Infographics; ಮೂರು ಕ್ಷೇತ್ರಗಳ ಉಪ ಚುನಾವಣೆ ಅಭ್ಯರ್ಥಿಗಳು
ಬೆಂಗಳೂರು, ಮಾರ್ಚ್ 29: ಬೇಸಿಗೆಯ ಧಗೆಯ ನಡುವೆಯೇ ಕರ್ನಾಟಕದಲ್ಲಿ ಉಪ ಚುನಾವಣೆ ಪ್ರಚಾರದ ಕಾವು ಏರುತ್ತಿದೆ. ಒಂದು ಲೋಕಸಭಾ ಕ್ಷೇತ್ರ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಗೆ ಏಪ್ರಿಲ್ 17ರಂದು ನಡೆಯಲಿದೆ.
ಬೆಳಗಾವಿ ಲೋಕಸಭಾ ಕ್ಷೇತ್ರ, ರಾಯಚೂರು ಜಿಲ್ಲೆಯ ಮಸ್ಕಿ ಮತ್ತು ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.
ಬಿಜೆಪಿ ಮತ್ತು ಕಾಂಗ್ರೆಸ್ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿವೆ. ಕರ್ನಾಟಕ ಮತ್ತೊಂದು ಪ್ರಮುಖ ಪಕ್ಷ ಜೆಡಿಎಸ್ ಬಸವಕಲ್ಯಾಣ ಕ್ಷೇತ್ರದಲ್ಲಿ ಮಾತ್ರ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿದೆ.
ವಿವಿಧ ಪಕ್ಷದ ಅಭ್ಯರ್ಥಿಗಳು ಉಪ ಚುನಾವಣೆಗೆ ನಾಮಪತ್ರವನ್ನು ಸಲ್ಲಿಸಲು ಮಾರ್ಚ್ 30 ಕೊನೆಯ ದಿನವಾಗಿದೆ. ಈಗಾಗಲೇ ವಿವಿಧ ಪಕ್ಷಗಳು ಗೆಲುವಿಗಾಗಿ ಕಾರ್ಯತಂತ್ರವನ್ನು ರೂಪಿಸುತ್ತಿವೆ.

ಮೂರು ಪ್ರಮುಖ ಪಕ್ಷಗಳ ಅಭ್ಯರ್ಥಿಗಳ ವಿವರಗಳು ಇಲ್ಲಿವೆ. ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರಿಂದ ಉಪ ಚುನಾವಣೆ ಎದುರಾಗಿದೆ. ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಅವರು ಕಣಕ್ಕಿಳಿದಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದಾಗಿ ಉಪ ಚುನಾವಣೆ ಎದುರಾಗಿದೆ. ಬಿಜೆಪಿ ದಿ. ಸುರೇಶ್ ಅಂಗಡಿ ಪತ್ನಿ ಮಂಗಲ ಅಂಗಡಿಗೆ ಟಿಕೆಟ್ ನೀಡಿದೆ.
ಬೀದರ್ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರದಲ್ಲಿ 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಬಿ. ನಾರಾಯಣರಾವ್ ಗೆದ್ದಿದ್ದರು. ಕೋವಿಡ್‌ನಿಂದ ಅವರು ಮೃತಪಟ್ಟ ಕಾರಣಕ್ಕಾಗಿ ಉಪ ಚುನಾವಣೆ ಎದುರಾಗಿದೆ. ಕಾಂಗ್ರೆಸ್ ಪಕ್ಷ ಬಿ. ನಾರಾಯಣರಾವ್ ಪತ್ನಿ ಮಲ್ಲಮ್ಮಗೆ ಟಿಕೆಟ್ ಕೊಟ್ಟಿದೆ.












Click it and Unblock the Notifications