Inforgraphics: ಜೂನ್ 18ರಂದು ಕರ್ನಾಟಕ ಯಾವ ಜಿಲ್ಲೆಗಳಲ್ಲಿ ಹೇಗಿದೆ ಹವಾಮಾನ?
ಬೆಂಗಳೂರು, ಜೂನ್ 18: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಚುರುಕಾಗಿದ್ದು, ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ. ಜೂನ್ 20ರ ಬೆಳಗ್ಗೆವರೆಗೆ ಮಳೆ ಬೀಳುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಎಲ್ಲಾ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ನಿರೀಕ್ಷೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದರ ಹೊರತಾಗಿ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಯಿಲ್ಲ ಎಂದಿದೆ.
ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಹವಾಮಾನದ ಕುರಿತು ಮತ್ತು ತೇವಾಂಶ ಹಾಗೂ ಗರಿಷ್ಠ ಬಿಸಿಲಿನ ಬಗ್ಗೆ ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಸಿಲಿಕಾನ್ ಸಿಟಿಯಲ್ಲಿ ಹೇಗಿದೆ ವಾತಾವರಣ?
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿಡ ವಾತಾವರಣವಿದ್ದು, ಗುಡುಗು ಸಹಿತ ಮಳೆಯಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಅದೇ ರೀತಿ ಮುಂದಿನ 48 ಗಂಟೆಗಳಲ್ಲಿ ಸಿಲಿಕಾನ್ ಸಿಟಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಇದೇ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿಯಲ್ಲಿ ಭಾರೀ ಮಳೆ
ರಾಜ್ಯದ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ರಾಜ್ಯ ಕರಾವಳಿಯ ತೀರದಲ್ಲಿ ಗಾಳಿಯ ವೇಳೆ ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ ಆಗಲಿದ್ದು, ಮುಂದಿನ 48 ಗಂಟೆಗಳವರೆಗೂ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಗುಡುಗು ಸಹಿತ ಭಾರೀ ಮಳೆ
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಯ ಒಂದೆರೆಡು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ.

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ
ಬೆಂಗಳೂರಿನಲ್ಲಿ 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 71ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 38 ಕಿ.ಮೀ ಆಗಿದೆ. ಬಾಗಲಕೋಟೆ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 62ರಷ್ಟು ತೇವಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 78ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 67ರಷ್ಟು ತೇವಾಂಶ ಇದೆ. ಮೈಸೂರು 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 65ರಷ್ಟು ತೇವಾಂಶ, ಬಳ್ಳಾರಿಯಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 51ರಷ್ಟು ತೇವಾಂಶ ದಾಖಲಾಗಿದೆ.
ರಾಯಚೂರು 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 67ರಷ್ಟು ತೇವಾಂಶ, ಚಿತ್ರದುರ್ಗ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 51ರಷ್ಟು ತೇವಾಂಶ, ಕಲಬುರಗಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 48ರಷ್ಟು ತೇವಾಂಶ, ಚಿಕ್ಕಮಗಳೂರು 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 59ರಷ್ಟು ತೇವಾಂಶ ದಾಖಲಾಗಿದೆ.











Click it and Unblock the Notifications