ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲಬುರಗಿಯಲ್ಲಿ ಪ್ರಾಯೋಗಿಕ ವಿಮಾನ ಹಾರಾಟ ಯಶಸ್ವಿ

By Gururaj
|
Google Oneindia Kannada News

ಬೆಂಗಳೂರು, ಆಗಸ್ಟ್ 27 : ಹೈದರಾಬಾದ್-ಕರ್ನಾಟಕ ಭಾಗದ ಜನರ ಬಹುದಿನದ ಕನಸು ನನಸಾಗಿದೆ. ಕಲಬುರಗಿ ವಿಮಾನ ನಿಲ್ದಾಣದಲ್ಲಿ ವಿಮಾನದ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.

2006ರಲ್ಲಿ ಕಲಬುರಗಿ-ಸೇಡಂ ರಸ್ತೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ಆರಂಭಿಸಲಾಗಿತ್ತು. 2018ರಲ್ಲಿ ಕಾಮಗಾರಿ ಮುಕ್ತಾಯಗೊಂಡಿದ್ದು, ಮೂರು ತಿಂಗಳಿನಲ್ಲಿ ವಿಮಾನಗಳ ವಾಣಿಜ್ಯ ಸಂಚಾರ ಆರಂಭವಾಗುವ ನಿರೀಕ್ಷೆಇದೆ.

ಹೈದರಾಬಾದ್‌ನ ಏಶಿಯನ್ ಪೆಸಿಫಿಕ್ ಫ್ಲೈಟ್ ಟ್ರೇನಿಂಗ್ ಅಕಾಡೆಮಿಯ ಡೈಮಂಡ್ 40 ಮತ್ತು ಡೈಮಂಡ್ 42 ಎಂಬ 4 ಅಸನವುಳ್ಳ ಎರಡು ಲಘು ವಿಮಾನಗಳು ಭಾನುವಾರ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಬಂದಿಳಿದವು.

ಚಿತ್ರಗಳು : ಕಲಬುರಗಿ ಜನರ ದಶಕಗಳ ಕನಸು ನನಸಾದ ಕ್ಷಣಚಿತ್ರಗಳು : ಕಲಬುರಗಿ ಜನರ ದಶಕಗಳ ಕನಸು ನನಸಾದ ಕ್ಷಣ

ಕಲಬುರಗಿ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಾಯೋಗಿಕ ಹಾರಾಟಕ್ಕೆ ಸಾಕ್ಷಿಯಾದರು. 'ವಿಮಾನ ನಿಲ್ದಾಣದಿಂದ ವಾಣಿಜ್ಯ ಸಂಚಾರ ಆರಂಭಿಸಲು ರಾಜ್ಯ ಸರ್ಕಾರದಿಂದ ನಾಗರೀಕ ವಿಮಾನಯಾನ ಸಚಿವಾಲಯಕ್ಕೆ ಪತ್ರ ಬರೆಯಲಾಗಿದೆ. ತಾವು ಸಹ ಸಚಿವಾಲಯದ ಅಧಿಕಾರಿಗಳನ್ನು ಖುದ್ದಾಗಿ ಭೇಟಿ ಮಾಡಿ ಉಡಾನ್ ಯೋಜನೆಯಡಿ ಕಲಬುರಗಿ ವಿಮಾನ ನಿಲ್ದಾಣ ತೆಗೆದುಕೊಳ್ಳುವಂತೆ ಮನವಿ ಮಾಡುವುದಾಗಿ' ಹೇಳಿದರು.

740 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗಿದೆ. ಸುಮಾರು 175.57 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ನಿಲ್ದಾಣ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ.

ವಿಮಾನ ನಿಲ್ದಾಣದಲ್ಲಿ ಫ್ಲೈಟ್ ಅಟೆಂಡರ್‌ಗಳಿಗೆ ತರಬೇತಿ ನೀಡಲು ಮತ್ತು ಕೌಶಲ್ಯ ತರಬೇತಿಗಾಗಿ ಏವಿಯೆಷನ್ ಸ್ಕಿಲ್ ಟ್ರೇನಿಂಗ್ ಸಂಸ್ಥೆಯಿಂದ ಶಾಲೆ ಪ್ರಾರಂಭಿಸಲು ಆರಂಭಿಕ ಹಂತದಲ್ಲಿ ಸಮಾಲೋಚನೆ ನಡೆಯುತ್ತಿದೆ.

Trial landing on the Kalaburagi airport successfully
English summary
Trial landing on the Kalaburagi airport successfully completed on August 26, 2018. Aircraft Diamond DA40 and Diamond DA42 took off from Hyderabad and landed at Kalaburagi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X