Infographics: ಕರ್ನಾಟಕದಾದ್ಯಂತ ಮುಂದುವರಿದ ಮುಂಗಾರಿನ ಅಬ್ಬರ

ಬೆಂಗಳೂರು, ಜುಲೈ 11: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು ಜುಲೈ 15ರವರೆಗೂ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕರಾವಳಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇದರ ಹೊರತಾಗಿ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಯಿಲ್ಲ ಎಂದು ರಾಜ್ಯ ಹವಾಮಾನ ಇಲಾಖೆಯು ಮಾಹಿತಿ ನೀಡಿದೆ.

ರಾಜ್ಯದಲ್ಲಿ 24 ಗಂಟೆಗಳಲ್ಲಿ ಮಳೆಯೋ ಮಳೆ: ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯ ಒಂದೆರೆಡು ಕಡೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಮತ್ತು ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಿಲಿಕಾನ್ ಸಿಟಿಯಲ್ಲಿ ಹೇಗಿದೆ ವಾತಾವರಣ?

ಸಿಲಿಕಾನ್ ಸಿಟಿಯಲ್ಲಿ ಹೇಗಿದೆ ವಾತಾವರಣ?

ಬೆಂಗಳೂರು ನಗರದಲ್ಲಿ ಕಳೆದ ಮೂರ್ನಾಲ್ಕು ದಿನದಿಂದ ಜಿಟಿ ಜಿಟಿ ಮಳೆ ಹಿಡಿದಿದೆ. ಸಾಮಾನ್ಯವಾಗಿ ಮೋಡ ಕವಿದ ಹಾಗೂ ಚಳಿಯ ವಾತಾವರಣ ನಿರ್ಮಾಣವಾಗಿದೆ. ಇದರ ಹೊರತಾಗಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಅದೇ ರೀತಿ ಮುಂದಿನ ನಾಲ್ಕು ದಿನವು ಸಹ ಸಿಲಿಕಾನ್ ಸಿಟಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಇದೇ ರೀತಿಯ ವಾತಾವರಣ ಮುಂದುವರಿಯಲಿದ್ದು, ಸಾಧಾರಣವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ಮಳೆ ಮುನ್ಸೂಚನೆ

ಮುಂದಿನ 24 ಗಂಟೆಗಳಲ್ಲಿ ಮಳೆ ಮುನ್ಸೂಚನೆ

ಕರ್ನಾಟಕದ ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಎಲ್ಲಾ ಜಿಲ್ಲೆಗಳ ಹಲವು ಕಡೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಒಂದೆರೆಡು ಕಡೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರ ಹೊರತಾಗಿಯೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದ ಮತ್ತು ಹಾಸನದ ಒಂದೆರೆಡು ಕೆಡಗಳಲ್ಲಿ ಅತಿಯಾದ ಮಳೆ ಬೀಳಲಿದೆ ಎಂದು ಅಂದಾಜಿಸಲಾಗಿದೆ.

ಕರಾವಳಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ

ಕರಾವಳಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಯ ಒಂದೆರೆಡು ಕಡೆಗಳಲ್ಲಿ ಭಾರೀ ಮಳೆಯಾಗ ನಿರೀಕ್ಷೆ ಇದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಅತೀ ಭಾರಿ ಮಳೆ ಆಗಲಿದ್ದು, 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ ಸುಮಾರು 50 ಕಿಲೋ ಮೀಟರ್ ಇರಲಿದೆ. ಈ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ಸಂದೇಶವನ್ನು ನೀಡಲಾಗಿದೆ.

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ

ಬೆಂಗಳೂರಿನಲ್ಲಿ 25 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 70ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 60 ಕಿ.ಮೀ ಆಗಿದೆ. ಬಾಗಲಕೋಟೆ 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 74ರಷ್ಟು ತೇವಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 87ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 24 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 84ರಷ್ಟು ತೇವಾಂಶ ಇದೆ. ಮೈಸೂರು 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 76 ತೇವಾಂಶ, ಬಳ್ಳಾರಿಯಲ್ಲಿ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 87ರಷ್ಟು ತೇವಾಂಶ ದಾಖಲಾಗಿದೆ.

ರಾಯಚೂರು 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 68ರಷ್ಟು ತೇವಾಂಶ, ಚಿತ್ರದುರ್ಗ 25 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 77ರಷ್ಟು ತೇವಾಂಶ, ಕಲಬುರಗಿ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 78ರಷ್ಟು ತೇವಾಂಶ, ಚಿಕ್ಕಮಗಳೂರು 25 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 80ರಷ್ಟು ತೇವಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+