Infographics: ಕರ್ನಾಟಕದಲ್ಲಿ ಸೆ.7ರವೆರಗೂ ಧಾರಾಕಾರ ಮಳೆ
ಬೆಂಗಳೂರು, ಸೆಪ್ಟೆಂಬರ್ 03: ಕರ್ನಾಟಕದ ನೈಋತ್ಯ ಮುಂಗಾರು ಅತಿಚುರುಕಾಗಿದ್ದು ಸೆಪ್ಟೆಂಬರ್ 07ರವರೆಗೂ ಹಲವೆಡೆ ಧಾರಾಕಾರ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಇದಲ್ಲದೇ ಕರಾವಳಿ ಹಾಗೂ ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಮುಂದಿನ ಮೂರು ದಿನ ಮಳೆ ಅಷ್ಟಾಗಿ ಬಾರದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೂರು ದಿನಗಳ ನಂತರ ಮತ್ತೆ ಮಳೆ ತುಸು ಚುರುಕಾಗುವ ಲಕ್ಷಣಗಳು ಇವೆ. ಹೀಗಾಗಿ ಈ ಎರಡು ಭಾಗದ ಏಳು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.
ಕರ್ನಾಟಕ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಕರಾವಳಿಯ ಒಂದೆರೆಡು ಕಡೆಗಳಲ್ಲಿ ಮಳೆ ಮತ್ತು ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರ ಹೊರತಾಗಿ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಯಿಲ್ಲ ಎಂದು ಹೇಳಿದೆ.

ಸಿಲಿಕಾನ್ ಸಿಟಿಯಲ್ಲಿ ಹೇಗಿದೆ ವಾತಾವರಣ?
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿಡ ವಾತಾವರಣವಿದ್ದು, ಗುಡುಗು ಸಹಿತ ಮಳೆಯಾಗಿದೆ. ನಗರದ ಕೆಲವು ಕಡೆಗಳಲ್ಲಿ ಒಂದೆರೆಡು ಬಾರಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದರ ಹೊರತಾಗಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಅದೇ ರೀತಿ ಮುಂದಿನ 48 ಗಂಟೆಗಳಲ್ಲಿ ಸಿಲಿಕಾನ್ ಸಿಟಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಇದೇ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ವಾತಾವರಣ?
ಕರ್ನಾಟಕದ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಇದರ ಹೊರತಾಗಿ ಉತ್ತರ ಒಳನಾಡಿನ ಒಂದೆರೆಡು ಕಡೆಯಲ್ಲಿ ಮಳೆ ಆಗಲಿದೆ. ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಎಂದು ತಿಳಿದು ಬಂದಿದೆ.

ಕರಾವಳಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ
ಮುಂದಿನ 48 ಗಂಟೆಗಳಲ್ಲಿ ಕರಾವಳಿ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು ರಾಮನಗರ ಜಿಲ್ಲೆಯ ಒಂದೆರೆಡು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ
ಬೆಂಗಳೂರಿನಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 60ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 16 ಕಿ.ಮೀ ಆಗಿದೆ. ಬಾಗಲಕೋಟೆ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 60ರಷ್ಟು ತೇವಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 71ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 67ರಷ್ಟು ತೇವಾಂಶ ಇದೆ. ಮೈಸೂರು 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 67 ತೇವಾಂಶ, ಬಳ್ಳಾರಿಯಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 57ರಷ್ಟು ತೇವಾಂಶ ದಾಖಲಾಗಿದೆ.
ರಾಯಚೂರು 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 51ರಷ್ಟು ತೇವಾಂಶ, ಚಿತ್ರದುರ್ಗ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 66ರಷ್ಟು ತೇವಾಂಶ, ಕಲಬುರಗಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 55ರಷ್ಟು ತೇವಾಂಶ, ಚಿಕ್ಕಮಗಳೂರು 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 64ರಷ್ಟು ತೇವಾಂಶ ದಾಖಲಾಗಿದೆ.












Click it and Unblock the Notifications