Inforgraphics: ಜೂನ್ 17ರಂದು ಕರ್ನಾಟಕ ಯಾವ ಜಿಲ್ಲೆಗಳಲ್ಲಿ ಹೇಗಿದೆ ಹವಾಮಾನ?
ಬೆಂಗಳೂರು, ಜೂನ್ 17: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಚುರುಕಾಗಿದ್ದು, ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ. ಈ ಹಿನ್ನೆಲೆ ಶುಕ್ರವಾರ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವೆಡೆಯಲ್ಲಿ ಮಳೆಯಾಗಿದೆ.
ರಾಜ್ಯದ ಹಲವೆಡೆ ಜೂನ್ 19ರ ಬೆಳಗ್ಗೆವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (IMD) ಸೂಚನೆ ನೀಡಿದೆ. ಕರ್ನಾಟಕದ ಎಲ್ಲಾ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ನಿರೀಕ್ಷೆಯಿದೆ ಎಂದು ಶುಕ್ರವಾರ ಮಾಹಿತಿ ನೀಡಿದೆ. ಇದರ ಹೊರತಾಗಿ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಯಿಲ್ಲ.
ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಹವಾಮಾನದ ಕುರಿತು ಮತ್ತು ತೇವಾಂಶ ಹಾಗೂ ಗರಿಷ್ಠ ಬಿಸಿಲಿನ ಬಗ್ಗೆ ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಸಿಲಿಕಾನ್ ಸಿಟಿಯಲ್ಲಿ ಹೇಗಿದೆ ವಾತಾವರಣ?
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿಡ ವಾತಾವರಣವಿದ್ದು, ಗುಡುಗು ಸಹಿತ ಮಳೆಯಾಗಿದೆ. ಸಂಜೆ ವೇಳೆಗೆ ನಗರದ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಅದೇ ರೀತಿ ಮುಂದಿನ 48 ಗಂಟೆಗಳಲ್ಲಿ ಸಿಲಿಕಾನ್ ಸಿಟಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಇದೇ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿಯಲ್ಲಿ ಭಾರೀ ಮಳೆ
ರಾಜ್ಯದ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರು ಜಿಲ್ಲೆಗಳ ಒಂದೆರೆಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ:
ರಾಜ್ಯ ಕರಾವಳಿಯ ತೀರದಲ್ಲಿ ಗಾಳಿಯ ವೇಳೆ ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ ಆಗಲಿದ್ದು, ಮುಂದಿನ 48 ಗಂಟೆಗಳವರೆಗೂ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಗುಡುಗು ಸಹಿತ ಭಾರೀ ಮಳೆ
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆಯಿದೆ. ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಯ ಒಂದೆರೆಡು ಕಡೆಗಳಲ್ಲಿ ಭಾರೀ ಮಳೆಯಾಗಲಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ ಮತ್ತು ತುಮಕೂರಿನ ಒಂದೆರೆಡು ಕಡೆಗಳಲ್ಲಿ ಮಳೆಯಾಗಲಿದೆ.

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ
ಬೆಂಗಳೂರಿನಲ್ಲಿ 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 59ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 42 ಕಿ.ಮೀ ಆಗಿದೆ. ಬಾಗಲಕೋಟೆ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 62ರಷ್ಟು ತೇವಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 76ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 63ರಷ್ಟು ತೇವಾಂಶ ಇದೆ. ಮೈಸೂರು 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 56ರಷ್ಟು ತೇವಾಂಶ, ಬಳ್ಳಾರಿಯಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 46ರಷ್ಟು ತೇವಾಂಶ ದಾಖಲಾಗಿದೆ.
ರಾಯಚೂರು 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 49ರಷ್ಟು ತೇವಾಂಶ, ಚಿತ್ರದುರ್ಗ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 47ರಷ್ಟು ತೇವಾಂಶ, ಕಲಬುರಗಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 46ರಷ್ಟು ತೇವಾಂಶ, ಚಿಕ್ಕಮಗಳೂರು 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 47ರಷ್ಟು ತೇವಾಂಶ ದಾಖಲಾಗಿದೆ.












Click it and Unblock the Notifications