ಗುಜರಾತ್, ಹಿಮಾಚಲ ಚುನಾವಣೆ, ವಶಕ್ಕೆ ಪಡೆದ ವಸ್ತುಗಳ ಪಟ್ಟಿ
ನವದೆಹಲಿ, ನವೆಂಬರ್ 11; ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12ರಂದು ಮತದಾನ ನಡೆಯಲಿದೆ. ಎರಡೂ ರಾಜ್ಯಗಳ ಚುನಾವಣಾ ಫಲಿತಾಂಶ ಡಿಸೆಂಬರ್ 8ರಂದು ಪ್ರಕಟವಾಗಲಿದೆ.
ಕೇಂದ್ರ ಚುನಾವಣಾ ಆಯೋಗ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ವಶಪಡಿಸಿಕೊಂಡ ಮದ್ಯ, ಹಣ, ಐಷಾರಾಮಿ ವಸ್ತುಗಳ ಮಾಹಿತಿ ನೀಡಿದೆ. 2017ಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಹಿಮಾಚಲ ಪ್ರದೇಶದಲ್ಲಿ 5 ಪಟ್ಟು ಹೆಚ್ಚಿನ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಅಕ್ರಮ ರಹಿತವಾಗಿ ಚುನಾವಣೆ ನಡೆಯಲು ಜನರು ಸಹ ಸಹಕಾರ ನೀಡಬೇಕು ಎಂದು ಕೇಂದ್ರ ಚುನಾವಣಾ ಆಯೋಗ ಮನವಿ ಮಾಡಿದೆ. C-vigil ಅಪ್ಲಿಕೇಶನ್ ಬಳಕೆ ಮಾಡುವ ಮೂಲಕ ಅಕ್ರಮ ತಡೆಗಟ್ಟಲು ಸಹಕರಿಸಿ ಎಂದು ಆಯೋಗ ಹೇಳಿದೆ.
ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಹಿಮಾಚಲ ಪ್ರದೇಶದಲ್ಲಿ 50.28 ಕೋಟಿ ರೂ.ಗಳು ಮತ್ತು ಗುಜರಾತ್ ರಾಜ್ಯದಲ್ಲಿ 71.88 ಕೋಟಿ ರೂ.ಗಳ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಗುಜರಾತ್ ವಿಧಾನಸಭೆ ಚುನಾವಣೆ ಡಿಸೆಂಬರ್ 1 ಮತ್ತು 5ರಂದು ನಡೆಯಲಿದೆ.

ವಿಶೇಷ ಕಣ್ಗಾವಲು, ವಿವಿಧ ಇಲಾಖೆಗಳ ಸಹಯೋಗ, ಜನರ ಸಹಕಾರದ ಮೂಲಕ ನ್ಯಾಯಸಮ್ಮತ ಚುನಾವಣೆ ನಡೆಯುವಂತೆ ಚುನಾವಣಾ ಆಯೋಗ ಕ್ರಮಗಳನ್ನು ಕೈಗೊಂಡಿದೆ. ಚುನಾವಣಾ ದಿನಾಂಕ ಘೋಷಣೆಯ ಪತ್ರಿಕಾಗೋಷ್ಠಿಯಲ್ಲಿಯೇ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅಕ್ರಮ ರಹಿತವಾಗಿ ಚುನಾವಣೆ ನಡೆಸಲು ಆಯೋಗ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ್ದರು.
ಯಾವ ರಾಜ್ಯದಲ್ಲಿ ಎಷ್ಟು ವಶಕ್ಕೆ?; ಗುಜರಾತ್ ರಾಜ್ಯದಲ್ಲಿ ಇದುವರೆಗೂ ನಡೆಸಿದ ಕಾರ್ಯಾಚರಣೆಯಲ್ಲಿ 71.88 ಕೋಟಿ ರೂ. ಮೊತ್ತದ ವಸ್ತುಗಳನ್ನು ಆಯೋಗ ವಶಕ್ಕೆ ಪಡೆದಿದೆ. ಹಿಮಾಚಲ ಪ್ರದೇಶದಲ್ಲಿ 50.28 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. 2017ರ ಚುನಾವಣೆಯಲ್ಲಿ 9.03 ಕೋಟಿ ರೂ. ಮೌಲ್ಯದ ವಸ್ತುಗಳು ಸಿಕ್ಕಿದ್ದವು.
ಎರಡೂ ರಾಜ್ಯಗಳಲ್ಲಿ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನವೇ ಖರ್ಚು ವೆಚ್ಚಗಳ ಮೇಲೆ ನಿಗಾ ಇಡಲಾಗಿತ್ತು. ಇದಕ್ಕಾಗಿ ಅನುಭವಿಗಳಾದ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಎರಡೂ ರಾಜ್ಯಗಳಲ್ಲಿ ಸೂಕ್ಷ್ಮ, ಅತಿ ಸೂಕ್ಷ್ಮ ವಿಧಾನಸಭಾ ಕ್ಷೇತ್ರಗಳನ್ನು ಗುರುತಿಸಲಾಗಿದೆ. ಇಲ್ಲಿ ವೆಚ್ಚದ ಮೇಲೆ ನಿಗಾ ಇಡಲು ಗ್ರಾಮ ಮಟ್ಟದ ತಂಡಗಳನ್ನು ರಚನೆ ಮಾಡಲಾಗಿದೆ.
