ಕರ್ನಾಟಕ ಹವಾಮಾನ ವರದಿ: ಡಿ.23 ವಿವಿಧ ಜಿಲ್ಲೆಗಳ ತಾಪಮಾನ ಹೇಗಿದೆ?

ಬೆಂಗಳೂರು, ಡಿಸೆಂಬರ್ 23: ದಟ್ಟ ಚಳಿಗೆ ಕರ್ನಾಟಕದ ಜನರು ಹೈರಾಣಾಗಿದ್ದಾರೆ, ಬೆಂಗಳೂರಿನಲ್ಲಿ ಅಷ್ಟು ಚಳಿ ಇರದಿದ್ದರೂ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ತೀವ್ರವಾಗಿದೆ.

ಇಷ್ಟು ದಿನ ಒಂದೇಸಮನೆ ಸುರಿಯುತ್ತಿದ್ದ ಮಳೆ ಇದೀಗ ಬಿಡುವು ಪಡೆದಿದ್ದು, ಎಲ್ಲೆಡೆ ಶೀತ ಗಾಳಿ ಆವರಿಸಿದೆ. ದಿನವಿಡೀ ಬೆಚ್ಚಗೆ ಹೊದ್ದುಕೊಂಡು ಮನೆಯೊಳಗೇ ಇರಬೇಕು ಎನಿಸುವಷ್ಟು ಚಳಿ ಶುರುವಾಗಿದೆ. ಮನೆಯಿಂದ ಹೊರಗೆ ಕಾಲಿಟ್ಟರೆ ಕಾಶ್ಮೀರಕ್ಕೋ, ಶಿಮ್ಲಾಗೋ ಹೋದ ಅನುಭವವಾಗುತ್ತಿದೆ.

ಚಳಿ ಹೆಚ್ಚಾಗಿರುವುದರಿಂದ ವೈರಲ್ ಜ್ವರ, ಶೀತ, ತಲೆನೋವು, ಉಸಿರಾಟದ ತೊಂದರೆ, ಮೈಕೈ ನೋವು ಮುಂತಾದ ಆರೋಗ್ಯ ಸಮಸ್ಯೆಗಳೂ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದ್ದರೂ ಬೇರೆ ರಾಜ್ಯಗಳಲ್ಲಿ ಇನ್ನೂ ಮಳೆ ಸಂಪೂರ್ಣವಾಗಿ ಕಡಿಮೆಯಾಗಿಲ್ಲ.

Weather And Rain Forecast: Dry weather Across State As On December 23

ಹೊನ್ನಾವರದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಶಿರಾಲಿಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್‌ಪೋರ್ಟ್‌ನಲ್ಲಿ 31.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕೊಡಗು, ಶಿವಮೊಗ್ಗ, ಬೆಂಗಳೂರು, ಮೈಸೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ ಜಿಲ್ಲೆಗಳಲ್ಲಿ ಚಳಿ ವಿಪರೀತ ಹೆಚ್ಚಾಗಿದೆ. ಸದಾ ಬಿಸಿಲಿನಿಂದ ಕೂಡಿರುವ ಉತ್ತರ ಕರ್ನಾಟಕದಲ್ಲೂ ಚಳಿ ವಿಪರೀತವಾಗಿದೆ. ಉತ್ತರ ಕರ್ನಾಟಕದ ಧಾರವಾಡ, ಹುಬ್ಬಳ್ಳಿ, ಬೀದರ್, ಕಲಬುರ್ಗಿ, ರಾಯಚೂರು, ಕೊಪ್ಪಳ, ವಿಜಯಪುರ, ಬಾಗಲಕೋಟೆಯಲ್ಲಿ ಇನ್ನೂ 3 ದಿನ ಚಳಿ ಹೆಚ್ಚಾಗಲಿದೆ.

Weather And Rain Forecast: Dry weather Across State As On December 23

ಕರ್ನಾಟಕದಲ್ಲಿ ಮಳೆಗಾಲ ಮುಗಿದು ಚಳಿ ಶುರುವಾಗಿದೆ. ಚಳಿ ಹೆಚ್ಚಾಗಿರುವುದರಿಂದ ವೈರಲ್ ಜ್ವರ, ಶೀತ ಮುಂತಾದ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿವೆ. ಕರ್ನಾಟಕದ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡಿನಲ್ಲಿ ಮೇ ತಿಂಗಳಿನಿಂದ ಮಳೆಯಾಗುತ್ತಿತ್ತು. ಇದೀಗ ಮಳೆ ಕಡಿಮೆಯಾಗಿದ್ದು, ಇದ್ದಕ್ಕಿದ್ದಂತೆ ಬದಲಾಗಿರುವ ಹವಾಮಾನದಿಂದ ಅನಾರೋಗ್ಯದ ಸಮಸ್ಯೆಯೂ ಹೆಚ್ಚಾಗಿದೆ. ಮಳೆ ಕಡಿಮೆಯಿದ್ದರೂ ರಾಜ್ಯಾದ್ಯಂತ ಮೋಡ ಕವಿದ ವಾತಾವರಣವಿರಲಿದೆ.

