Infographics: ರಾಜ್ಯದಲ್ಲಿ ಸೆ.19ರವರೆಗೂ ಮಳೆ ಮುಂದುವರಿಕೆ

ಬೆಂಗಳೂರು, ಸೆಪ್ಟೆಂಬರ್ 17: ನೈಋತ್ಯ ಮುಂಗಾರು ಒಳನಾಡಿನಲ್ಲಿ ದುರ್ಬಲವಾಗಿದ್ದು, ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ ಎಂದು ರಾಜ್ಯದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ. ಸೆಪ್ಟೆಂಬರ್ 19ರವರೆಗೂ ಹಲವೆಡೆ ಮಳೆ ಮುಂದುವರಿಯಲಿದೆ.

ಕರ್ನಾಟಕದ ಕರಾವಳಿಯ ಮತ್ತು ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಮಳೆಯಿಂದ ಕೂಡಿದ ವಾತಾವರಣ

ಸಿಲಿಕಾನ್ ಸಿಟಿಯಲ್ಲಿ ಮಳೆಯಿಂದ ಕೂಡಿದ ವಾತಾವರಣ

ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿಡ ವಾತಾವರಣವಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಗರದ ಕೆಲವು ಕಡೆಗಳಲ್ಲಿ ಒಂದೆರೆಡು ಬಾರಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದರ ಹೊರತಾಗಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಅದೇ ರೀತಿ ಮುಂದಿನ 48 ಗಂಟೆಗಳಲ್ಲಿ ಸಿಲಿಕಾನ್ ಸಿಟಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಇದೇ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ವಾತಾವರಣ?

ಮುಂದಿನ 24 ಗಂಟೆಗಳಲ್ಲಿ ವಾತಾವರಣ?

ಕರ್ನಾಟಕದ ಕರಾವಳಿಯ ಮತ್ತು ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇದರ ಹೊರತಾಗಿ ಉತ್ತರ ಒಳನಾಡಿನ ಒಂದೆರೆಡು ಕಡೆಯಲ್ಲಿ ಮಳೆ ಆಗಲಿದೆ. ಇದರ ಹೊರತಾಗಿ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇರುವುದಿಲ್ಲ.

ಕರಾವಳಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ

ಕರಾವಳಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ

ಮುಂದಿನ 48 ಗಂಟೆಗಳಲ್ಲಿ ಕರಾವಳಿ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಯಾದಗಿರಿಯಲ್ಲಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯ ಒಂದೆರೆಡು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ.

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ

ಬೆಂಗಳೂರಿನಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 50ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 45 ಕಿ.ಮೀ ಆಗಿದೆ. ಬಾಗಲಕೋಟೆ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 65ರಷ್ಟು ತೇವಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 78ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 60ರಷ್ಟು ತೇವಾಂಶ ಇದೆ. ಮೈಸೂರು 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 55 ತೇವಾಂಶ, ಬಳ್ಳಾರಿಯಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 35ರಷ್ಟು ತೇವಾಂಶ ದಾಖಲಾಗಿದೆ.

ರಾಯಚೂರು 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 50ರಷ್ಟು ತೇವಾಂಶ, ಚಿತ್ರದುರ್ಗ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 55ರಷ್ಟು ತೇವಾಂಶ, ಕಲಬುರಗಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 58ರಷ್ಟು ತೇವಾಂಶ, ಚಿಕ್ಕಮಗಳೂರು 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 65ರಷ್ಟು ತೇವಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+