Infographics: ಕರ್ನಾಟಕದಲ್ಲಿ ಜುಲೈ 10ರವರೆಗೂ ಬಿಡುವುದಿಲ್ಲ ಮಳೆರಾಯ!

ಬೆಂಗಳೂರು, ಜುಲೈ 08: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು ಜುಲೈ 10ರವರೆಗೂ ಭಾರಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಬೀದರ್, ಹಾವೇರಿ, ಕಲಬುರಗಿ ವಿಜಯಪುರ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಯ ಒಂದೆರೆಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕರಾವಳಿ ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮತ್ತು ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಇದರ ಹೊರತಾಗಿ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಯಿಲ್ಲ ಎಂದು ರಾಜ್ಯ ಹವಾಮಾನ ಇಲಾಖೆಯು ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಹೇಗಿದೆ ವಾತಾವರಣ?

ಸಿಲಿಕಾನ್ ಸಿಟಿಯಲ್ಲಿ ಹೇಗಿದೆ ವಾತಾವರಣ?

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿಡ ವಾತಾವರಣವಿದ್ದು, ಗುಡುಗು ಸಹಿತ ಮಳೆಯಾಗಿದೆ. ನಗರದ ಕೆಲವು ಕಡೆಗಳಲ್ಲಿ ಒಂದೆರೆಡು ಬಾರಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದರ ಹೊರತಾಗಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಅದೇ ರೀತಿ ಮುಂದಿನ 48 ಗಂಟೆಗಳಲ್ಲಿ ಸಿಲಿಕಾನ್ ಸಿಟಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಇದೇ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ವಾತಾವರಣ?

ಮುಂದಿನ 24 ಗಂಟೆಗಳಲ್ಲಿ ವಾತಾವರಣ?

ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರಿಯಿಂದ ಅತಿಭಾರಿ ಮಳೆಯಾಗುವ ನಿರೀಕ್ಷೆಯಿದೆ. ಒಂದೆರೆಡು ಕಡೆಗಳಲ್ಲಿ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರ ಹೊರತಾಗಿಯೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದ ಒಂದೆರೆಡು ಕೆಡಗಳಲ್ಲಿ ಭಾರಿಯಿಂದ ಅತಿಭಾರಿ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ

ಕರಾವಳಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಬೀದರ್, ಹಾವೇರಿ, ಕಲಬುರಗಿ ವಿಜಯಪುರ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಯ ಒಂದೆರೆಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 45 ರಿಂದ 55 ಕಿಲೋ ಮೀಟರ್ ಇರಲಿದ್ದು, 65 ಕಿ. ಮೀ ವೇಗಕ್ಕೆ ತಲುಪುವ ಸಾಧ್ಯೆತೆಯೂ ಇದೆ. ಈ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ಸಂದೇಶವನ್ನು ನೀಡಲಾಗಿದೆ.

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ

ಬೆಂಗಳೂರಿನಲ್ಲಿ 25 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 72ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 54 ಕಿ.ಮೀ ಆಗಿದೆ. ಬಾಗಲಕೋಟೆ 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 70ರಷ್ಟು ತೇವಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 24 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 80ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 25 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 80ರಷ್ಟು ತೇವಾಂಶ ಇದೆ. ಮೈಸೂರು 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 76 ತೇವಾಂಶ, ಬಳ್ಳಾರಿಯಲ್ಲಿ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 68ರಷ್ಟು ತೇವಾಂಶ ದಾಖಲಾಗಿದೆ.

ರಾಯಚೂರು 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 67ರಷ್ಟು ತೇವಾಂಶ, ಚಿತ್ರದುರ್ಗ 24 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 90ರಷ್ಟು ತೇವಾಂಶ, ಕಲಬುರಗಿ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 67ರಷ್ಟು ತೇವಾಂಶ, ಚಿಕ್ಕಮಗಳೂರು 25 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 76ರಷ್ಟು ತೇವಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+