Inforgraphics: ಜೂನ್ 3ರಂದು ಕರ್ನಾಟಕ ಯಾವ ಜಿಲ್ಲೆಗಳಲ್ಲಿ ಹೇಗಿದೆ ಹವಾಮಾನ?
ಬೆಂಗಳೂರು, ಜೂನ್ 3: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳವರೆಗೂ ಧಾರಾಕಾರ ಮಳೆಯಾಗಲಿದೆ. ಜೂನ್ 5ರ ಬೆಳಗ್ಗಿನವರೆಗೂ ಮಳೆ ಆಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಹಾಸನ, ಶಿವಮೊಗ್ಗ, ರಾಮನಗರ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ದಕ್ಷಿಣ ಕರ್ನಾಟಕದ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಳದಿ (ಯೆಲ್ಲೋ) ಅಲರ್ಟ್ ಘೋಷಿಸಲಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಹೇಗಿದೆ ವಾತಾವರಣ?
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿಡ ವಾತಾವರಣವಿದ್ದು, ಗುಡುಗು ಸಹಿತ ಮಳೆಯಾಗಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಜುಕಿನ ವಾತಾವರಣ ನಿರ್ಮಾಣವಾಗಲಿದ್ದು, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ವಾತಾವರಣ?
ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 39.10 ಡಿಗ್ರಿ ಸೆಲ್ಸಿಯಸ್ ಆಗಿದ್ದು, ಅತಿಹೆಚ್ಚಿನ ಉಷ್ಣಾಂಶವು ಕಲಬುರಗಿ ಜಿಲ್ಲೆಯಲ್ಲಿ ದಾಖಲಾಗಿದೆ. ಇನ್ನು ಮುಂದಿನ 24 ಗಂಟೆಗಳಲ್ಲಿ ಕರಾವಳಿ ಒಳನಾಡಿನ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಒಂದೆರೆಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಗಳು ಹೆಚ್ಚಾಗಿವೆ.

ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಧಾರಾಕಾರ ಮಳೆ
ಕರ್ನಾಟಕದ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ರಾಮನಗರ ಮತ್ತು ಶಿವಮೊಗ್ಗದಲ್ಲಿ ಧಾರಾಕಾರ ಮಳೆಯಾಗಲಿದೆ ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ
ಬೆಂಗಳೂರಿನಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 60ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 34 ಕಿ.ಮೀ ಆಗಿದೆ. ಬಾಗಲಕೋಟೆ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 53ರಷ್ಟು ತೇವಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ , 62ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 58ರಷ್ಟು ತೇವಾಂಶ ಇದೆ. ಮೈಸೂರು 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 57ರಷ್ಟು ತೇವಾಂಶ, ಬಳ್ಳಾರಿಯಲ್ಲಿ 35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 47ರಷ್ಟು ತೇವಾಂಶ ದಾಖಲಾಗಿದೆ.
ರಾಯಚೂರು 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 49ರಷ್ಟು ತೇವಾಂಶ, ಚಿತ್ರದುರ್ಗ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 55ರಷ್ಟು ತೇವಾಂಶ, ಕಲಬುರಗಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 30ರಷ್ಟು ತೇವಾಂಶ, ಚಿಕ್ಕಮಗಳೂರು 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 58ರಷ್ಟು ತೇವಾಂಶ ದಾಖಲಾಗಿದೆ.












Click it and Unblock the Notifications