Infographics: ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆ ಅಬ್ಬರ
ಬೆಂಗಳೂರು, ಸೆಪ್ಟೆಂಬರ್ 09: ಸಿಲಿಕಾನ್ ಸಿಟಿಯಲ್ಲಿ ಸುರಿಯುತ್ತಿರುವ ಮಳೆಗೆ ಈಗಾಗಲೇ ರಾಜಧಾನಿ ಮಂದಿ ಹೈರಾಣಾಗಿದ್ದಾರೆ. ಇದರ ಮಧ್ಯೆ ಇನ್ನೂ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರ್ನಾಟಕದ ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಅತಿಚುರುಕಾಗಿದ್ದು ಸೆಪ್ಟೆಂಬರ್ 11ರವರೆಗೂ ಹಲವೆಡೆ ಧಾರಾಕಾರ ಮಳೆಯಾಗಲಿದೆ. ಇದಲ್ಲದೇ ಕರಾವಳಿ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಹಲವು ಸ್ಥಳಗಳಲ್ಲಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ (IMD) ತಿಳಿಸಿದೆ.
ಬಂಗಾಳಕೊಲ್ಲಿ ಸಮುದ್ರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಸಮುದ್ರ ಮಟ್ಟದಿಂದ ಸುಮಾರು 6 ಕಿ.ಮೀ. ಎತ್ತರವಿರುವ ಈ ವಾಯುಭಾರ ಕುಸಿತವು ಆಂಧ್ರ ಪ್ರದೇಶದ ಉತ್ತರ ಕರಾವಳಿ, ಒಡಿಶಾ ದಕ್ಷಿಣ ಕರಾವಳಿ ಮಾರ್ಗವಾಗಿ ಸಾಗಲಿದೆ. ಇದೇ ಭಾಗದಲ್ಲಿ ಸಮುದ್ರ ಮೇಲ್ಮೈ ಸುಳಿಗಾಳಿ ಸಹ ವ್ಯಾಪಿಸುತ್ತಿದೆ. ಇನ್ನೂ ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಸಹ ಸುಳಿಗಾಳಿ ಎದ್ದಿದ್ದು, ಅದು ರಾಜ್ಯದ ಉತ್ತರ ಒಳನಾಡಿನತ್ತ ಬೀಸುತ್ತಿದೆ.

ಸಿಲಿಕಾನ್ ಸಿಟಿಯಲ್ಲಿ ಹೇಗಿದೆ ವಾತಾವರಣ?
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿಡ ವಾತಾವರಣವಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಗರದ ಕೆಲವು ಕಡೆಗಳಲ್ಲಿ ಒಂದೆರೆಡು ಬಾರಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದರ ಹೊರತಾಗಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಅದೇ ರೀತಿ ಮುಂದಿನ 48 ಗಂಟೆಗಳಲ್ಲಿ ಸಿಲಿಕಾನ್ ಸಿಟಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಇದೇ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ವಾತಾವರಣ?
ಕರ್ನಾಟಕದ ಕರಾವಳಿಯ ಮತ್ತು ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇದರ ಹೊರತಾಗಿ ಉತ್ತರ ಒಳನಾಡಿನ ಒಂದೆರೆಡು ಕಡೆಯಲ್ಲಿ ಮಳೆ ಆಗಲಿದೆ. ಇದರ ಹೊರತಾಗಿ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇರುವುದಿಲ್ಲ.

ಕರಾವಳಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ
ಮುಂದಿನ 48 ಗಂಟೆಗಳಲ್ಲಿ ಕರಾವಳಿ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿಯಲ್ಲಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯ ಒಂದೆರೆಡು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ.

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ
ಬೆಂಗಳೂರಿನಲ್ಲಿ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 74ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 43 ಕಿ.ಮೀ ಆಗಿದೆ. ಬಾಗಲಕೋಟೆ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 72ರಷ್ಟು ತೇವಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 78ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 75ರಷ್ಟು ತೇವಾಂಶ ಇದೆ. ಮೈಸೂರು 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 63 ತೇವಾಂಶ, ಬಳ್ಳಾರಿಯಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 66ರಷ್ಟು ತೇವಾಂಶ ದಾಖಲಾಗಿದೆ.
ರಾಯಚೂರು 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 63ರಷ್ಟು ತೇವಾಂಶ, ಚಿತ್ರದುರ್ಗ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 67ರಷ್ಟು ತೇವಾಂಶ, ಕಲಬುರಗಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 68ರಷ್ಟು ತೇವಾಂಶ, ಚಿಕ್ಕಮಗಳೂರು 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 68ರಷ್ಟು ತೇವಾಂಶ ದಾಖಲಾಗಿದೆ.












Click it and Unblock the Notifications