ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜರಾಜೇಶ್ವರಿ ನಗರ ಉಪ ಚುನಾವಣೆ; ಅಂಕಿ ಸಂಖ್ಯೆಗಳು

|
Google Oneindia Kannada News

ಬೆಂಗಳೂರು, ಅಕ್ಟೋಬರ್ 25 : ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ನವೆಂಬರ್ 3ರಂದು ನಡೆಯಲಿದೆ. ಈಗಾಗಲೇ ಮೂರು ಪಕ್ಷಗಳು ಬಿರುಸಿನಿಂದ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿವೆ. ನವೆಂಬರ್ 10ರಂದು ಫಲಿತಾಂಶ ಪ್ರಕಟವಾಗಲಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆರ್. ಆರ್. ನಗರ ಕ್ಷೇತ್ರ ಬರುತ್ತದೆ. ನವೆಂಬರ್ 3ರಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆಯ ತನಕ ಮತದಾನ ನಡೆಯಲಿದೆ. ಒಟ್ಟು 16 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.

ಆರ್. ಆರ್. ನಗರ ಉಪ ಚುನಾವಣೆ; ಮುನಿರತ್ನ ಅನರ್ಹಗೊಳಿಸಲು ದೂರು ಆರ್. ಆರ್. ನಗರ ಉಪ ಚುನಾವಣೆ; ಮುನಿರತ್ನ ಅನರ್ಹಗೊಳಿಸಲು ದೂರು

ಆರ್. ಆರ್. ನಗರ ವ್ಯಾಪ್ತಿಯಲ್ಲಿ ಮತದಾನಕ್ಕಾಗಿ 678 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತದೆ. ಇವುಗಳಲ್ಲಿ 79 ಅತಿ ಸೂಕ್ಷ್ಮ ಮತಗಟ್ಟೆಗಳು. 2043 ಸಿಬ್ಭಂದಿಗಳನ್ನು ಚುನಾವಣಾ ಕಾರ್ಯಕ್ಕಾಗಿ ನಿಯೋಜನೆ ಮಾಡಲಾಗಿದೆ.

ಆರ್. ಆರ್. ನಗರ ಉಪ ಚುನಾವಣೆ; ಮುನಿರತ್ನ ನಾಮಪತ್ರ ವಾಪಸ್! ಆರ್. ಆರ್. ನಗರ ಉಪ ಚುನಾವಣೆ; ಮುನಿರತ್ನ ನಾಮಪತ್ರ ವಾಪಸ್!

Rajarajeshwari Nagar By Election Statics

ಒಟ್ಟು 4,62,201 ಮತದಾರರು ಇರುದ ದೊಡ್ಡ ಕ್ಷೇತ್ರ ಆರ್. ಆರ್. ನಗರ ಇವರಲ್ಲಿ 2,41,0498 ಪುರುಷ, 2,21,073 ಮಹಿಳಾ ಮತದಾರರು ಇದ್ದಾರೆ. ಇತರೆ ಮತದಾರರು 79.

ಆರ್. ಆರ್. ನಗರ ಚುನಾವಣೆ; ವೋಟರ್ ಐಡಿ ಕೊಡಿ ಎಂದು ಬೇಡಿಕೆ!ಆರ್. ಆರ್. ನಗರ ಚುನಾವಣೆ; ವೋಟರ್ ಐಡಿ ಕೊಡಿ ಎಂದು ಬೇಡಿಕೆ!

ಮತದಾನ ಮುಗಿದ ಬಳಿಕ ಮತಯಂತ್ರಗಳನ್ನು ಹಲಗೆವಡೇರಹಳ್ಳಿ ಮುಖ್ಯ ರಸ್ತೆಯಲ್ಲಿರುವ ಶ್ರೀ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ಇಡಲಾಗುತ್ತದೆ. ನವೆಂಬರ್ 10ರಂದು ಅಲ್ಲಿಯೇ ಮತ ಎಣಿಕೆ ನಡೆಯಲಿದೆ.

ಪ್ರಮುಖವಾಗಿ ಬಿಜೆಪಿಯಿಂದ ಮುನಿರತ್ನ, ಕಾಂಗ್ರೆಸ್‌ನಿಂದ ಹೆಚ್. ಕುಸುಮಾ ಮತ್ತು ಜೆಡಿಎಸ್‌ನಿಂದ ಪಿ. ಕೃಷ್ಣಮೂರ್ತಿ ಕಣದಲ್ಲಿದ್ದಾರೆ.

English summary
Rajarajeshwari Nagar by election will be held on November 3, 2020. Here are election statics.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X