Infographics: ಕರ್ನಾಟಕದಲ್ಲಿ ಆಗಸ್ಟ್ 22ರವರೆಗೂ ಮಳೆ

ಬೆಂಗಳೂರು, ಆಗಸ್ಟ್ 20: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು ಆಗಸ್ಟ್ 22ರವರೆಗೂ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲಗೊಂಡಿದ್ದು, ಉತ್ತರ ಒಳನಾಡಿನ ಕೆಲವು ಕಡೆ ಮತ್ತು ದಕ್ಷಿಣ ಒಳನಾಡಿನ ಒಂದೆರೆಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ, ಯಾದಗಿರಿ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಮಂಡ್ಯ, ದಾವಣಗೆರೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಇದರ ಹೊರತಾಗಿ ರಾಜ್ಯದ ಹವಾಮಾನದಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಿಲಿಕಾನ್ ಸಿಟಿಯಲ್ಲಿ ಹೇಗಿದೆ ವಾತಾವರಣ?

ಸಿಲಿಕಾನ್ ಸಿಟಿಯಲ್ಲಿ ಹೇಗಿದೆ ವಾತಾವರಣ?

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿಡ ವಾತಾವರಣವಿದ್ದು, ಗುಡುಗು ಸಹಿತ ಮಳೆಯಾಗಿದೆ. ನಗರದ ಕೆಲವು ಕಡೆಗಳಲ್ಲಿ ಒಂದೆರೆಡು ಬಾರಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದರ ಹೊರತಾಗಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಅದೇ ರೀತಿ ಮುಂದಿನ 48 ಗಂಟೆಗಳಲ್ಲಿ ಸಿಲಿಕಾನ್ ಸಿಟಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಇದೇ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ವಾತಾವರಣ?

ಮುಂದಿನ 24 ಗಂಟೆಗಳಲ್ಲಿ ವಾತಾವರಣ?

ಕರ್ನಾಟಕದ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಇದರ ಹೊರತಾಗಿ ಉತ್ತರ ಒಳನಾಡಿನ ಒಂದೆರೆಡು ಕಡೆಯಲ್ಲಿ ಮಳೆ ಆಗಲಿದೆ. ಮುಂದಿನ 24 ಗಂಟೆಗಳಲ್ಲಿ ವಾತಾವರಣದ ಹೊರನೋಟವನ್ನು ನೋಡುವುದಾದರೆ ಯಾವುದೇ ಗಮನಾರ್ಹ ಬದಲಾವಣೆಯು ಇಲ್ಲ ಎಂದು ತಿಳಿದು ಬಂದಿದೆ.

ಕರಾವಳಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ

ಕರಾವಳಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ

ಮುಂದಿನ 48 ಗಂಟೆಗಳಲ್ಲಿ ಕರಾವಳಿ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯ ಒಂದೆರೆಡು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ

ಬೆಂಗಳೂರಿನಲ್ಲಿ 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 61ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 44 ಕಿ.ಮೀ ಆಗಿದೆ. ಬಾಗಲಕೋಟೆ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 57ರಷ್ಟು ತೇವಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 61ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 65ರಷ್ಟು ತೇವಾಂಶ ಇದೆ. ಮೈಸೂರು 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 57 ತೇವಾಂಶ, ಬಳ್ಳಾರಿಯಲ್ಲಿ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 54ರಷ್ಟು ತೇವಾಂಶ ದಾಖಲಾಗಿದೆ.

ರಾಯಚೂರು 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 50ರಷ್ಟು ತೇವಾಂಶ, ಚಿತ್ರದುರ್ಗ 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 65ರಷ್ಟು ತೇವಾಂಶ, ಕಲಬುರಗಿ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 59ರಷ್ಟು ತೇವಾಂಶ, ಚಿಕ್ಕಮಗಳೂರು 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 64ರಷ್ಟು ತೇವಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+