ಗುಜರಾತ್ ರಾಜ್ಯದಲ್ಲಿ ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಸುಮಾರು 1,10,000 ಲೀಟರ್ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ, ಇದರ ಮಾರುಕಟ್ಟೆ ಮೌಲ್ಯ ಸುಮಾರು 3.86 ಎಂದು ಅಂದಾಜಿಸಲಾಗಿದೆ.
ರಾಜ್ಯದ ಮುಂದ್ರಾ ಬಂದರಿನಿಂದ ಸರಿಯಾದ ದಾಖಲೆಗಳು ಇಲ್ಲದ ಸುಮಾರು 64 ಕೋಟಿ ರೂ. ಮೊತ್ತದ ಆಟಿಕೆಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ರಾಜ್ಯಕ್ಕೆ 69 ವೆಚ್ಚ ಪರಿವೀಕ್ಷಕರನ್ನು ನೇಮಕಮಾಡಲಾಗಿದೆ. ಅತಿ ಹೆಚ್ಚು ವೆಚ್ಚವಾಗಲಿದೆ ಎಂಬ 27 ವಿಧಾನಸಭಾ ಕ್ಷೇತ್ರಗಳನ್ನು ಆಯೋಗ ಪಟ್ಟಿ ಮಾಡಿದೆ.

ಕೇಂದ್ರ ಚುನಾವಣಾ ಆಯೋಗದ ತಂಡ ಎರಡು ರಾಜ್ಯಗಳಿಗೆ ಭೇಟಿ ನೀಡಿದಾಗ ಜಿಲ್ಲಾಡಳಿತ, ಪೊಲೀಸ್ ಇಲಾಖೆಗಳ ಜೊತೆ ಸರಣಿ ಸಭೆಗಳನ್ನು ನಡೆಸಿದ್ದು, ಅಕ್ರಮ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ದೇಶನಗಳನ್ನು ನೀಡಿದೆ. ಹಿಮಾಚಲ ಪ್ರದೇಶಕ್ಕೆ ಆಯೋಗ ಭೇಟಿ ನೀಡಿದಾಗ ಗಣಿಗಾರಿಕೆ ನಡೆಯುವ ಪ್ರದೇಶಗಳಲ್ಲಿ ಕಣ್ಗಾವಲು ಹೆಚ್ಚಿಸುವಂತೆ ಸೂಚನೆ ನೀಡಲಾಗಿತ್ತು.
ಆದಾಯ ಇಲಾಖೆಯ ಸಹಕಾರ; ಆದಾಯ ತೆರಿಗೆ ಇಲಾಖೆಯ ತನಿಖಾ ವಿಭಾಗ ಹಿಮಾಚಲ ಪ್ರದೇಶದ 27 ಪ್ರದೇಶಗಳಲ್ಲಿ ಕಲ್ಲು ಗಣಿಗಾರಿಕೆ ಪ್ರದೇಶದ ಮೇಲೆ ದಾಳಿ ಮಾಡಿತ್ತು, ದಾಳಿಯ ವೇಳೆ ಹಣವನ್ನು ವಶಕ್ಕೆ ಪಡೆಯಲಾಗಿತ್ತು. ಇದೇ ತಂಡ ರಾಜ್ಯದಲ್ಲಿ ಅಕ್ರಮವಾಗಿ ಮದ್ಯ ತಯಾರು ಮಾಡುವ ಘಟಕದ ಮೇಲೆಯೂ ದಾಳಿ ಮಾಡಿತ್ತು. ಚುನಾವಣಾ ಆಯೋಗವು ರಾಜ್ಯದಲ್ಲಿ ಅಕ್ರಮ ತಡೆಯಲು 23 ವೆಚ್ಚ ವೀಕ್ಷಕರನ್ನು ನೇಮಕ ಮಾಡಿದೆ.
ನವೆಂಬರ್ 7ರಂದು ಚುನಾವಣಾ ಆಯೋಗ ಹಿಮಾಚಲ ಪ್ರದೇಶದ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿ (ಗೃಹ), ಡಿಜಿಪಿ, ಡಿಜಿ (ಆದಾಯ ತೆರಿಗೆ), ಅಬಕಾರಿ ಆಯುಕ್ತರು, ಐಜಿಪಿಗಳು ಅಕ್ಕಪಕ್ಕದ ರಾಜ್ಯಗಳ ಚುನಾವಣಾ ಆಯುಕ್ತರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿತು. ಅಕ್ಕಪಕ್ಕದ ರಾಜ್ಯಗಳ ಗಡಿಗಳ ಮೇಲೆ ಸಹ ಕಣ್ಗಾವಲು ವಹಿಸುವಂತೆ ಸೂಚನೆ ನೀಡಿತ್ತು.
ಚುನಾವಣೆ ನಡೆಯುವ 72 ಗಂಟೆಗಳ ಮೊದಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಇದುವರೆಗೂ ವಶಪಡಿಸಿಕೊಂಡ ಹಣ, ಮದ್ಯ, ಡ್ರಗ್ಸ್, ಐಷಾರಾಮಿ ವಸ್ತುಗಳು, ಬಟ್ಟೆಗಳ ವಿವರಗಳನ್ನು ಆಯೋಗ ಬಿಡುಗಡೆ ಮಾಡಿದೆ.
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications