Inforgraphics: ಜೂನ್ 14ರಂದು ಕರ್ನಾಟಕ ಯಾವ ಜಿಲ್ಲೆಗಳಲ್ಲಿ ಹೇಗಿದೆ ಹವಾಮಾನ?

ಬೆಂಗಳೂರು, ಜೂನ್ 14: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳವರೆಗೂ ಮಳೆಯ ಮುನ್ಸೂಚನೆಯಿದೆ. ಜೂನ್ 16ರ ಬೆಳಗ್ಗಿನವರೆಗೂ ಮಳೆ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ (IMD) ಸೂಚನೆ ನೀಡಿದೆ.

ಕರ್ನಾಟಕದ ಎಲ್ಲಾ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ನಿರೀಕ್ಷೆಯಿದೆ ಎಂದು ಮಂಗಳವಾರ ರಾಜ್ಯ ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ಇದರ ಹೊರತಾಗಿ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಯಿಲ್ಲ.

ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಹವಾಮಾನದ ಕುರಿತು ಮತ್ತು ತೇವಾಂಶ ಹಾಗೂ ಗರಿಷ್ಠ ಬಿಸಿಲಿನ ಬಗ್ಗೆ ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಸಿಲಿಕಾನ್ ಸಿಟಿಯಲ್ಲಿ ಹೇಗಿದೆ ವಾತಾವರಣ?

ಸಿಲಿಕಾನ್ ಸಿಟಿಯಲ್ಲಿ ಹೇಗಿದೆ ವಾತಾವರಣ?

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿಡ ವಾತಾವರಣವಿದ್ದು, ಗುಡುಗು ಸಹಿತ ಮಳೆಯಾಗಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಜುಕಿನ ವಾತಾವರಣ ನಿರ್ಮಾಣವಾಗಲಿದ್ದು, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನ ಒಂದೆರೆಡು ಕಡೆಗಳಲ್ಲಿ ಮಳೆಯಾಗಲಿದೆ.

ಮುಂದಿನ 24 ಗಂಟೆಗಳಲ್ಲಿ ವಾತಾವರಣ?

ಮುಂದಿನ 24 ಗಂಟೆಗಳಲ್ಲಿ ವಾತಾವರಣ?

ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 36.80 ಡಿಗ್ರಿ ಸೆಲ್ಸಿಯಸ್ ಆಗಿದ್ದು, ಅತಿಹೆಚ್ಚಿನ ಉಷ್ಣಾಂಶವು ಕಲಬುರಗಿ ಜಿಲ್ಲೆಯಲ್ಲಿ ದಾಖಲಾಗಿದೆ. ಇನ್ನು ಮುಂದಿನ 24 ಗಂಟೆಗಳಲ್ಲಿ ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯಲಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಧಾರಾಕಾರ ಮಳೆ

ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಧಾರಾಕಾರ ಮಳೆ

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನ ಒಂದೆರೆಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ

ಬೆಂಗಳೂರಿನಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 54ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 33 ಕಿ.ಮೀ ಆಗಿದೆ. ಬಾಗಲಕೋಟೆ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 48ರಷ್ಟು ತೇವಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 63ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 61ರಷ್ಟು ತೇವಾಂಶ ಇದೆ. ಮೈಸೂರು 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 54ರಷ್ಟು ತೇವಾಂಶ, ಬಳ್ಳಾರಿಯಲ್ಲಿ 35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 41ರಷ್ಟು ತೇವಾಂಶ ದಾಖಲಾಗಿದೆ.

ರಾಯಚೂರು 35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 37ರಷ್ಟು ತೇವಾಂಶ, ಚಿತ್ರದುರ್ಗ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 52ರಷ್ಟು ತೇವಾಂಶ, ಕಲಬುರಗಿ 35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 41ರಷ್ಟು ತೇವಾಂಶ, ಚಿಕ್ಕಮಗಳೂರು 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 50ರಷ್ಟು ತೇವಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+