India
  • search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ಕರ್ನಾಟಕದಲ್ಲಿ ಜುಲೈ 4ರವರೆಗೂ ಚುರುಕಿನ ಮಳೆ

|
Google Oneindia Kannada News

ಬೆಂಗಳೂರು, ಜುಲೈ 02: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು ಜುಲೈ 4ರವರೆಗೂ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಂಗಳೂರು, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಅತಿಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಉಳಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಮಳೆಯಾಗಿದೆ. ಇದರ ಹೊರತಾಗಿ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳಿಲ್ಲ ಎಂದು ತಿಳಿಸಿದೆ.

ಮಲೆನಾಡಿನಲ್ಲಿ ಧಾರಾಕಾರ ಮಳೆ: ಮುಳುಗಡೆ ಭೀತಿಯಲ್ಲಿದೆ ಹೆಬ್ಬಾಳೆ ಸೇತುವೆಮಲೆನಾಡಿನಲ್ಲಿ ಧಾರಾಕಾರ ಮಳೆ: ಮುಳುಗಡೆ ಭೀತಿಯಲ್ಲಿದೆ ಹೆಬ್ಬಾಳೆ ಸೇತುವೆ

ರಾಜ್ಯದ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಹೇಗಿದೆ ವಾತಾವರಣ?

ಸಿಲಿಕಾನ್ ಸಿಟಿಯಲ್ಲಿ ಹೇಗಿದೆ ವಾತಾವರಣ?

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿಡ ವಾತಾವರಣವಿದ್ದು, ಗುಡುಗು ಸಹಿತ ಮಳೆಯಾಗಿದೆ. ನಗರದ ಕೆಲವು ಕಡೆಗಳಲ್ಲಿ ಒಂದೆರೆಡು ಬಾರಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದರ ಹೊರತಾಗಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಅದೇ ರೀತಿ ಮುಂದಿನ 48 ಗಂಟೆಗಳಲ್ಲಿ ಸಿಲಿಕಾನ್ ಸಿಟಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಇದೇ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ವಾತಾವರಣ?

ಮುಂದಿನ 24 ಗಂಟೆಗಳಲ್ಲಿ ವಾತಾವರಣ?

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲೂ ಅತಿ ಭಾರೀ ಪ್ರಮಾಣದ ಮಳೆ ಆಗಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಯ ಒಂದೆರೆಡು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ

ಕರಾವಳಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ

ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರೆಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ತೀರದಲ್ಲಿ ಬಿರುಗಾಳಿ ವೇಗವು ಪ್ರತಿ ಗಂಟೆಗೆ 40 ರಿಂದ 50 ಕಿಲೋ ಮೀಟರ್ ತಲುಪುವ ಸಾಧ್ಯತೆಯಿದ್ದು, ಈ ಅವಧಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕ ಕರಾವಳಿಯ ಮಂಗಳೂರಿನಿಂದ ಕಾರವಾರದವರೆಗೂ ಸಮುದ್ರದಲ್ಲಿ 3.5 ರಿಂದ 3.9 ಮೀಟರ್ ಎತ್ತರದ ಅಲೆಗಳು ಬರುವ ಮುನ್ಸೂಚನೆಯನ್ನು ನೀಡಲಾಗಿದೆ.

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ

ಬೆಂಗಳೂರಿನಲ್ಲಿ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 65ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 51 ಕಿ.ಮೀ ಆಗಿದೆ. ಬಾಗಲಕೋಟೆ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 59ರಷ್ಟು ತೇವಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 89ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 77ರಷ್ಟು ತೇವಾಂಶ ಇದೆ. ಮೈಸೂರು 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 64ರಷ್ಟು ತೇವಾಂಶ, ಬಳ್ಳಾರಿಯಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 50ರಷ್ಟು ತೇವಾಂಶ ದಾಖಲಾಗಿದೆ.

ರಾಯಚೂರು 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 46ರಷ್ಟು ತೇವಾಂಶ, ಚಿತ್ರದುರ್ಗ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 60ರಷ್ಟು ತೇವಾಂಶ, ಕಲಬುರಗಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 49ರಷ್ಟು ತೇವಾಂಶ, ಚಿಕ್ಕಮಗಳೂರು 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 60ರಷ್ಟು ತೇವಾಂಶ ದಾಖಲಾಗಿದೆ.

English summary
Karnataka Weather forecast as on July 2nd, 2022: Heavy Rain thundershowers very likely to occur at isolated places over the State.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X