ಇಂದಿನಿಂದ ಡಿಸೆಂಬರ್ 25ರವರೆಗೆ ಪಶ್ಚಿಮ ಹಿಮಾಲಯನ್ ಪ್ರದೇಶದಲ್ಲಿ ಲಘುವಾಗಿ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ. ಡಿಸೆಂಬರ್ 23ರಿಂದ ಡಿಸೆಂಬರ್ 25ರವರೆಗೆ ಪಂಜಾಬ್ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿ ಮತ್ತು ಡಿಸೆಂಬರ್ 24 ಮತ್ತು 25ರಂದು ಪಶ್ಚಿಮ ರಾಜಸ್ಥಾನದ ಮೇಲೆ ದಟ್ಟವಾದ ಮಂಜು ಇರುತ್ತದೆ.

ಭಾರತೀಯ ಹವಾಮಾನ ಇಲಾಖೆ (IMD) ಡಿ. 25ರವರೆಗೆ ಪಶ್ಚಿಮ ಹಿಮಾಲಯದ ಪ್ರದೇಶದಲ್ಲಿ ಲಘುವಾಗಿ ಮಧ್ಯಮ ಮಳೆ ಮತ್ತು ಹಿಮಪಾತವಾಗುವ ಮುನ್ಸೂಚನೆ ನೀಡಲಾಗಿದೆ. ಡಿಸೆಂಬರ್ 24ರಂದು ಪಂಜಾಬ್‌ನಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

Weather And Rain Forecast: Dry weather Across State As On December 23

ಭಾರತ ಹವಾಮಾನ ಇಲಾಖೆ ಇಂದಿನಿಂದ 4 ದಿನಗಳಲ್ಲಿ ಕೆಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ. ಗುರುವಾರದಿಂದ (ಡಿಸೆಂಬರ್ 23) ಶೀತ ಗಾಳಿ ಕಡಿಮೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಮುಂದಿನ 4 ದಿನಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದೆ. ಇಂದು ಮತ್ತು ನಾಳೆ ಈ ಪ್ರದೇಶಗಳಲ್ಲಿ ಮಳೆ ಕೊಂಚ ಹೆಚ್ಚಾಗಲಿದೆ.

ಇಂದು ಮತ್ತು ಡಿಸೆಂಬರ್ 23ರಂದು ಅರುಣಾಚಲ ಪ್ರದೇಶದ ಮೇಲೆ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಇಂದು ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್ ಮತ್ತು ಮಣಿಪುರದಲ್ಲಿ ಮಳೆಯಾಗಲಿದೆ. ಇಂದಿನಿಂದ 2 ದಿನ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಮಳೆ ಮತ್ತು ಹಿಮಪಾತದ ಸಾಧ್ಯತೆಯಿದೆ.

ಡಿಸೆಂಬರ್ 24ರಿಂದ 29ರವರೆಗೆ ಪಶ್ಚಿಮ ಹಿಮಾಲಯದ ಪ್ರದೇಶದಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ಹಿಮಪಾತವು ಬಹಳ ಸಾಧ್ಯತೆಯಿದೆ. ಡಿಸೆಂಬರ್ 27ರಂದು ಕಾಶ್ಮೀರ ಪ್ರದೇಶ ಮತ್ತು ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ.

ಡಿಸೆಂಬರ್ 26ರಿಂದ 29ರವರೆಗೆ ವಾಯುವ್ಯ ಭಾರತದ ಪಕ್ಕದ ಬಯಲು ಪ್ರದೇಶಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಡಿಸೆಂಬರ್ 23ರಿಂದ ವಾಯುವ್ಯ ಮತ್ತು ಮಧ್ಯ ಭಾರತದ ಹೆಚ್ಚಿನ ಭಾಗಗಳಲ್ಲಿ ಶೀತ ಅಲೆ ಉಂಟಾಗಲಿದೆ.

ಇಂದು ಉತ್ತರಾಖಂಡ, ಉತ್ತರ ಪ್ರದೇಶ, ಪೂರ್ವ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಒಡಿಶಾದಲ್ಲಿ ಮತ್ತು ಪಂಜಾಬ್, ಹರಿಯಾಣ, ಪೂರ್ವ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ವಿದರ್ಭಾ, ಸೌರಾಷ್ಟ್ರ ಮತ್ತು ಕಚ್, ತೆಲಂಗಾಣ, ಬಿಹಾರ, ಜಾರ್ಖಂಡ್‌ನಲ್ಲಿ ಮಳೆಯಾಗಲಿದೆ.

Recommended Video

      ಕನ್ನಡದ KL Rahul ಹಾಗು Mayank Agarwal ಅವರ ಸ್ನೇಹ ಇಂದು ನಿನ್ನೆಯದಲ್ಲ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+