Inforgraphics: ರಾಜ್ಯದಲ್ಲಿ ಮಾರ್ಚ್ 31ರವರೆಗೂ ಮಳೆ ಮುನ್ಸೂಚನೆ

ಬೆಂಗಳೂರು, ಮಾರ್ಚ್ 29: ಕರ್ನಾಟಕದ ಹಲವೆಡೆ ಮುಂದಿನ 48 ಗಂಟೆಗಳವರೆಗೂ ಗುಡುಗು ಸಹಿತ ಸಾಧಾರಣ ಮಳೆ ಆಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿದ ಒಂದೆರೆಡು ಕಡೆಗಳಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಹೊರನೋಟವನ್ನು ನೋಡುವುದಾದರೆ ವಾತಾವರಣದಲ್ಲಿ ಯಾವುದೇ ದೊಡ್ಡ ಪ್ರಮಾಣದ ಬದಲಾವಣೆಗಳು ಆಗುವುದಿಲ್ಲ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಇದರ ಹೊರತಾಗಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗದ ಒಂದೆರೆಡು ಕಡೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.

ಇನ್ನು, ಮುಂದಿನ ಮಾರ್ಚ್ 31ರವರೆಗೂ ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ತುಮಕೂರಿನ ಒಂದೆರೆಡು ಕಡೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Rain thundershowers very likely to occur at isolated places over the State from March 29

ಬೆಂಗಳೂರಿನಲ್ಲಿ ಹೇಗಿದೆ ವಾತಾವರಣ?:

ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿಡ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆಗಳಿವೆ. ಬೆಳಗಿನ ಜಾವ ಬಹುತೇಕ ಪ್ರದೇಶಗಳಲ್ಲಿ ಮಂಜು ಮುಜುಕಿನ ವಾತಾವರಣ ನಿರ್ಮಾಣವಾಗಲಿದ್ದು, ಬೆಂಗಳೂರಿನಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 22 ಡಿಗ್ರಿ ತೇವಾಂಶ ದಾಖಲಾಗಿದೆ.

Rain thundershowers very likely to occur at isolated places over the State from March 29

ಗರಿಷ್ಠ ಮತ್ತು ಕನಿಷ್ಠ ತಾಪಮಾನ ಎಷ್ಟಿದೆ?

ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 42.4 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ಉಷ್ಣಾಂಶ 19.40 ಡಿಗ್ರಿ ಸೆಲ್ಸಿಯಸ್ ಆಗಿದೆ. ಅತಿಹೆಚ್ಚಿನ ಉಷ್ಣಾಂಶವು ರಾಯಚೂರು ಜಿಲ್ಲೆಯಲ್ಲಿ ದಾಖಲಾಗಿದ್ದು, ಗರಿಷ್ಠ ಉಷ್ಣಾಂಶ 42.4 ಡಿಗ್ರಿ ಸೆಲ್ಸಿಯಸ್ ಆಗಿದೆ. ಅದೇ ರೀತಿ ಕನಿಷ್ಠ ಉಷ್ಣಾಂಶವು ರಾಜ್ಯದ ಸಮತಟ್ಟು ಪ್ರದೇಶದಲ್ಲಿರುವ ಬೀದರ್ ನಲ್ಲಿ ದಾಖಲಾಗಿದೆ. ಈ ಪ್ರದೇಶದಲ್ಲಿ ಕನಿಷ್ಠ ಉಷ್ಣಾಂಶವು 19.40 ಡಿಗ್ರಿ ಸೆಲ್ಸಿಯಸ್ ಆಗಿದೆ.

Rain thundershowers very likely to occur at isolated places over the State from March 29

ರಾಜ್ಯದ ಪ್ರಮುಖ ನಗರಗಳಲ್ಲಿ ತಾಪಮಾನ:

ಬೆಂಗಳೂರಿನಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 54ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 4 ಕಿ.ಮೀ ಆಗಿದೆ. ಬಾಗಲಕೋಟೆ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21ರಷ್ಟು ತೇವಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ , 58ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 33ರಷ್ಟು ತೇವಾಂಶ, ಇದೆ. ಮೈಸೂರು 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 41ರಷ್ಟು ತೇವಾಂಶ, ಬಳ್ಳಾರಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25ರಷ್ಟು ತೇವಾಂಶ ದಾಖಲಾಗಿದೆ.

Rain thundershowers very likely to occur at isolated places over the State from March 29

ರಾಯಚೂರು 40 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27ರಷ್ಟು ತೇವಾಂಶ, ಚಿತ್ರದುರ್ಗ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 49ರಷ್ಟು ತೇವಾಂಶ, ಕಲಬುರಗಿ 41 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24ರಷ್ಟು ತೇವಾಂಶ, ಚಿಕ್ಕಮಗಳೂರು 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 36ರಷ್ಟು ತೇವಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+