Inforgraphics: ಜೂನ್ 27ರವರೆಗೂ ಕರ್ನಾಟಕದಲ್ಲಿ ಮಳೆಯೋ ಮಳೆ

ಬೆಂಗಳೂರು, ಜೂನ್ 25: ರಾಜ್ಯದ ಹಲವೆಡೆ ಮುಂದಿನ ಜೂನ್ 27 ಬೆಳಗ್ಗೆವರೆಗೂ ಭಾರೀ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದರ ಹೊರತಾಗಿ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಯಿಲ್ಲ ಎಂದು ತಿಳಿದು ಬಂದಿದೆ.

ಕರ್ನಾಟಕದ ಎಲ್ಲಾ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ನಿರೀಕ್ಷೆಯಿದೆ ಎಂದು ಶನಿವಾರ ಮಾಹಿತಿ ನೀಡಲಾಗಿದೆ. ರಾಜ್ಯದ ಹವಾಮಾನದ ಕುರಿತು ಮತ್ತು ತೇವಾಂಶ ಹಾಗೂ ಗರಿಷ್ಠ ಬಿಸಿಲಿನ ಬಗ್ಗೆ ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಸಿಲಿಕಾನ್ ಸಿಟಿಯಲ್ಲಿ ಹೇಗಿದೆ ವಾತಾವರಣ?

ಸಿಲಿಕಾನ್ ಸಿಟಿಯಲ್ಲಿ ಹೇಗಿದೆ ವಾತಾವರಣ?

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿಡ ವಾತಾವರಣವಿದ್ದು, ಗುಡುಗು ಸಹಿತ ಮಳೆಯಾಗಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಿನ ವಾತಾವರಣ ನಿರ್ಮಾಣವಾಗಲಿದ್ದು, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಅದೇ ರೀತಿ ಮುಂದಿನ 48 ಗಂಟೆಗಳಲ್ಲಿ ಸಿಲಿಕಾನ್ ಸಿಟಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಇದೇ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ವಾತಾವರಣ?

ಮುಂದಿನ 24 ಗಂಟೆಗಳಲ್ಲಿ ವಾತಾವರಣ?

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ

ಕರಾವಳಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ

ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ತೀರದಲ್ಲಿ ಬಿರುಗಾಳಿ ವೇಗವು ಪ್ರತಿ ಗಂಟೆಗೆ 40 ರಿಂದ 50 ಕಿಲೋ ಮೀಟರ್ ತಲುಪುವ ಸಾಧ್ಯತೆಯಿದ್ದು, ಈ ಅವಧಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ

ಬೆಂಗಳೂರಿನಲ್ಲಿ 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 67ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 52 ಕಿ.ಮೀ ಆಗಿದೆ. ಬಾಗಲಕೋಟೆ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 60ರಷ್ಟು ತೇವಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 76ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 67ರಷ್ಟು ತೇವಾಂಶ ಇದೆ. ಮೈಸೂರು 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 63ರಷ್ಟು ತೇವಾಂಶ, ಬಳ್ಳಾರಿಯಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 64ರಷ್ಟು ತೇವಾಂಶ ದಾಖಲಾಗಿದೆ.

ರಾಯಚೂರು 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 47ರಷ್ಟು ತೇವಾಂಶ, ಚಿತ್ರದುರ್ಗ 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 52ರಷ್ಟು ತೇವಾಂಶ, ಕಲಬುರಗಿ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 50ರಷ್ಟು ತೇವಾಂಶ, ಚಿಕ್ಕಮಗಳೂರು 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 65ರಷ್ಟು ತೇವಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+