Infographics: ಸೆ. 12ರಿಂದ ಸಂಚರಿಸುವ 80 ರೈಲುಗಳ ಸಂಚಾರ ವೇಳಾಪಟ್ಟಿ
ಬೆಂಗಳೂರು, ಸೆ. 7: ಕೇಂದ್ರ ಸರ್ಕಾರವು ಅನ್‌ಲಾಕ್ ಪ್ರಕ್ರಿಯೆಯನ್ನು ಜಾರಿಗೊಳಿಸುತ್ತಾ, ನಿರ್ಬಂಧಗಳನ್ನು ಮತ್ತಷ್ಟು ಸಡಿಲಿಸಿರುವುದರಿಂದ ಸೆ. 12ರಿಂದ ಸುಮಾರು 80 ರೈಲುಗಳು ಸಂಚರಿಸಲಿವೆ. ನೈಋತ್ಯ ರೈಲ್ವೆ ವಿಭಾಗದಲ್ಲಿ ಸೆಪ್ಟೆಂಬರ್ 12ರಿಂದ ವಿವಿಧ ಮಾರ್ಗದಲ್ಲಿ ರೈಲುಗಳ ಸಂಚಾರವನ್ನು ಆರಂಭಿಸಲಿದೆ. ಕರ್ನಾಟಕ ಸರ್ಕಾರದ ಮನವಿಯಂತೆ ಈ ರೈಲುಗಳು ಸಂಚಾರ ನಡೆಸಲಿವೆ.
Recommended Video
ಸೆಪ್ಟೆಂಬರ್ 12ರಿಂದ 40 ಜೋಡಿ ವಿಶೇಷ ರೈಲುಗಳ ಸಂಚಾರ ಆರಂಭವಾಗಲಿದ್ದು, ಸೆಪ್ಟೆಂಬರ್ 10ರಿಂದ ಬುಕಿಂಗ್ ಆರಂಭವಾಗಲಿದೆ. ದೇಶದಲ್ಲಿ 230 ರೈಲುಗಳು ಸಂಚರಿಸುತ್ತಿದ್ದು, ಈಗ ಹೆಚ್ಚುವರಿಯಾಗಿ ಮತ್ತೆ 80 ರೈಲುಗಳ ಸಂಚಾರ ಆರಂಭಿಸಲಾಗುತ್ತಿದೆ
ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಮಾರ್ಚ್ 25ರಿಂದ ರೈಲ್ವೆ ತನ್ನ ಪ್ರಯಾಣಿಕ, ಎಕ್ಸ್‌ಪ್ರೆಸ್ ರೈಲುಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿತ್ತು. ಬಳಿಕ ಕಾರ್ಮಿಕರ ಪ್ರಯಾಣಕ್ಕಾಗಿ ವಿಶೇಷ ಶ್ರಮಿಕ ರೈಲುಗಳನ್ನು ಮೇ 1ರಿಂದ ಆರಂಭಿಸಿತ್ತು.
ಕೆಎಸ್ಆರ್ ಬೆಂಗಳೂರು-ಮೈಸೂರು-ಕೆಎಸ್ಆರ್ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಸಹ ಸಂಚಾರ ಆರಂಭಿಸಲಿದೆ. ರೈಲು ನಂಬರ್ 06539/06540 ಭಾನುವಾರ ಹೊರತುಪಡಿಸಿ ಉಳಿದ ದಿನ ಉಭಯ ನಗರಗಳ ನಡುವೆ ಸಂಚಾರ ನಡೆಸಲಿದೆ
ವಿವಿಧ ರೈಲುಗಳ ಸಂಚಾರ ವಿವರ ಇನ್ಫೋಗ್ರಾಫಿಕ್ಸ್ ಇಲ್ಲಿದೆ(ವಿನ್ಯಾಸ: ಭರತ್ ಎಚ್. ಸಿ)













Click it and Unblock the Notifications