ವರಮಹಾಲಕ್ಷ್ಮಿ ವ್ರತ: ಚಿತ್ರದಲ್ಲಿ ನೋಡಿ ಆಚರಣೆಯ ಬಗೆ ಮತ್ತು ವೈಶಿಷ್ಟ್ಯ
ಶ್ರಾವಣ ಮಾಸದ ಪ್ರಮುಖ ಹಬ್ಬಗಳಲ್ಲೊಂದಾದ ವರಮಹಾಲಕ್ಷಿ ಹಬ್ಬವನ್ನು ಈ ಬಾರಿ ಆಗಸ್ಟ್ 24 ರಂದು ಆಚರಿಸಲಾಗುತ್ತದೆ. ಶ್ರಾವಣ ಮಾಸದ ಹುಣ್ಣಿಮೆಗೂ ಮೊದಲ ಶುಕ್ರವಾರ ಈ ಹಬ್ಬವನ್ನು ಪ್ರತಿವರ್ಷ ಆಚರಿಸಲಾಗುತ್ತದೆ. ಹೆಂಗೆಳಯರಿಗೆ ಅತೀ ಪ್ರಿಯವಾದ ಈ ಹಬ್ಬದ ಆಚರಣೆ ಹೇಗೆ ಮತ್ತು ವೈಶಿಷ್ಟ್ಯವೇನು? ಹಬ್ಬದ ಹಿನ್ನೆಲೆ ಏನು? ಈ ಎಲ್ಲವುಗಳ ಸಂಕ್ಷಿಪ್ತ ಮಾಹಿತಿ ಕೆಳಗಿನ ಚಿತ್ರದಲ್ಲಿ ಲಭ್ಯ.
ಹೆಂಗೆಳೆಯರಿಗಂತೂ ಹೊಸಬಟ್ಟೆ ಖರೀದಿ, ದಿನದಿನವೂ ಮನೆಯಲ್ಲಿ ವಿಶೇಷ ಪೂಜೆ, ರುಚಿ ರುಚಿ ಖಾದ್ಯಗಳ ತಯಾರಿಕೆ ಎಂದು ಸಂಭ್ರಮವೋ ಸಂಭ್ರಮ. ಮನೆಗೆ ಸಂಪತ್ತು, ಸಮೃದ್ಧಿ ಕರುಣಿಸು ಎಂದು ದೇವಿ ಲಕ್ಷ್ಮಿಯನ್ನು ಪ್ರಾರ್ಥಿಸುವ, ಪೂಜಿಸುವ ಈ ಹಬ್ಬಕ್ಕೆ ತನ್ನದೇ ಆದ ವೈಶಿಷ್ಟ್ಯವಿದೆ.
ಜಗದೋದ್ಧಾರಕ್ಕಾಗಿ ಶಿವನು ತನ್ನ ಪತ್ನಿ ಪಾರ್ವತಿಗೆ ಸೂಚಿಸಿದ ವ್ರತ ವರಮಹಾಲಕ್ಷ್ಮಿ ವ್ರತ ಎಂಬ ಕಾರಣಕ್ಕೆ ಈ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಈ ಹಬ್ಬದ ಕುರಿತ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.













Click it and Unblock the Notifications