Inforgraphics: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಒಣಹವೆ

ಬೆಂಗಳೂರು, ಮಾರ್ಚ್ 30: ಕರ್ನಾಟಕದ ಹಲವು ಕಡೆಗಳಲ್ಲಿ ಗುರುವಾರ ಬೆಳಗ್ಗೆವರೆಗೂ ಮಳೆಯಾಗುವ ನಿರೀಕ್ಷೆಯಿದೆ. ಬುಧವಾರ ಕೊಡಗು ಮತ್ತು ಹಾವೇರಿ ಜಿಲ್ಲೆಗಳ ಕೆಲವೆಡೆ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಒಂದೆರೆಡು ಕಡೆಗಳಲ್ಲಿ ಅಲ್ಪಸ್ವಲ್ಪ ಮಳೆಯಾಗಿದೆ. ಕೊಡಗು ಜಿಲ್ಲೆಯ ಮುರ್ನಾಡು, ನಾಪೊಕ್ಲು, ಹಾವೇರಿ ಜಿಲ್ಲೆಯ ಅಕ್ಕಿ ಆಲೂರು, ಕೊಡಗು ಜಿಲ್ಲೆಯ ಭಾಗಮಂಡಲ ಪ್ರದೇಶದಲ್ಲಿ ಸಾಧಾರಣ ಮಳೆಯಾಗಿದೆ.

ರಾಜ್ಯದಲ್ಲಿ ಮುಂದಿನ 24 ಗಂಟೆಗಳಲ್ಲಿ ಹೊರನೋಟವನ್ನು ನೋಡುವುದಾದರೆ ವಾತಾವರಣದಲ್ಲಿ ಯಾವುದೇ ದೊಡ್ಡ ಪ್ರಮಾಣದ ಬದಲಾವಣೆಗಳು ಆಗುವುದಿಲ್ಲ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Rain Thundershowers Very Likely to Occur at Isolated Places Over the State From March 30

ಬೆಂಗಳೂರಿನಲ್ಲಿ ಹೇಗಿದೆ ವಾತಾವರಣ?:

ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿಡ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆಗಳಿವೆ. ಬೆಳಗಿನ ಜಾವ ಬಹುತೇಕ ಪ್ರದೇಶಗಳಲ್ಲಿ ಮಂಜು ಮುಜುಕಿನ ವಾತಾವರಣ ನಿರ್ಮಾಣವಾಗಲಿದ್ದು, ಬೆಂಗಳೂರಿನಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 22 ಡಿಗ್ರಿ ತೇವಾಂಶ ದಾಖಲಾಗಿದೆ.

Rain Thundershowers Very Likely to Occur at Isolated Places Over the State From March 30

ಗರಿಷ್ಠ ತಾಪಮಾನ ಮತ್ತು ಕನಿಷ್ಠ ತಾಪಮಾನ ಎಷ್ಟಿದೆ?

ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 42.4 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ಉಷ್ಣಾಂಶ 19.40 ಡಿಗ್ರಿ ಸೆಲ್ಸಿಯಸ್ ಆಗಿದೆ. ಅತಿಹೆಚ್ಚಿನ ಉಷ್ಣಾಂಶವು ರಾಯಚೂರು ಜಿಲ್ಲೆಯಲ್ಲಿ ದಾಖಲಾಗಿದ್ದು, ಗರಿಷ್ಠ ಉಷ್ಣಾಂಶ 42.4 ಡಿಗ್ರಿ ಸೆಲ್ಸಿಯಸ್ ಆಗಿದೆ. ಅದೇ ರೀತಿ ಕನಿಷ್ಠ ಉಷ್ಣಾಂಶವು ರಾಜ್ಯದ ಸಮತಟ್ಟು ಪ್ರದೇಶದಲ್ಲಿರುವ ಬೀದರ್ ನಲ್ಲಿ ದಾಖಲಾಗಿದೆ. ಈ ಪ್ರದೇಶದಲ್ಲಿ ಕನಿಷ್ಠ ಉಷ್ಣಾಂಶವು 19.40 ಡಿಗ್ರಿ ಸೆಲ್ಸಿಯಸ್ ಆಗಿದೆ.

Rain Thundershowers Very Likely to Occur at Isolated Places Over the State From March 30

ರಾಜ್ಯದ ಪ್ರಮುಖ ನಗರಗಳಲ್ಲಿ ತಾಪಮಾನ:

ಬೆಂಗಳೂರಿನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 35ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 24 ಕಿ.ಮೀ ಆಗಿದೆ. ಬಾಗಲಕೋಟೆ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 08ರಷ್ಟು ತೇವಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ , 51ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 28ರಷ್ಟು ತೇವಾಂಶ ಇದೆ. ಮೈಸೂರು 36 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 36ರಷ್ಟು ತೇವಾಂಶ, ಬಳ್ಳಾರಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26ರಷ್ಟು ತೇವಾಂಶ ದಾಖಲಾಗಿದೆ.

Rain Thundershowers Very Likely to Occur at Isolated Places Over the State From March 30

ರಾಯಚೂರು 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25ರಷ್ಟು ತೇವಾಂಶ, ಚಿತ್ರದುರ್ಗ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 39ರಷ್ಟು ತೇವಾಂಶ, ಕಲಬುರಗಿ 41 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11ರಷ್ಟು ತೇವಾಂಶ, ಚಿಕ್ಕಮಗಳೂರು 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 31ರಷ್ಟು ತೇವಾಂಶ ದಾಖಲಾಗಿದೆ.

Recommended Video

      Pakistan ರಾಜಕೀಯ ಬಿಕ್ಕಟ್ಟು: ಪಾಕ್‌ನ ನೂತನ ಪ್ರಧಾನಿ ಯಾರು? | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+