Infographics: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆ

ಬೆಂಗಳೂರು, ಜುಲೈ 12: ಕಳೆದೊಂದು ವಾರಕ್ಕೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿ ನೈಋತ್ಯ ಮುಂಗಾರಿನ ತೀವ್ರತೆ ಮಂಗಳವಾರಕ್ಕೆ ತುಸು ಕಡಿಮೆ ಆಗಿದೆ. ಹೀಗಿದ್ದರು ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಜು.17ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇದರ ಹೊರತಾಗಿ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಯಿಲ್ಲ ಎಂದು ರಾಜ್ಯ ಹವಾಮಾನ ಇಲಾಖೆಯು ಮಾಹಿತಿ ನೀಡಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರಗಿ ಜಿಲ್ಲೆಗಳು ಹಾಗೂ ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಿಲಿಕಾನ್ ಸಿಟಿಯ ಹವಾಮಾನ ಮುನ್ಸೂಚನೆ

ಸಿಲಿಕಾನ್ ಸಿಟಿಯ ಹವಾಮಾನ ಮುನ್ಸೂಚನೆ

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ಹಾಗೂ ಚಳಿಯ ವಾತಾವರಣ ನಿರ್ಮಾಣವಾಗಿದೆ. ಇದರ ಹೊರತಾಗಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಆಗಿದ್ದರೆ, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಅದೇ ರೀತಿ ಮುಂದಿನ ಐದು ದಿನವು ಸಹ ಸಿಲಿಕಾನ್ ಸಿಟಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಇದೇ ರೀತಿಯ ವಾತಾವರಣ ಮುಂದುವರಿಯಲಿದ್ದು, ಹಗುರದಿಂದ ಸಾಧಾರಣವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ಮಳೆ ಮುನ್ಸೂಚನೆ

ಮುಂದಿನ 24 ಗಂಟೆಗಳಲ್ಲಿ ಮಳೆ ಮುನ್ಸೂಚನೆ

ಕರ್ನಾಟಕದ ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಎಲ್ಲಾ ಜಿಲ್ಲೆಗಳ ಹಲವು ಕಡೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಒಂದೆರೆಡು ಕಡೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರ ಹೊರತಾಗಿಯೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದ, ಹಾಸನ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೀದರ್ ಸೇರಿ ಕೆಲವು ಜಿಲ್ಲೆಗಳ ಹಲವೆಡೆ ಸಾಧಾರಣದಿಂದ ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಕರಾವಳಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ

ಕರಾವಳಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಯಾದಗಿರಿ ಕಲಬುರಗಿ, ಹಾವೇರಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಾಸನ, ಕೊಡಗು, ಚಿಕ್ಕಮಗಳೂರಿನ ಜಿಲ್ಲೆಯ ಒಂದೆರೆಡು ಕಡೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಅತೀ ಭಾರಿ ಮಳೆ ಆಗಲಿದ್ದು, 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ ಸುಮಾರು 50-55 ಕಿಲೋ ಮೀಟರ್ ಇರಲಿದೆ. ಈ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ಸಂದೇಶವನ್ನು ನೀಡಲಾಗಿದೆ.

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ

ಕರ್ನಾಟಕದ ಪ್ರಮುಖ ನಗರಗಳ ತಾಪಮಾನ

ಬೆಂಗಳೂರಿನಲ್ಲಿ 25 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 64ರಷ್ಟು ತೇವಾಂಶ ದಾಖಲಾಗಿದೆ. ಗಾಳಿಯ ವೇಗ ಗಂಟೆಗೆ 69 ಕಿ.ಮೀ ಆಗಿದೆ. ಬಾಗಲಕೋಟೆ 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 71ರಷ್ಟು ತೇವಾಂಶ, ಮಂಗಳೂರಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 72ರಷ್ಟು ತೇವಾಂಶ, ಶಿವಮೊಗ್ಗದಲ್ಲಿ 25 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 67ರಷ್ಟು ತೇವಾಂಶ ಇದೆ. ಮೈಸೂರು 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 59 ತೇವಾಂಶ, ಬಳ್ಳಾರಿಯಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 55ರಷ್ಟು ತೇವಾಂಶ ದಾಖಲಾಗಿದೆ.

ರಾಯಚೂರು 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 81ರಷ್ಟು ತೇವಾಂಶ, ಚಿತ್ರದುರ್ಗ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 63ರಷ್ಟು ತೇವಾಂಶ, ಕಲಬುರಗಿ 29ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 75ರಷ್ಟು ತೇವಾಂಶ, ಚಿಕ್ಕಮಗಳೂರು 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 65ರಷ್ಟು ತೇವಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+