ಪ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಜಿಲ್ಲೆಯ ಒಂದೆರೆಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಇದರ ಹೊರತಾಗಿ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಆಗುವುದಿಲ್ಲ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Rain Thundershowers Very Likely to Occur at Isolated Places Over the State From April 8

ಸಿಲಿಕಾನ್ ಸಿಟಿಯಲ್ಲಿ ಹೇಗಿದೆ ವಾತಾವರಣ?

ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿಡ ವಾತಾವರಣವಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಜುಕಿನ ವಾತಾವರಣ ನಿರ್ಮಾಣವಾಗಲಿದ್ದು, ಬೆಂಗಳೂರಿನಲ್ಲಿ 36 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 22 ಡಿಗ್ರಿ ತೇವಾಂಶ ದಾಖಲಾಗಿದೆ.

Rain Thundershowers Very Likely to Occur at Isolated Places Over the State From April 7

ಮುಂದಿನ 24 ಗಂಟೆಗಳಲ್ಲಿ ವಾತಾವರಣ?

ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 40.40 ಡಿಗ್ರಿ ಸೆಲ್ಸಿಯಸ್ ಆಗಿದ್ದು, ಅತಿಹೆಚ್ಚಿನ ಉಷ್ಣಾಂಶವು ಕಲಬುರಗಿ ಜಿಲ್ಲೆಯಲ್ಲಿ ದಾಖಲಾಗಿದೆ. ಇನ್ನು ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರೆಡು ಕಡೆಗಳಲ್ಲಿ ಮಳೆ ಬೀಳಲಿದೆ.

Rain Thundershowers Very Likely to Occur at Isolated Places Over the State From April 7

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ

ಬೆಂಗಳೂರಿನಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 21ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 21 ಕಿ.ಮೀ ಆಗಿದೆ. ಬಾಗಲಕೋಟೆ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20ರಷ್ಟು ತೇವಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ , 55ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27ರಷ್ಟು ತೇವಾಂಶ ಇದೆ. ಮೈಸೂರು 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21ರಷ್ಟು ತೇವಾಂಶ, ಬಳ್ಳಾರಿಯಲ್ಲಿ 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21ರಷ್ಟು ತೇವಾಂಶ ದಾಖಲಾಗಿದೆ.

Rain Thundershowers Very Likely to Occur at Isolated Places Over the State From April 7

ರಾಯಚೂರು 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21ರಷ್ಟು ತೇವಾಂಶ, ಚಿತ್ರದುರ್ಗ 36 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 52ರಷ್ಟು ತೇವಾಂಶ, ಕಲಬುರಗಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20ರಷ್ಟು ತೇವಾಂಶ, ಚಿಕ್ಕಮಗಳೂರು 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 28ರಷ್ಟು ತೇವಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+