ಹವಾಮಾನ ವರದಿ:ಡಿ. 21ರಂದು ರಾಜ್ಯದ ವಿವಿಧ ಜಿಲ್ಲೆಗಳ ತಾಪಮಾನ ಹೇಗಿದೆ?
ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ. ಮುಂದಿನ ಒಂದೆರಡು ದಿನಗಳಲ್ಲಿ ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, ಚಳಿಯ ಪ್ರಮಾಣ ಕಡಿಮೆ ಇದೆ. ಎಚ್‌ಎಎಲ್‌ನಲ್ಲಿ 25.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ , 13.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಇನ್ನು ನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಂಗಳೂರು ಏರ್‌ಪೋರ್ಟ್‌ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಳಿ ಹೆಚ್ಚಾಗುವ ಸಾಧ್ಯತೆ
ಈ ಎಲ್ಲೆದರ ಪರಿಣಾಮ ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿಯುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕಾಶ್ಮೀರದಲ್ಲಿ ಪೈಪ್‌ಲೈನ್‌ನಲ್ಲಿಯೇ ನೀರು ಹೆಪ್ಪುಗಟ್ಟಿದೆ. ರಾಜಸ್ಥಾನದ ಹಲವೆಡೆ ಕನಿಷ್ಠ ತಾಪಮಾನ ಶೂನ್ಯ ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗಿದೆ. ಮುಂದಿನ ಕೆಲ ದಿನಗಳ ಕಾಲ ರಾಜ್ಯದಲ್ಲಿ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕನಿಷ್ಠ ತಾಪಮಾನ
ಡಿಸೆಂಬರ್‌ನ ಚಳಿಗಾಲ ಆರಂಭಗೊಂಡಿದ್ದು, ಹಿಮಪಾತದ ಪರಿಣಾಮದಿಂದಾಗಿ ಇಡೀ ಉತ್ತರ ಭಾರತದಲ್ಲಿ ಶೀತ ಅಲೆಗಳ ಪ್ರಮಾಣ ಮುಂದುವರೆದಿದೆ. ಹಿಮದ ಗಾಳಿಯಿಂದಾಗಿ ರಾಷ್ಟ್ರ ರಾಜಧಾನಿಯೂ ನಡುಗುತ್ತಿದೆ. 20 ಡಿಸೆಂಬರ್ 2021ರಂದು ದೆಹಲಿಯಲ್ಲಿ ಕನಿಷ್ಠ ತಾಪಮಾನವು 3.2 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ.
ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಪಕ್ಕದ ಪ್ರದೇಶದಲ್ಲಿ ವಾಯುಭಾರ ಕುಸಿತದ ಪರಿಣಾಮ ಹಿಮಾಲಯದಲ್ಲಿ ಹಿಮಪಾತಕ್ಕೆ ಕಾರಣವಾಗುತ್ತದೆ. ವಾಯುಭಾರ ಕುಸಿತ ಹಿನ್ನೆಲೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಲಕ್ಷದ್ವೀಪದಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಜಲಾಶಯಗಳು ಭರ್ತಿಯಾಗಿವೆ
ರಾಜ್ಯದಲ್ಲಿ ಹಲವು ದಿನಗಳಿಂದ ಸುರಿಯುತ್ತಿದ್ದ ಅಕಾಲಿಕ ಮಳೆ ಸದ್ಯಕ್ಕೆ ಬಿಡುವು ಕೊಟ್ಟಿದೆ. ಸದ್ಯ ರಾಜ್ಯದಲ್ಲಿ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಜನರನ್ನು ನಡುಗಿಸುತ್ತಿದೆ. ಮುಂಗಾರುಮುಗಿದರೂ ಸಹ ಎಡೆಬಿಡದೆ ಸುರಿದ ಅಕಾಲಿಕ ಮಳೆಯಿಂದಾಗಿ ಎಲ್ಲೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು.
ಬೆಂಗಳೂರಿಗರ ಜೀವನವಂತೂ ತೀರಾ ಶೋಚನೀಯವಾಗಿತ್ತು. ಸದ್ಯ ಮಳೆ ಸ್ವಲ್ಪ ಬ್ರೇಕ್ ಕೊಟ್ಟಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಅಕಾಲಿಕ ಮಳೆಗೆ ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿಯಾಗಿವೆ.
ಶೀತ ಅಲೆ ಆರಂಭ
ರಾಜಧಾನಿಯಲ್ಲಿ ಚಳಿಯ ಪ್ರಮಾಣ ಏರಿಕೆಯಾಗುತ್ತಿದೆ ಈ ಋತುವಿನ ಮೊದಲ ಶೀತ ಅಲೆ ಶನಿವಾರ ಆರಂಭಗೊಂಡಿದ್ದು, ಹವಾಮಾನ ಇಲಾಖೆಯ ಪ್ರಕಾರ, ರಾಜಧಾನಿ ರಾತ್ರಿ ಮತ್ತು ಹಗಲು ಎರಡೂ ಆಧಾರದ ಮೇಲೆ ಶೀತ ಅಲೆ ಸ್ಟಾರ್ಟ್ ಆಗಿದೆ. ಮುಂದಿನ ದಿನ ಚಳಿಗಾಳಿ ಏರಿಕೆ ಆಗುವ ನಿರೀಕ್ಷೆ ಇದೆ.
Recommended Video












Click it and Unblock the Notifications