ತುಮಕೂರು, ಶಿವಮೊಗ್ಗ, ಮೈಸೂರು ಪಾಲಿಕೆ ಚುನಾವಣೆ ಅಂಕಿ-ಅಂಶ

ಬೆಂಗಳೂರು, ಆಗಸ್ಟ್ 12 : ರಾಜ್ಯದ ಮೂರು ಮಹಾನಗರ ಪಾಲಿಕೆ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಈಗಾಗಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ.

ತುಮಕೂರು, ಶಿವಮೊಗ್ಗ ಮತ್ತು ಮೈಸೂರು ಮಹಾನಗರ ಪಾಲಿಕೆಗಳ ಚುನಾವಣೆಗೆ ಚುನಾವಣಾ ಆಯೋಗ ಆ.13ರ ಸೋಮವಾರ ಅಧಿಸೂಚನೆಯನ್ನು ಪ್ರಕಟಿಸಲಿದೆ. ಆಗಸ್ಟ್ 31ರಂದು ಮತದಾನ ನಡೆಯಲಿದ್ದು, ಸೆಪ್ಟೆಂಬರ್ 3ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಮೈಸೂರು ಮಹಾನಗರ ಪಾಲಿಕೆಯಲ್ಲಿ 65 ವಾರ್ಡ್‌ಗಳಿದ್ದು, ಒಟ್ಟು 7,99,422 ಮತದಾರರು ಇದ್ದಾರೆ. ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ 35 ವಾರ್ಡ್‌ಗಳಿದ್ದು, 2,74,218 ಮತದಾರರು ಇದ್ದಾರೆ. ತುಮಕೂರು ಮಹಾನಗರ ಪಾಲಿಕೆಯಲ್ಲಿರುವ ವಾರ್ಡ್‌ಗಳ ಸಂಖ್ಯೆ 35, ಮತದಾರರ ಸಂಖ್ಯೆ 2,59,513.

2011ರ ಜನಗಣತಿಯಂತೆ ಕ್ಷೇತ್ರ ಪುನರ್ ವಿಂಗಡನೆ ಮಾಡಿ, ವಾರ್ಡ್‌ವಾರು ಮೀಸಲಾತಿಯನ್ನು ನಿಗದಿಪಡಿಸಿ ಈಗಾಗಲೇ ರಾಜ್ಯಪತ್ರ ಹೊರಡಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಆಗಸ್ಟ್ 9ರಿಂದಲೇ ಜಾರಿಗೆ ಬಂದಿದೆ.

ಆಗಸ್ಟ್ 31ರಂದು ಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 3ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

Shivamogga, Tumakuru, Mysuru city corporation election infographics
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+