
Infographics; ಕರ್ನಾಟಕದಲ್ಲಿ ಯಾರಿಗೆ ಎಷ್ಟು ಮೀಸಲಾತಿ?
ಬೆಂಗಳೂರು, ಅಕ್ಟೋಬರ್ 10; ಕರ್ನಾಟಕದಲ್ಲಿ ಮೀಸಲಾತಿ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಿಸುವ ಕುರಿತು ಸರ್ಕಾರ ಘೋಷಣೆ ಮಾಡಿದೆ.
ಪರಿಶಿಷ್ಟ ಜಾತಿಯ ಮೀಸಲಾತಿ ಪ್ರಮಾಣವನ್ನು ಶೇ 15 ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ 3 ರಿಂದ 7ಕ್ಕೆ ಹೆಚ್ಚಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
Breaking; ಎಸ್‌ಸಿ/ ಎಸ್‌ಟಿ ಮೀಸಲಾತಿ ಹೆಚ್ಚಳ, ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಿಸಲು ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.
ರಾಜ್ಯದಲ್ಲಿ ಎಸ್‌ಸಿ-ಎಸ್‌ಟಿ ಸಮುದಾಯಗಳಲ್ಲೇ ಒಳ ಮೀಸಲಾತಿ: ಸಿಎಂ
ಸರ್ವಪಕ್ಷ ಸಭೆಯ ಬಳಿಕ ಮಾತನಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ನ್ಯಾಯಮೂರ್ತಿ ಎಚ್. ಎನ್. ನಾಗಮೋಹನದಾಸ್ ಆಯೋಗದ ಶಿಫಾರಸಿನಂತೆ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ 15 ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ 3 ರಿಂದ 7ಕ್ಕೆ ಹೆಚ್ಚಿಸಲು ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ" ಎಂದು ಹೇಳಿದ್ದರು.
SC- ST ಮೀಸಲಾತಿ ಹೆಚ್ಚಳ: ಶೀಘ್ರವೇ ಗೆಜೆಟ್ ಅಧಿಸೂಚನೆ: ಸಿಎಂ ಬೊಮ್ಮಾಯಿ
"ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳದಿಂದ ಇತರ ಯಾವುದೇ ಸಮುದಾಯಗಳ ಮೀಸಲಾತಿ ಕಡಿತವಾಗುವುದಿಲ್ಲ. ಎಲ್ಲಾ ಸಮುದಾಯಗಳ ಮೀಸಲಾತಿ ಪ್ರಮಾಣ ಈಗಿನಂತೆ ಮುಂದುವರೆಯಲಿದೆ. ಎಸ್‌ಸಿ, ಎಸ್‌ಟಿ ಸಮುದಾಯಗಳ ಮೀಸಲಾತಿ ಪ್ರಮಾಣ ಮಾತ್ರ ಹೆಚ್ಚಳವಾಗಲಿದೆ" ಎಂದು ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಿದ್ದರು.

ಬಳಿಕ ಶನಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿ ಪ್ರಮಾಣ ಏರಿಕೆ ಮಾಡಲು ಒಪ್ಪಿಗೆ ನೀಡಲಾಗಿತ್ತು. ಈಗ ಕರ್ನಾಟಕದಲ್ಲಿ ಯಾವ ಸಮುದಾಯಕ್ಕೆ ಎಷ್ಟು ಮೀಸಲಾತಿ ಇದೆ ಎಂದು ಚರ್ಚೆಗಳು ನಡೆಯುತ್ತಿವೆ.
ರಾಜ್ಯದಲ್ಲಿ ಯಾರಿಗೆ ಎಷ್ಟು ಮೀಸಲಾತಿ ಇದೆ ಎಂಬ ವಿವರ ಇಲ್ಲಿದೆ. ಪರಿಶಿಷ್ಟರಿಗೆ ಶೇ 18 ಮತ್ತು ಹಿಂದುಳಿದ ವರ್ಗಕ್ಕೆ ಶೇ 32ರಷ್ಟು ಮೀಸಲಾತಿ ಸದ್ಯ ಇದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಕೆಟಗರಿ-1, ಕೆಟಗರಿ -2 (ಎ), ಕೆಟಗರಿ 2 (ಬಿ), ಕೆಟಗರಿ 3 (ಎ), ಕೆಟಗರಿ 3 (ಬಿ)ಗೆ ಎಷ್ಟು ಮೀಸಲಾತಿ ಇದೆ ಎಂಬ ವಿವರಗಳು ಇಲ್ಲಿವೆ.
ಪರಿಶಿಷ್ಟ ಜಾತಿ ಶೇ 15, ಪರಿಶಿಷ್ಟ ಪಂಗಡ ಶೇ 03, ಹಿಂದುಳಿದ ವರ್ಗ ಕೆಟಗರಿ-1 ಶೇ 04, ಕೆಟಗರಿ 2 (ಎ) ಶೇ 15, ಕೆಟಗರಿ 2 (ಬಿ) ಶೇ 04, ಕೆಟಗರಿ 3 (ಎ) ಶೇ 04, ಕೆಟಗರಿ 3 (ಬಿ) ಶೇ 05 ಮೀಸಲಾತಿ ಇದೆ.