ಪಂಜಾಬ್ ಫಲಿತಾಂಶ: ಎಎಪಿ, ಕಾಂಗ್ರೆಸ್, ಬಿಜೆಪಿ, ಎಸ್‌ಎಡಿ ಶೇಕಡಾವಾರು ಮತ ಗಳಿಕೆ
ಚಂಡೀಗಢ, ಮಾರ್ಚ್ 10: ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷವು ಭರ್ಜರಿಯಾಗಿ ಮುನ್ನಡೆ ಸಾಧಿಸಿದ್ದು, ಮತವನ್ನು ಕೂಡಾ ಅಧಿಕವಾಗಿ ಪಡೆದುಕೊಂಡಿದೆ. ಈಗಾಗಲೇ ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷವು ಸದ್ಯ ಗದ್ದುಗೆಯನ್ನು ಹಿಡಿಯುವ ಎಲ್ಲಾ ಸಿದ್ಧತೆಯನ್ನು ಮಾಡಿಕೊಂಡಿದೆ. ಸಂಭ್ರಮಾಚರಣೆಯನ್ನು ಆರಂಭ ಮಾಡಿದೆ.
ಪಂಜಾಬ್‌ನ 117 ವಿಧಾನಸಭೆ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಸಲಾಗಿದೆ. ಪಂಜಾಬ್ ವಿಧಾನಸಭೆ ಚುನಾವಣೆಯು ಫೆಬ್ರವರಿ 20ರಂದು ನಡೆದಿದೆ. ಪಂಜಾಬ್ ಹೊರತಾಗಿ ನಾಲ್ಕು ರಾಜ್ಯಗಳಲ್ಲೂ ವಿಧಾನಸಭೆ ಚುನಾವಣೆ ನಡೆದಿದೆ. ಉತ್ತರ ಪ್ರದೇಶ, ಗೋವಾ, ಉತ್ತರಾಖಂಡ ಮತ್ತು ಮಣಿಪುರದಲ್ಲೂ ಚುನಾವಣೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3, 7 ರಂದು ಚುನಾವಣೆ ನಡೆದಿದೆ. ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆದಿದೆ. ಪಂಜಾಬ್‌ನಲ್ಲಿ ಫೆಬ್ರವರಿ 20 ರಂದು ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿದೆ.
2017 ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ, 117 ವಿಧಾನಸಭೆ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 77 ಸ್ಥಾನಗಳನ್ನು ಗೆದ್ದುಕೊಂಡು ಸರ್ಕಾರವನ್ನು ರಚನೆ ಮಾಡಿತ್ತು. 117ರಲ್ಲಿ ಭಾರತೀಯರ ಜನತಾ ಪಾರ್ಟಿ (ಬಿಜೆಪಿ) ಕೇವಲ ಮೂರು ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಶಿರೋಮಣಿ ಅಕಾಲಿದಳವು ಕೇವಲ 15 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಮತ್ತೊಂದೆಡೆ, ಎಎಪಿ 20 ಸ್ಥಾನಗಳೊಂದಿಗೆ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಲೋಕ ಇನ್ಸಾಫ್ ಪಕ್ಷವು ಎರಡು ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಪಂಜಾಬ್‌ನಲ್ಲಿ ಯಾವುದೇ ಪಕ್ಷ ಅಧಿಕಾರ ಸ್ಥಾಪಿಸಲು ಬೇಕಿರುವ ಮ್ಯಾಜಿಕ್ ನಂಬರ್ 59 ಆಗಿದೆ.

ಈ ನಡುವೆ ಈ ಹಿಂದೆ ಪಂಜಾಬ್‌ನಲ್ಲಿ ಆಡಳಿತದ ಚುಕ್ಕಾಣಿಯನ್ನು ಹಿಡಿದಿದ್ದು ಆದರೆ ಈಗ ಅಧಿಕಾರವನ್ನು ಕಳೆದುಕೊಂಡಿದೆ. ಹೀನಾಯವಾಗಿ ಸೋಲು ಅನುಭವಿಸಿದೆ. ಭಾರೀ ಹಿನ್ನಡೆಯನ್ನು ಕಂಡಿದೆ. ಕಾಂಗ್ರೆಸ್‌ನ ಪ್ರಮುಖ ನಾಯಕರುಗಳು ಪಂಜಾಬ್‌ನಲ್ಲಿ ಪರಾಭವಗೊಂಡಿದ್ದಾರೆ.
ಸದ್ಯದ ಟ್ರೆಂಡ್ ಪ್ರಕಾರ, ಎಎಪಿ 28 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು, 64 ಕ್ಷೇತ್ರಗಳಲ್ಲಿ ಗೆಲುವು ಕಂಡಿದೆ. ಕಾಂಗ್ರೆಸ್ 7 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, 11 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಬಹುಜನ ಸಮಾಜ ಪಕ್ಷ ಯಾವುದೇ ಕ್ಷೇತ್ರದಲ್ಲಿ ಗೆಲುವು ಸಾಧಿಸಿಲ್ಲ, ಆದರೆ ಒಂದು ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇನ್ನು ಬಿಜೆಪಿ ಎರಡು ಕ್ಷೇತ್ರದಲ್ಲಿ ಜಯಗಳಿಸಿದೆ. ಓರ್ವ ಸ್ವತಂತ್ರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಶಿರೋಮಣಿ ಅಕಾಳಿದಳ ಒಂದು ಕ್ಷೇತ್ರದಲ್ಲಿ ಜಯ ಸಾಧಿಸಿದ್ದು, ಎರಡು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಚುನಾವಣಾ ಆಯೋಗ ವೆಬ್ ತಾಣದ ಅಧಿಕೃತ ಮಾಹಿತಿಯಂತೆ ಸಮಯ ಸಂಜೆ 04:25ಕ್ಕೆ ಶೇಕಡಾವಾರು ಮತ ಗಳಿಕೆ ವಿವರ ಹೀಗಿದೆ:
ಎಎಪಿ ಶೇ 42.07
ಬಿಜೆಪಿ ಶೇ 6.59
ಬಿಎಸ್‌ಪಿ ಶೇ 1.78
ಸಿಪಿಐ ಶೇ 0.05
ಸಿಪಿಐಎಂ ಶೇ 0.06
ಸಿಪಿಐಎಂಎಲ್ ಶೇ 0.03
ಕಾಂಗ್ರೆಸ್ ಶೇ 22.94
ಜೆಡಿಯು ಶೇ 0.00
ನೋಟಾ ಶೇ 0.71
ಎಸ್ಎಡಿ ಶೇ 18.33
ಎಸ್‌ಪಿ ಶೇ 0.03
ಇತರೆ ಶೇ 7.38
2017ರಲ್ಲಿ ಶೇಕಡಾವಾರು ಮತ ಗಳಿಕೆ
ಕಾಂಗ್ರೆಸ್ ಶೇ 38.5
ಎಎಪಿ ಶೇ 23.7
ಶಿರೋಮಣಿ ಅಕಾಲಿದಳ ಶೇ 25.2
ಬಿಜೆಪಿ ಶೇ 5.4
ಬಿಎಸ್‌ಪಿ ಶೇ 1.5
ಎಲ್‌ಐಪಿ ಶೇ 1.2
ಎಸ್ಎಡಿ ಶೇ 0.3
ಸಿಪಿಐ ಶೇ 0.3
ನೋಟಾ ಶೇ 0.7












Click it and Unblock the Notifications