Inforgraphics: ಜೂನ್ 11ರಂದು ಕರ್ನಾಟಕ ಯಾವ ಜಿಲ್ಲೆಗಳಲ್ಲಿ ಹೇಗಿದೆ ಹವಾಮಾನ?
ಬೆಂಗಳೂರು, ಜೂನ್ 11: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳವರೆಗೂ ಸಾಧಾರಣ ಮಳೆಯಾಗಲಿದೆ. ಜೂನ್ 13ರ ಬೆಳಗ್ಗಿನವರೆಗೂ ಮಳೆ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಇದರ ಜೊತೆಗೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಕೊಪ್ಪಳ, ಯಾದಗಿರಿಯಲ್ಲಿ ಮಳೆ ಸುರಿಯಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನ ಒಂದೆರೆಡು ಕಡೆಗಳಲ್ಲಿ ಮಳೆಯಾಗಲಿದೆ.

ಸಿಲಿಕಾನ್ ಸಿಟಿಯಲ್ಲಿ ಹೇಗಿದೆ ವಾತಾವರಣ?
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿಡ ವಾತಾವರಣವಿದ್ದು, ಗುಡುಗು ಸಹಿತ ಮಳೆಯಾಗಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಜುಕಿನ ವಾತಾವರಣ ನಿರ್ಮಾಣವಾಗಲಿದ್ದು, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ವಾತಾವರಣ?
ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 37.60 ಡಿಗ್ರಿ ಸೆಲ್ಸಿಯಸ್ ಆಗಿದ್ದು, ಅತಿಹೆಚ್ಚಿನ ಉಷ್ಣಾಂಶವು ರಾಯಚೂರು ಜಿಲ್ಲೆಯಲ್ಲಿ ದಾಖಲಾಗಿದೆ. ಇನ್ನು ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಇದರ ಜೊತೆಗೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಕೊಪ್ಪಳ, ಯಾದಗಿರಿಯಲ್ಲಿ ಮಳೆ ಸುರಿಯಲಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಧಾರಾಕಾರ ಮಳೆ
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನ ಒಂದೆರೆಡು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ
ಬೆಂಗಳೂರಿನಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 59ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 47 ಕಿ.ಮೀ ಆಗಿದೆ. ಬಾಗಲಕೋಟೆ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 53ರಷ್ಟು ತೇವಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 67ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 58ರಷ್ಟು ತೇವಾಂಶ ಇದೆ. ಮೈಸೂರು 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 48ರಷ್ಟು ತೇವಾಂಶ, ಬಳ್ಳಾರಿಯಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 50ರಷ್ಟು ತೇವಾಂಶ ದಾಖಲಾಗಿದೆ.
ರಾಯಚೂರು 35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 37ರಷ್ಟು ತೇವಾಂಶ, ಚಿತ್ರದುರ್ಗ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 57ರಷ್ಟು ತೇವಾಂಶ, ಕಲಬುರಗಿ 35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 43ರಷ್ಟು ತೇವಾಂಶ, ಚಿಕ್ಕಮಗಳೂರು 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 64ರಷ್ಟು ತೇವಾಂಶ ದಾಖಲಾಗಿದೆ.












Click it and Unblock the Notifications