ಶಬರಿಮಲೆಗೆ ಮಹಿಳೆಯರ ಪ್ರವೇಶ: ಸುಪ್ರೀಂ ತೀರ್ಪಿನ ಮುಖ್ಯಾಂಶ, ಚಿತ್ರ ಮಾಹಿತಿ
ನವದೆಹಲಿ, ಸೆಪ್ಟೆಂಬರ್ 28: ಕೇರಳದ ಪ್ರಸಿದ್ಧ ದೇವಾಲಯವಾದ ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.
ದೇವಸ್ಥಾನದ ಆಡಳಿತ ಮಂಡಳಿಯ ನಿಯಮಾವಳಿ ಪ್ರಕಾರ 10ರಿಂದ 50 ವರ್ಷ ವಯಸ್ಸಿನ ಮಹಿಳೆಯರು ದೇವಸ್ಥಾನದ ಆವರಣಕ್ಕೆ ಭೇಟಿ ನೀಡಲು ಅವಕಾಶವಿರಲಿಲ್ಲ. ಋತುಮತಿಯಾಗುವ ವಯಸ್ಸಿನ ಹೆಣ್ಣುಮಕ್ಕಳು ದೇವಾಲಯದ ಆವರಣಕ್ಕೆ ಪ್ರವೇಶಿಸಿದರೆ ಮಂದಿರದ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂಬುದು ದೇವಾಲಯದ ಆಡಳಿತ ಮಂಡಳಿಯ ವಾದವಾಗಿತ್ತು.
ಆದರೆ ಇದರಿಂದ ಮಹಿಳೆಯರ ಧಾರ್ಮಿಕ ಸ್ವಾತಂತ್ರ್ಯವನ್ನು ಕಿತ್ತುಕೊಂಡಂತಾಗುತ್ತದೆ ಎಂದಿರುವ ಸುಪ್ರೀಂ ಕೋರ್ಟ್ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿದೆ. ಸುಪ್ರೀಂ ಕೋರ್ಟ್ ನ ಇಂದಿನ ತೀರ್ಪಿನ ಮುಖ್ಯಾಂಶ ಇಲ್ಲಿದೆ.
* ಶಬರಿಮಲೆ ಪ್ರಕರಣದ ವಿಚಾರಣೆ ನಡೆಸಿದ ಪಂಚ ಸದಸ್ಯರ ಸಾಂವಿಧಾನಿಕ ಪೀಠದಲ್ಲಿ ಸಿಜೆಐ ದೀಪಕ್ ಮಿಶ್ರಾ, ನ್ಯಾ. ಆರ್ ಎಫ್ ನಾರಿಮನ್, ಎಎಂ ಖಾನ್ವಿಲ್ಕರ್, ಡಿವೈ ಚಂದ್ರಚೂಡ ಮತ್ತು ನ್ಯಾ. ಇಂದು ಮಲ್ಹೋತ್ರಾ ಅವರಿದ್ದಾರೆ.
* ಅಯ್ಯಪ್ಪ ದೇವಾಲಯದೊಳಗೆ ಮಹಿಳೆಯರ ಪ್ರವೇಶವನ್ನು ನಿಷೇಧಿಸಿರುವ ದೇವಸ್ಥಾನದ ಆಡಳಿತ ಮಂಡಳಿಯ ವಿರುದ್ಧ 2006 ರಲ್ಲೇ ಪ್ರಕರಣ ದಾಖಲಿಸಲಾಗಿತ್ತು. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ 2016 ರಲ್ಲಿ ವಿಚಾರಣೆಗೆ ಕೈಗೆತ್ತಿಕೊಂಡಿತ್ತು.














Click it and Unblock the Notifications