ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜನವರಿ 03 ರಂದು ರಾಜ್ಯದ ವಿವಿಧ ಜಿಲ್ಲೆಗಳ ಹವಾಮಾನ ಹೇಗಿದೆ?

|
Google Oneindia Kannada News

ಬೆಂಗಳೂರು, ಜನವರಿ 03: ರಾಜ್ಯಾದ್ಯಂತ ಒಣಹವೆ ಮುಂದುವರೆದಿದ್ದು, ಕೆಲವು ಕಡೆ ಮೋಡಕವಿದ ವಾತಾವರಣವಿದೆ. ಚಳಿಯ ಪ್ರಮಾಣವೂ ಏರಿಕೆಯಾಗಿದೆ.

ಕಳೆದ ಒಂದು ದಿನದ ಹಿಂದೆ ತುಮಕೂರು, ಬೆಂಗಳೂರು ಸೇರಿದಂತೆ ಕೆಲವು ಕಡೆ ಮಳೆಯಾಗಿತ್ತು, ಇದೀಗ ಮತ್ತೆ ಒಣಹವೆ ಮುಂದುವರೆದಿದೆ. ಈಗಾಗಲೇ ದೇಶಾದ್ಯಂತ ಮೈ ನಡುಗುವ ಚಳಿ ಇದ್ದು, ಜನರು ಮನೆಯಿಂದ ಹೊರಬರಲು ಕಷ್ಟಪಡುತ್ತಿದ್ದಾರೆ ಚಳಿಯಿಂದ ರಕ್ಷಣೆ ಮಾಡಿಕೊಳ್ಳುವುದು ಹೇಗಪ್ಪಾ ಎಂದು ಜನರು ಒದ್ದಾಡುತ್ತಿರುವ ಸಂದರ್ಭದಲ್ಲಿ ಹವಾಮಾನ ಇಲಾಖೆ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ನೀಡಿದ್ದು ಇನ್ನೊಂದು ವಾರ ಕರ್ನಾಟಕದಾದ್ಯಂತ ಪರೀತ ಚಳಿ ಇರಲಿದ್ದು, ಅಕಾಲಿಕ ಮಳೆಯಾಗಲಿದೆ ಎಂದು ಹೇಳಿದೆ.

ಹೊನ್ನಾವರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Weather And Rain Forecast: Dry weather Across State As On January 03

ಮಂಗಳೂರು ವಿಮಾನ ನಿಲ್ದಾಣದಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ವರದಿಯ ಪ್ರಕಾರ, ಜನವರಿ ಒಂದರಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ. ತಮಿಳುನಾಡು ಮಾತ್ರವಲ್ಲದೆ. ಪುದುಚೇರಿ, ಕಾರೈಕಲ್ ಮತ್ತು ಆಂಧ್ರಪ್ರದೇಶದಾದ್ಯಂತ ವ್ಯಾಪಕವಾಗಿ ಮಳೆಯಾಗಲಿದೆ. ಚಳಿಗಾಲ ಆರಂಭವಾದ ವೇಳೆಯಲ್ಲಿ ಕರ್ನಾಟಕದಲ್ಲಿ ಅಕಾಲಿಕ ಮಳೆಯಾಗುತ್ತಿತ್ತು.

ತಮಿಳುನಾಡು ಕರಾವಳಿ ತೀರಕ್ಕೆ ಮಾರುತಗಳು ದಾಳಿ ಮಾಡಲಿರುವುದರಿಂದ ಜನವರಿ 3ರಿಂದ ತಮಿಳುನಾಡಿನಾದ್ಯಂತ ಮಳೆ ಹೆಚ್ಚಾಗಲಿದೆ. ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ದಕ್ಷಿಣ ಆಂಧ್ರಪ್ರದೇಶದಾದ್ಯಂತ ವ್ಯಾಪಕವಾಗಿ ಮಳೆಯಾಗಲಿದೆ.

Weather And Rain Forecast: Dry weather Across State As On January 03

ಇನ್ನು ಕರಾವಳಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ಶನಿವಾರದಂದು ಆಂಧ್ರಪ್ರದೇಶದ ದಕ್ಷಿಣ ಕರಾವಳಿಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ, ಮುಂದಿನ ಎರಡು ದಿನಗಳ ಕಾಲ ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಪುದುಚೇರಿಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

ಆದರೆ ಮಳೆ ನಿಂತು ಈಗ ಚಳಿ ಶುರುವಾಗಿದೆ. ಆದರೆ ಈಗ ಹವಾಮಾನ ಇಲಾಖೆಯ ನೀಡಿರುವ ವರದಿಯ ಪ್ರಕಾರ ಜನವರಿ ಮೊದಲ ವಾರದಲ್ಲಿ ಹಿಂದೆಂದಿಗಿಂತಲೂ ಅಧಿಕ ಚಳಿ ರಾಜ್ಯದಲ್ಲಿ ಇರಲಿದೆಯಂತೆ. ಇದರ ನಡುವೆ ನೆರೆಯ ರಾಜ್ಯಗಳಾದ ತಮಿಳುನಾಡಿನಲ್ಲಿ ಅಕಾಲಿಕವಾಗಿ ಭಾರೀ ಮಳೆಯಾಗುತ್ತಿದೆ.

ಮಳೆಯ ಅಬ್ಬರಕ್ಕೆ ಚೆನ್ನೈನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಡಿಸೆಂಬರ್‌ನ ಬಹುಪಾಲು ಅವಧಿಯಲ್ಲಿ ತಮಿಳುನಾಡು ಕಡು ಬಿಸಿಲಿತ್ತು. ಆದರೆ, ಇಂದಿನಿಂದ ಭಾರೀ ಮಳೆ ಶುರುವಾಗಿದ್ದು, ಇನ್ನೊಂದು ವಾರ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ.

Weather And Rain Forecast: Dry weather Across State As On January 03

ಮಂಗಳವಾರ, ಬುಧವಾರದಂದು ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ಕಾರೈಕಾಲ್ ಮತ್ತು ಪುದುಚೇರಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆಯಿದೆ. ಚೆನ್ನೈನಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇನ್ನು ದಕ್ಷಿಣ ಭಾರತ ಮಾತ್ರವಲ್ಲದೇ ಉತ್ತರ ಭಾರತದಲ್ಲಿ ಶೀತಗಾಳಿ ಹೆಚ್ಚಾಗಲಿದ್ದು ಹಲವು ಪ್ರದೇಶಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಬಹುಮುಖ್ಯವಾಗಿ ಹರಿಯಾಣ ಮಹಾರಾಷ್ಟ್ರ ಮಧ್ಯಪ್ರದೇಶ ಉತ್ತರಪ್ರದೇಶ ರಾಜಸ್ಥಾನದಲ್ಲಿ ಶೀತಗಾಳಿ ಹಾಗೂ ಮಳೆ ಬೀಳಲಿದೆ. ಜನವರಿ 2 ರವರೆಗೆ ಪಂಜಾಬ್ ಹಾಗೂ ಹರಿಯಾಣ ಮತ್ತು ಚಂಡಿಗಡದಲ್ಲಿ ಹಗುರ ಮಳೆಯಾಗಲಿದೆ

Recommended Video

China ಈಗ ಗಡಿಯಲ್ಲಿ ಹೊಸ ಸೇತುವೆ ನಿರ್ಮಿಸಿದ , ಸೈನಿಕರೇ ಎಚ್ಚರ | Oneindia Kannada

English summary
Weather and rain forecast as on January 03 : Dry weather will prevail over Karnataka this week says IMD report.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X