Inforgraphics: ಜೂನ್ 15ರಂದು ಕರ್ನಾಟಕ ಯಾವ ಜಿಲ್ಲೆಗಳಲ್ಲಿ ಹೇಗಿದೆ ಹವಾಮಾನ?
ಬೆಂಗಳೂರು, ಜೂನ್ 15: ರಾಜ್ಯ ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಜೂನ್ 17ರ ಬೆಳಗ್ಗೆವರೆಗೂ ಸಾಧಾರಣ ಮಳೆ ಆಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ (IMD) ಸೂಚನೆ ನೀಡಿದೆ.
ಕರ್ನಾಟಕದ ಎಲ್ಲಾ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ನಿರೀಕ್ಷೆಯಿದೆ ಎಂದು ಬುಧವಾರ ರಾಜ್ಯ ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ಇದರ ಹೊರತಾಗಿ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಯಿಲ್ಲ.
ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಹವಾಮಾನದ ಕುರಿತು ಮತ್ತು ತೇವಾಂಶ ಹಾಗೂ ಗರಿಷ್ಠ ಬಿಸಿಲಿನ ಬಗ್ಗೆ ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಸಿಲಿಕಾನ್ ಸಿಟಿಯಲ್ಲಿ ಹೇಗಿದೆ ವಾತಾವರಣ?
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿಡ ವಾತಾವರಣವಿದ್ದು, ಗುಡುಗು ಸಹಿತ ಮಳೆಯಾಗಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿನ ವಾತಾವರಣ ನಿರ್ಮಾಣವಾಗಲಿದ್ದು, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಅದೇ ರೀತಿ ಮುಂದಿನ 48 ಗಂಟೆಗಳಲ್ಲಿ ಸಿಲಿಕಾನ್ ಸಿಟಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಇದೇ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನ ಒಂದೆರೆಡು ಕಡೆಗಳಲ್ಲಿ ಮಳೆಯಾಗಲಿದೆ.

ಮುಂದಿನ 24 ಗಂಟೆಗಳಲ್ಲಿ ವಾತಾವರಣ?
ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 35.40 ಡಿಗ್ರಿ ಸೆಲ್ಸಿಯಸ್ ಆಗಿದ್ದು, ಅತಿಹೆಚ್ಚಿನ ಉಷ್ಣಾಂಶವು ಕಲಬುರಗಿ ಜಿಲ್ಲೆಯಲ್ಲಿ ದಾಖಲಾಗಿದೆ. ಇನ್ನು ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಧಾರಾಕಾರ ಮಳೆ
ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನ ಒಂದೆರೆಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ
ಬೆಂಗಳೂರಿನಲ್ಲಿ 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 63ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 43 ಕಿ.ಮೀ ಆಗಿದೆ. ಬಾಗಲಕೋಟೆ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 49ರಷ್ಟು ತೇವಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 74ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 51ರಷ್ಟು ತೇವಾಂಶ ಇದೆ. ಮೈಸೂರು 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 57ರಷ್ಟು ತೇವಾಂಶ, ಬಳ್ಳಾರಿಯಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 48ರಷ್ಟು ತೇವಾಂಶ ದಾಖಲಾಗಿದೆ.
ರಾಯಚೂರು 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 57ರಷ್ಟು ತೇವಾಂಶ, ಚಿತ್ರದುರ್ಗ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 76ರಷ್ಟು ತೇವಾಂಶ, ಕಲಬುರಗಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 46ರಷ್ಟು ತೇವಾಂಶ, ಚಿಕ್ಕಮಗಳೂರು 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 59ರಷ್ಟು ತೇವಾಂಶ ದಾಖಲಾಗಿದೆ.












Click it and Unblock the Notifications