Infographics: ಕರ್ನಾಟಕದಲ್ಲಿ ಆಗಸ್ಟ್ 29ರವರೆಗೂ ಮಳೆಯೋ ಮಳೆ
ಬೆಂಗಳೂರು, ಆಗಸ್ಟ್ 27: ಕರ್ನಾಟಕದ ನೈಋತ್ಯ ಮುಂಗಾರು ಅತಿಚುರುಕಾಗಿದ್ದು ಆಗಸ್ಟ್ 29ರವರೆಗೂ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.
ಮಂಡ್ಯ, ತುಮಕೂರು, ರಾಮನಗರ, ರಾಯಚೂರು, ಬಳ್ಳಾರಿ, ಕೋಲಾರ, ಮೈಸೂರು ಮತ್ತು ಬೆಂಗಳೂರು ಜಿಲ್ಲೆಯಲ್ಲಿ ಮಳೆ ಆರ್ಭಟ ಹೆಚ್ಚಾಗಿದೆ. ಈ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗಿದೆ.
ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆ ಮತ್ತು ಗುಡುಗಿನಿಂದ ಕೂಡಿದ ಮಳೆಯಾಗುವ ಬಹಳಷ್ಟು ಸಾಧ್ಯತೆಯಿದೆ. ಕರಾವಳಿ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಿಲಿಕಾನ್ ಸಿಟಿಯಲ್ಲಿ ಹೇಗಿದೆ ವಾತಾವರಣ?
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿಡ ವಾತಾವರಣವಿದ್ದು, ಗುಡುಗು ಸಹಿತ ಮಳೆಯಾಗಿದೆ. ನಗರದ ಕೆಲವು ಕಡೆಗಳಲ್ಲಿ ಒಂದೆರೆಡು ಬಾರಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದರ ಹೊರತಾಗಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಅದೇ ರೀತಿ ಮುಂದಿನ 48 ಗಂಟೆಗಳಲ್ಲಿ ಸಿಲಿಕಾನ್ ಸಿಟಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಇದೇ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ವಾತಾವರಣ?
ಕರ್ನಾಟಕದ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಇದರ ಹೊರತಾಗಿ ಉತ್ತರ ಒಳನಾಡಿನ ಒಂದೆರೆಡು ಕಡೆಯಲ್ಲಿ ಮಳೆ ಆಗಲಿದೆ. ಮುಂದಿನ 24 ಗಂಟೆಗಳಲ್ಲಿ ವಾತಾವರಣದ ಹೊರನೋಟವನ್ನು ನೋಡುವುದಾದರೆ ಯಾವುದೇ ಗಮನಾರ್ಹ ಬದಲಾವಣೆಯು ಇಲ್ಲ ಎಂದು ತಿಳಿದು ಬಂದಿದೆ.

ಕರಾವಳಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ
ಮುಂದಿನ 48 ಗಂಟೆಗಳಲ್ಲಿ ಕರಾವಳಿ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಯ ಒಂದೆರೆಡು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ
ಬೆಂಗಳೂರಿನಲ್ಲಿ 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 80ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 30 ಕಿ.ಮೀ ಆಗಿದೆ. ಬಾಗಲಕೋಟೆ 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 75ರಷ್ಟು ತೇವಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 75ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 83ರಷ್ಟು ತೇವಾಂಶ ಇದೆ. ಮೈಸೂರು 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 80 ತೇವಾಂಶ, ಬಳ್ಳಾರಿಯಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 70ರಷ್ಟು ತೇವಾಂಶ ದಾಖಲಾಗಿದೆ.
ರಾಯಚೂರು 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 70ರಷ್ಟು ತೇವಾಂಶ, ಚಿತ್ರದುರ್ಗ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 80ರಷ್ಟು ತೇವಾಂಶ, ಕಲಬುರಗಿ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 75ರಷ್ಟು ತೇವಾಂಶ, ಚಿಕ್ಕಮಗಳೂರು 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 80ರಷ್ಟು ತೇವಾಂಶ ದಾಖಲಾಗಿದೆ.












Click it and Unblock the Notifications