ಕರ್ನಾಟಕ ತಾಪಮಾನ: ಯಾವ ಊರಲ್ಲಿ ಹೆಚ್ಚು ಬಿಸಿಲು, ಎಲ್ಲಿ ತಂಪು?

ಕರ್ನಾಟಕದಲ್ಲಿ ಏಪ್ರಿಲ್ 7ರಿಂದ ಮಲೆನಾಡು, ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.

ಏಪ್ರಿಲ್ 7 ರಿಂದ ಕನಿಷ್ಠ ಮೂರು ದಿನಗಳ ಕಾಲ ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆ, ಮಂಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸತತವಾಗಿ ಮಳೆಯಾಗುವ ಲಕ್ಷಣಗಳು ಕಂಡು ಬಂದಿವೆ.

ಆದರೆ, ಬೆಂಗಳೂರಿನ ನಗರ ಪ್ರದೇಶದಲ್ಲಿ ಒಣಹವೆ ಮುಂದುವರೆಯಲಿದೆ, ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆ ನಿರೀಕ್ಷಿಸಬಹುದು ಎಂದು ಹವಾಮಾನ ಇಲಾಖೆ ಉಸ್ತುವಾರಿ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ. ರಾಜ್ಯದ ಯಾವ ಜಿಲ್ಲೆಯಲ್ಲಿ ತಾಪಮಾನ ಎಷ್ಟಿದೆ? ಎಂಬುದರ ಸಚಿತ್ರ ವರದಿ ಇಲ್ಲಿದೆ ವಿನ್ಯಾಸ: ಭರತ್ ಎಚ್. ಸಿ

ಎಲ್ಲೆಲ್ಲಿ ಮಳೆ ಸಾಧ್ಯತೆ?

ಎಲ್ಲೆಲ್ಲಿ ಮಳೆ ಸಾಧ್ಯತೆ?

ಮಳೆ ಮುನ್ಸೂಚನೆ: ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಹಾಸನ, ಮೈಸೂರು ಮತ್ತ ಮಂಡ್ಯ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಏಪ್ರಿಲ್ 8 ರಿಂದ ಏಪ್ರಿಲ್ 10ರ ಅವಧಿಯಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ, ಮಿಕ್ಕಂತೆ ಒಣಹವೆ ಮುಂದುವರೆಯಲಿದೆ.

ಗರಿಷ್ಠ ಹಾಗೂ ಕನಿಷ್ಠ ತಾಪಮಾನ

ಗರಿಷ್ಠ ಹಾಗೂ ಕನಿಷ್ಠ ತಾಪಮಾನ

ಕಲಬುರಗಿಯಲ್ಲಿ 41.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯದೆಲ್ಲೆಡೆ ಬಹುತೇಕ ಸರಾಸರಿ 24 ರಿಂದ 37 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಯಾದಗಿರಿಯಲ್ಲಿ ಕಳೆದ 24 ಗಂಟೆಗಳಲ್ಲಿ 47 ಮಿಮೀ ಮಳೆ ಸುರಿದಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.

Recommended Video

    ಎರಡನೇ ಬಾರಿ Bus Strike ಮಾಡಿದರು ಕ್ಯಾರೆ ಅನ್ನೋರಿಲ್ಲಾ!! | Oneindia Kannada
    ರಾಜ್ಯದ ಹಲವೆಡೆ ಒಣಹವೆ

    ರಾಜ್ಯದ ಹಲವೆಡೆ ಒಣಹವೆ

    ಬೆಂಗಳೂರಲ್ಲಿ 35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ಮಾರ್ಚ್‌ ತಿಂಗಳ ಕೊನೆಯಲ್ಲಿ ಸತತವಾಗಿ ನಾಲ್ಕನೇ ಬಾರಿ 35 ಪ್ಲಸ್ ಗರಿಷ್ಠ ತಾಪಮಾನ ದಾಖಲಾಗಿತ್ತು. ಏಪ್ರಿಲ್ ಮೊದಲ ವಾರದಲ್ಲೂ ಉಷ್ಣಾಂಶ ಅಧಿಕವಾಗಿದೆ, ಏಪ್ರಿಲ್ 7ರ ನಂತರ ಕೆಲವೆಡೆ ಮೋಡ ಕವಿದ ವಾತಾವರಣ, ಸಾಧಾರಣ ಮಳೆ ಸುರಿಯಲಿದೆ. ವಿಮಾನ ನಿಲ್ದಾಣ ಪ್ರದೇಶದಲ್ಲಿ ಬೆಳಗ್ಗೆ ವೇಳೆ ಮಾತ್ರ ಕೆಲವು ಕಡೆ ಮೋಡ ಕವಿದ ವಾತಾವರಣ ಇರಲಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+