Inforgraphics: ರಾಜ್ಯದ ದಕ್ಷಿಣ ಒಳನಾಡಿನ ಒಂದೆರೆಡು ಕಡೆ ಮಳೆ
ಬೆಂಗಳೂರು, ಮಾರ್ಚ್ 29: ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿದ ಒಂದೆರೆಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ವಾತಾವರಣದಲ್ಲಿ ಯಾವುದೇ ದೊಡ್ಡ ಪ್ರಮಾಣದ ಬದಲಾವಣೆಗಳು ಆಗುವುದಿಲ್ಲ. ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆಯಿದೆ. ಇದರ ಹೊರತಾಗಿ ಹಾವೇರಿಯ ಕೆಲವರಕೊಪ್ಪ, ಚಾಮರಾಜನಗರದ ಬಂಡೀಪುರ, ಉತ್ತರ ಕನ್ನಡ ಜಿಲ್ಲೆಯ ಕಿರವಟ್ಟಿ ಮತ್ತು ಮಂಚಿಕೆರೆ, ಧಾರವಾಡದ ನವಲಗುಂದ, ಶಿವಮೊಗ್ಗದ ಆನವಟ್ಟಿಯಲ್ಲಿ ಮಳೆಯಾಗಲಿದೆ.
ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರೆಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಹೇಗಿದೆ ವಾತಾವರಣ?:
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿಡ ವಾತಾವರಣವಿದ್ದು, ಹಲವೆಡೆ ಗುಡುಗು ಸಹಿತ ಮಳೆ ಆಗಿದೆ. ಬೆಂಗಳೂರಿನಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 22 ಡಿಗ್ರಿ ತೇವಾಂಶ ದಾಖಲಾಗಿದೆ.

ಗರಿಷ್ಠ ಮತ್ತು ಕನಿಷ್ಠ ತಾಪಮಾನ ಎಷ್ಟಿದೆ?
ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 41.4 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ಉಷ್ಣಾಂಶ 20.30 ಡಿಗ್ರಿ ಸೆಲ್ಸಿಯಸ್ ಆಗಿದೆ. ಅತಿಹೆಚ್ಚಿನ ಉಷ್ಣಾಂಶವು ರಾಯಚೂರು ಜಿಲ್ಲೆಯಲ್ಲಿ ದಾಖಲಾಗಿದ್ದು, ಗರಿಷ್ಠ ಉಷ್ಣಾಂಶ 41.4 ಡಿಗ್ರಿ ಸೆಲ್ಸಿಯಸ್ ಆಗಿದೆ. ಅದೇ ರೀತಿ ಕನಿಷ್ಠ ಉಷ್ಣಾಂಶವು ರಾಜ್ಯದ ಸಮತಟ್ಟು ಪ್ರದೇಶದಲ್ಲಿರುವ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿದೆ. ಈ ಪ್ರದೇಶದಲ್ಲಿ ಕನಿಷ್ಠ ಉಷ್ಣಾಂಶವು 20.30 ಡಿಗ್ರಿ ಸೆಲ್ಸಿಯಸ್ ಆಗಿದೆ.

ರಾಜ್ಯದ ಪ್ರಮುಖ ನಗರಗಳಲ್ಲಿ ತಾಪಮಾನ:
ಬೆಂಗಳೂರಿನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 49ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 6 ಕಿ.ಮೀ ಆಗಿದೆ. ಬಾಗಲಕೋಟೆ 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21ರಷ್ಟು ತೇವಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ , 55ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 36 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 32ರಷ್ಟು ತೇವಾಂಶ, ಇದೆ. ಮೈಸೂರು 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 34ರಷ್ಟು ತೇವಾಂಶ, ಬಳ್ಳಾರಿಯಲ್ಲಿ 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25ರಷ್ಟು ತೇವಾಂಶ ದಾಖಲಾಗಿದೆ.

ರಾಯಚೂರು 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26ರಷ್ಟು ತೇವಾಂಶ, ಚಿತ್ರದುರ್ಗ 36 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 43ರಷ್ಟು ತೇವಾಂಶ, ಕಲಬುರಗಿ 40 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 33ರಷ್ಟು ತೇವಾಂಶ, ಚಿಕ್ಕಮಗಳೂರು 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 30ರಷ್ಟು ತೇವಾಂಶ ದಾಖಲಾಗಿದೆ.












Click it and Unblock the Notifications